ಮತ್ತೆ ಗಡಿ ವಿವಾದ : ಬೆಳಗಾವಿಯನ್ನ POKಗೆ ಹೋಲಿಸಿದ ಉದ್ಧವ್ ಠಾಕ್ರೆ!

By Suvarna NewsFirst Published Dec 20, 2019, 11:48 AM IST
Highlights

ನಿಪ್ಪಾಣಿ, ಬೆಳಗಾವಿ, ಕಾರವಾರವನ್ನು ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ ಎಂದ ಉದ್ಧವ್ ಠಾಕ್ರೆ|ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ|ಕರ್ನಾಟಕದಲ್ಲಿ ಮರಾಠಿ ಭಾಷಿಕರ ಮೇಲೆ ಭಾಷಾ ಅತ್ಯಾಚಾರ ನಡೆಯುತ್ತಿದೆ|ಗಡಿಭಾಗದ ಮರಾಠಿಗರು ಮಹಾರಾಷ್ಟ್ರಕ್ಕೆ ನಮ್ಮನ್ನ ಸೇರಿಸಿ ಅಂತ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ|
 

ಬೆಳಗಾವಿ[ಡಿ.20]: ರಾಜ್ಯದ ನಿಪ್ಪಾಣಿ, ಬೆಳಗಾವಿ, ಕಾರವಾರವನ್ನು ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ(ಪಾಕಿಸ್ತಾನ ಆಕ್ರಮಿತ ಕಾಶ್ಮೀರ) ಗೆ ಹೋಲಿಸುವ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿ  ಉದ್ಧವ್ ಠಾಕ್ರೆ ಅವರು ಗಡಿ ವಿವಾದವನ್ನ ಮತ್ತೊಮ್ಮೆ ಕೆದಕುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

"

ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಬೆಳಗಾವಿ, ಕಾರವಾರ, ನಿಪ್ಪಾಣಿಯನ್ನು POKಗೆ ಹೋಲಿಸಿದ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಉದ್ದೇಶಿಸಿ ಮಾತನಾಡಿದ ಸಿಎಂ ಉದ್ಧವ್ ಠಾಕ್ರೆ, ಪೌರತ್ವ ಕಾಯ್ದೆ ತಿದ್ದುಪಡಿ ಕುರಿತು ಮಾತನಾಡುವಾಗ ಗಡಿವಿವಾದವನ್ನ ಮತ್ತೊಮ್ಮ ಪ್ರಸ್ತಾಪ ಮಾಡುವ ಮೂಲಕ ವಿವಾದಕ್ಕೀಡಾಗಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಕರ್ನಾಟಕದಲ್ಲಿ ಮರಾಠಿ ಭಾಷಿಕರ ಮೇಲೆ ಭಾಷಾ ಅತ್ಯಾಚಾರ ನಡೆಯುತ್ತಿದೆ. ಗಡಿಭಾಗದ ಮರಾಠಿಗರು ಮಹಾರಾಷ್ಟ್ರಕ್ಕೆ ನಮ್ಮನ್ನ ಸೇರಿಸಿ ಅಂತ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕರ್ನಾಟಕದಲ್ಲೂ‌ ನಿಮ್ಮದೇ ಸರ್ಕಾರ ಇದೆ, ಯಡಿಯೂರಪ್ಪ ಬಹುಮತ ಸಾಬೀತು ಪಡಿಸಿದ್ದಾರೆ' ಕರ್ನಾಟಕದಲ್ಲಿರುವ ಮರಾಠಿಗರು ಹಿಂದೂಗಳಲ್ಲವೇ? ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಗೆ ಪ್ರಶ್ನಿಸಿದ್ದಾರೆ. 

ಗಡಿ ಭಾಗದ ಮರಾಠಿಗರ ಮೇಲೆ ಹೀಗೆ ದೌರ್ಜನ್ಯ ಮುಂದುವರೆದರೆ ನಿಪ್ಪಾಣಿ, ಬೆಳಗಾವಿ, ಕಾರವಾರವನ್ನು ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ ಎಂದು ಕರೆಯಬೇಕಾಗುತ್ತದೆ. ಕಾಶ್ಮೀರದ ಪಿಒಕೆ ರೀತಿ ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ ಆಗಿದೆ ಎಂದು ಹೇಳಿದ್ದಾರೆ.  ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. 

click me!