3 ದಿನಗಳಿಂದ ಇಲ್ಲಿಗೆ KSRTC ಬಸ್‌ ಸಂಚಾರ ನಿರ್ಬಂಧ

By Kannadaprabha NewsFirst Published Mar 16, 2021, 8:21 AM IST
Highlights

ರಾಜ್ಯದಿಂದ ಇಲ್ಲಿಗೆ ಸಂಚಾರ ಮಾಡುತ್ತಿದ್ದ ಬಸ್ ಸೇವೆ ಸ್ಥಗಿತವಾಗಿದೆ. ಇದರಿಂದ ಪ್ರಯಾಣಿಕರಿಗೆ ಅಷ್ಟೇ ಅಲ್ಲದೇ ಸಾರಿಗೆ ನಿಗಮಕ್ಕೂ ಭಾರಿ ನಷ್ಟ ಉಂಟಾಗಿದೆ. 

 ಬೆಳಗಾವಿ (ಮಾ.16):  ಶಿವಸೇನೆ ಪುಂಡರ ಪುಂಡಾಟಿಕೆ ಹಿನ್ನೆಲೆಯಲ್ಲಿ ಮೂರನೇ ದಿನವಾದ ಸೋಮವಾರವೂ ಕರ್ನಾಟಕ, ಮಹಾರಾಷ್ಟ್ರ ಉಭಯ ರಾಜ್ಯಗಳ ನಡುವಿನ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ  50 ಲಕ್ಷ ರು. ನಷ್ಟಉಂಟಾಗಿದೆ ಎಂದು ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಜಿ.ಮುಂಜಿ ತಿಳಿಸಿದ್ದಾರೆ.

ಕೊಲ್ಲಾಪುರದಲ್ಲಿ ಶಿವಸೇನೆ ಪುಂಡಾಟಿಕೆ ಹಿನ್ನೆಲೆಯಲ್ಲಿ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಉಭಯ ರಾಜ್ಯಗಳ ಪ್ರಯಾಣಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಈಗಾಗಲೇ ನಾವು ಕೊಲ್ಲಾಪುರ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನು ಸಂಪರ್ಕಿಸಿ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು.

ಬೆಳಗಾವಿಯಲ್ಲಿ ಶಿವಸೇನೆ ಏಟಿಗೆ ಕನ್ನಡಿಗರು ಎದುರೇಟು..! .

ಕೆಎಸ್‌ಆರ್‌ಟಿಸಿ ಬಸ್‌ಗಳು ಗಡಿಭಾಗ ನಿಪ್ಪಾಣಿಯವರೆಗೆ ಮಾತ್ರ ಸಂಚರಿಸುತ್ತಿವೆ. ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ಬಸ್‌ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಸಾಂಗ್ಲಿ, ಮಿರಜ, ಸೊಲ್ಲಾಪುರ ಮತ್ತಿತರ ಕಡೆಗಳಿಗೆ ಮಾತ್ರ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ಗಳು ಸಂಚರಿಸುತ್ತಿವೆ.

ಶಿವಸೇನೆ ಕಚೇರಿ ಮುಚ್ಚಲು ಕ್ರಮ ಕೈಗೊಳ್ಳಿ:

ಕರ್ನಾಟಕ ಹಾಗೂ ಕನ್ನಡಿಗರ ವಿರುದ್ಧವೇ ನಾಡದ್ರೋಹಿ ಚಟುವಟಿಕೆ ನಡೆಸುವ ಶಿವಸೇನೆಗೆ ಕರ್ನಾಟಕದ ನೆಲದಲ್ಲಿರುವ ಕಾರ್ಯಾಲಯ ನಡೆಸಲು ಅವಕಾಶ ನೀಡದೆ ಕಚೇರಿ ಮುಚ್ಚಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

ನಮ್ಮ ವಿರುದ್ಧವೇ ಪಿತೂರಿ ನಡೆಸುವ ಇಂತಹ ಸಂಘಟನೆಯ ವಾಹನಗಳು ನಮ್ಮ ಮುಂದೆಯೇ ನಾಮಫಲಕ ಹಾಕಿಕೊಂಡು ಸಂಚರಿಸಲು ಅವಕಾಶ ಮಾಡಿಕೊಡುವುದು ಎಷ್ಟುಸಮಂಜಸ? ಕೂಡಲೇ ಶಿವಸೇನೆಯ ಬೆಳಗಾವಿ ಕಾರ್ಯಾಲಯವನ್ನು ಮುಚ್ಚಿಸಬೇಕು ಮತ್ತು ಈ ಸಂಘಟನೆಯ ವಾಹನಗಳನ್ನು ಜಪ್ತಿ ಮಾಡಬೇಕೆಂದು ಆಗ್ರಹಿಸಿದರು.

click me!