* ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಕೇಂದ್ರದಿಂದ ಮಾರ್ಗದರ್ಶನ ನಿರೀಕ್ಷೆ
* ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ನಿಗದಿಯಾಗಿಲ್ಲ
* ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಜಯಗಳಿಸುವ ವಿಶ್ವಾಸ
ಹಾವೇರಿ(ಡಿ.11): ಬೆಳಗಾವಿ ಅಧಿವೇಶನದಲ್ಲಿ(Belagavi Session) ಸರ್ಕಾರದಿಂದ ಕಾನೂನು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಶ್ನೋತ್ತರ ಇರುತ್ತದೆ. ಪ್ರತಿಪಕ್ಷದವರು ಎತ್ತುವ ವಿಚಾರಗಳಿಗೆ ಸೂಕ್ತ ಉತ್ತರ ನೀಡಲು ಸಿದ್ಧರಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ತಿಳಿಸಿದರು.
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ(Vidhan Parishat Election) ಶುಕ್ರವಾರ ನಡೆದ ಚುನಾವಣೆಯಲ್ಲಿ ಶಿಗ್ಗಾಂವಿ(Shoggoan) ತಾಪಂ ಕಾರ್ಯಾಲಯದ ಮತಗಟ್ಟೆಯಲ್ಲಿ ಅವರು ಮತ(vote) ಚಲಾಯಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹದಾಯಿ(Mahadayi) ಕೇಸ್ ರೀ ಓಪನ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವು ರೀ ಓಪನ್ ಮಾಡಿಲ್ಲ. ಕೋರ್ಟ್‌ನಿಂದ ಸಮನ್ಸ್ ಬಂದಿದೆ. ಪ್ರಕರಣ ವಾಪಸ್ ಪಡೆಯುವ ಪ್ರಕ್ರಿಯೆ ನಡೆದಿದೆ ಎಂದು ಪ್ರತಿಕ್ರಿಯಿಸಿದರು.
ಬೊಮ್ಮಾಯಿ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ಕೋಡಿಹಳ್ಳಿ ಚಂದ್ರಶೇಖರ
ಹಕ್ಕಿಜ್ವರ ಮುನ್ನೆಚ್ಚರಿಕೆ ಕ್ರಮಕ್ಕೆ ಸಭೆ
ಕೇರಳದಲ್ಲಿ(Kerala) ಹಕ್ಕಿಜ್ವರ(Bird Flue) ಕಾಣಿಸಿಕೊಂಡಿರುವ ಬಗ್ಗೆ ರಾಜ್ಯದಲ್ಲಿ(Karnataka) ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಸಭೆ ನಡೆಸಲಾಗಿದ್ದು, ಸೂಕ್ತ ಲಸಿಕೆ, ಔಷಧಿಗಳ ಪೂರೈಕೆ ಸೇರಿದಂತೆ ಮಾರ್ಗಸೂಚಿಗಳನ್ನು ಪಾಲಿಸಲು ತಿಳಿಸಲಾಗಿದೆ. ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಕೇಂದ್ರದಿಂದ ಮಾರ್ಗದರ್ಶನವನ್ನು ನಿರೀಕ್ಷಿಸಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿಸಿದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡಿದ್ದೇನೆ. ಪಕ್ಷ ಸ್ಪರ್ಧಿಸಿರುವ ಎಲ್ಲ ಕಡೆ ನಮ್ಮ ಅಭ್ಯರ್ಥಿಗಳು ಜಯಗಳಿಸುವ ವಿಶ್ವಾಸವಿದೆ ಎಂದು ಸಿಎಂ ಬೊಮ್ಮಾಯಿ ಭರವಸೆ ವ್ಯಕ್ತಪಡಿಸಿದರು.
ಮತ್ತೊಂದು ರೈತ ಬಂಡಾಯಕ್ಕೂ ಸಿದ್ಧ: ಬೊಮ್ಮಾಯಿ ಸರ್ಕಾರಕ್ಕೆ ಸೊಬರದಮಠ ಎಚ್ಚರಿಕೆ
ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಮಹದಾಯಿ ಯೋಜನೆ ಜಾರಿ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಮತ್ತೊಂದು ರೈತ ಬಂಡಾಯ ಮಾಡುತ್ತೇವೆ ಎಂದು ರಾಜ್ಯ ರೈತ ಸೇನಾ ಸಂಘಟನೆ ಅಧ್ಯಕ್ಷ ವೀರೇಶ ಸೊಬರದಮಠ(Veeresh Sobaradamatha) ಎಚ್ಚರಿಸಿದ್ದಾರೆ.
