ಬೆಳಗಾವಿಯಲ್ಲಿ ಮರಾಠಿಗರಿಗೆ ಮಹಾರಾಷ್ಟ್ರ ಸರ್ಕಾರ ವೈದ್ಯಕೀಯ ನೆರವು

By Kannadaprabha News  |  First Published Jan 10, 2024, 12:55 PM IST

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಎಂಇಎಸ್ ಕಾರ್ಯಕರ್ತೆ ರಂಜನಾ ದೇಸಾಯಿ ಅವರು ಹೃದಯ ಶಸ್ತ್ರಚಿಕಿತ್ಸೆಗಾಗಿ ಡಿಸೆಂಬರ್ ತಿಂಗಳಲ್ಲಿ ಮಹಾರಾಷ್ಟ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ಮಧ್ಯವರ್ತಿ ಎಂಇಎಸ್ ಲೆಟರ್ ಹೆಡ್‌ನಲ್ಲಿ ಇವರ ಹೆಸರನ್ನು ವೈದ್ಯಕೀಯ ನೆರವಿಗಾಗಿ ಶಿಫಾರಸ್ಸು ಮಾಡಲಾಗಿತ್ತು. ಅದರಂತೆ ಇದೀಗ ಹೃದಯ ಶಸ್ತ್ರ ಚಿಕಿತ್ಸೆ ಮಾಡಿದ ಬೆಳಗಾವಿಯ ಅರಿಹಂತ ಆಸ್ಪತ್ರೆಗೆ ಮಹಾರಾಷ್ಟ್ರದಿಂದ ₹1ಲಕ್ಷ ಹಣ ಸಂದಾಯ ಮಾಡಲಾಗಿದೆ.

ಬೆಳಗಾವಿ(ಜ.10):  ಮಹಾರಾಷ್ಟ್ರ ಸರ್ಕಾರ ಕರ್ನಾಟಕ- ಮಹಾರಾಷ್ಟ್ರ ಗಡಿಭಾಗದಲ್ಲಿರುವ ಮರಾಠಿ ಭಾಷಿಕರನ್ನು ಗಮನದಲ್ಲಿಟ್ಟುಕೊಂಡು ಇದೀಗ ಸದ್ದಿಲ್ಲದೆ ವೈದ್ಯಕೀಯ ನೆರವು ನೀಡಲು ಮುಂದಾಗಿದೆ. ಖಾನಾಪುರ ತಾಲೂಕಿನ ಎಂಇಎಸ್ ಕಾರ್ಯಕರ್ತೆಯೊಬ್ಬರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಆರೋಗ್ಯ ಪರಿಹಾರ ನಿಧಿಯಡಿ 1 ಲಕ್ಷ ರು. ಅನ್ನು ಈಗಾಗಲೇ ಮಂಜೂರು ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಎಂಇಎಸ್ ಕಾರ್ಯಕರ್ತೆ ರಂಜನಾ ದೇಸಾಯಿ ಅವರು ಹೃದಯ ಶಸ್ತ್ರಚಿಕಿತ್ಸೆಗಾಗಿ ಡಿಸೆಂಬರ್ ತಿಂಗಳಲ್ಲಿ ಮಹಾರಾಷ್ಟ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ಮಧ್ಯವರ್ತಿ ಎಂಇಎಸ್ ಲೆಟರ್ ಹೆಡ್‌ನಲ್ಲಿ ಇವರ ಹೆಸರನ್ನು ವೈದ್ಯಕೀಯ ನೆರವಿಗಾಗಿ ಶಿಫಾರಸ್ಸು ಮಾಡಲಾಗಿತ್ತು. ಅದರಂತೆ ಇದೀಗ ಹೃದಯ ಶಸ್ತ್ರ ಚಿಕಿತ್ಸೆ ಮಾಡಿದ ಬೆಳಗಾವಿಯ ಅರಿಹಂತ ಆಸ್ಪತ್ರೆಗೆ ಮಹಾರಾಷ್ಟ್ರದಿಂದ ₹1ಲಕ್ಷ ಹಣ ಸಂದಾಯ ಮಾಡಲಾಗಿದೆ.

Tap to resize

Latest Videos

ಬೆಳಗಾವಿ ವಿವಾದ: ನನ್ನ ಮಾತನ್ನು ಸಕಾರಾತ್ಮಕತೆ ಅರ್ಥೈಸಿಕೊಳ್ಳಿ, ಸಚಿವೆ ಹೆಬ್ಬಾಳಕರ

ಗಡಿ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಮಹಾರಾಷ್ಟ್ರ ಸರ್ಕಾರ ಈಗಾಗಲೇ ಬೆಳಗಾವಿಯಲ್ಲಿ ಮರಾಠಿ ಭಾಷಿಕರನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ವಿಮೆ ಯೋಜನೆಗೆ ಅರ್ಜಿ ಸ್ವೀಕಾರ ಕಾರ್ಯವನ್ನೂ ಆರಂಭಿಸಿದೆ. ಇದರ ನಡುವೆಯೇ ಕರ್ನಾಟಕದ ನಿವಾಸಿಗೆ ಸಿಎಂ ಪರಿಹಾರ ನಿಧಿಯಿಂದ ಹಣ ನೀಡಿದೆ.

click me!