ನರಗುಂದ ಪಟ್ಟಣದ ಎ.ಪಿ. ಪಾಟೀಲ ಗೋದಾಮಿನಲ್ಲಿ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಸಭೆಯಲ್ಲಿ(Farmers Meeting) ಮಾತನಾಡಿದ ಅವರು, ಕಳೆದ 7 ವರ್ಷದಿಂದ ಮಹದಾಯಿಗಾಗಿ ಹೋರಾಟ ಮಾಡುತ್ತಿದ್ದೇವೆ. ರಾಜ್ಯ ಸರ್ಕಾರ(Government of Karnataka) ಮಹದಾಯಿ ಹೋರಾಟವನ್ನು ಹಗುರವಾಗಿ ಪರಿಗಣಿಸಿದರೆ ಮುಂದಿನ ದಿನಗಳಲ್ಲಿ ಮತ್ತೊಂದು ನರಗುಂದದಲ್ಲಿ(Nargund) ರೈತ ಬಂಡಾಯ ಮಾಡಲು ಸಿದ್ಧ ಎಂದರು.
ರೈತ ಮುಖಂಡ ಶಿವಪ್ಪ ಹೊರಕೇರಿ ಮಾತನಾಡಿ, ಈ ಹಿಂದೆ ಮಹದಾಯಿ ಕಳಸಾ- ಬಂಡೂರಿ(Kalasa Banduri) ಯೋಜನೆ ಜಾರಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಹೋರಾಟ ಮಾಡಿದ್ದರು. ಅದನ್ನು ಮರೆಯಬಾರದು. ಆದಷ್ಟು ಬೇಗ ಯೋಜನೆ ಜಾರಿಗೆ ಮುಖ್ಯಮಂತ್ರಿಗಳು ಮುಂದಾಗಬೇಕೆಂದು ಮನವಿ ಮಾಡಿದರು.
ಹನಮಂತ ಮಡಿವಾಳರ, ಯಲ್ಲಪ್ಪ ಸಾಬಳೆ, ಎ.ಪಿ. ಪಾಟೀಲ, ವೀರಬಸಪ್ಪ ಹೂಗಾರ, ಎಸ್.ಬಿ. ಜೋಗಣ್ಣವರ, ಪರಶುರಾಮ ಜಂಬಗಿ, ಸುಭಾಸ ಗಿರಿಯಣ್ಣವರ, ಹನಮಂತ ಸರನಾಯ್ಕರ, ಅರ್ಜುನ ಮಾನೆ, ನಾಗರತ್ನ ಸವಳಭಾವಿ, ಅನಸವ್ವ ಶಿಂದೆ, ಮಲ್ಲವ್ವ ಭೋವಿ, ಬಸವ್ವ ಪೂಜಾರ, ವಾಸು ಚವಾಣ, ರಾಮಚಂದ್ರ ಸಾಬಳೆ, ಎಲ್.ಬಿ. ಮನನೇಕೊಪ್ಪ, ಪರಮೇಶ ಅಣ್ಣಿಗೇರಿ, ಶಿವಪ್ಪ ಸಾತಣ್ಣವರ, ಯಲ್ಲಪ್ಪ ಚಲವಣ್ಣವರ, ವೆಂಕಪ್ಪ ಹುಜರತ್ತಿ ಇದ್ದರು.
'ರಾಜಕಾರಣಿಗಳ ನಿರ್ಲಕ್ಷ್ಯದಿಂದ ಮಹದಾಯಿ ಯೋಜನೆಗೆ ಹಿನ್ನಡೆ'
ಕಳಸಾ-ಬಂಡೂರಿಗಾಗಿ ಸಿಎಂ ಭೇಟಿಯಾದ ರೈತರು
ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಪಕ್ಷಾತೀತ ರೈತ ಹೋರಾಟ ಸಮಿತಿಯ ರೈತರು ಅ.06 ರಂದು ಬೆಂಗಳೂರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದರು.
ಜವಳಿ, ಕಬ್ಬು ಹಾಗೂ ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ರೈತ ಮುಖಂಡರು, ಮಹದಾಯಿ ನ್ಯಾಯಾಧಿಕರಣದ ತೀರ್ಪು ಬಂದು 3 ವರ್ಷಗಳು ಮುಗಿದಿವೆ. ಆದರೂ ಈವರೆಗೂ ಮಹದಾಯಿ ಕೆಲಸ ಶುರುವಾಗಿಲ್ಲ. ಕೂಡಲೇ ಅನುಷ್ಠಾನ ಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದರು.