
ಕೊಡಗು: ಪ್ರವಾಸಿಗರ ನೆಚ್ಚಿನ ತಾಣ ಕೊಡಗಿನಿಂದ ಬಿಗ್ ಅಲರ್ಟ್ ಸಿಕ್ಕಿದೆ. ಇಲ್ಲಿನ ಪ್ರಸಿದ್ಧ ಪ್ರವಾಸಿಗರ ಕೇಂದ್ರವಾಗಿರುವ ರಾಜಾಸೀಟು ಒಂದು ತಿಂಗಳ ಕಾಲ ಬಂದ್ ಆಗಲಿದೆ. ಹೌದು, ಈ ಕುರಿತಂತೆ ಕೊಡಗು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ಪ್ರತಿ ನಿತ್ಯ ಕೊಡಗಿನ ರಾಜಾಸೀಟಿಗೆ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಸದ್ಯ ರಾಜಾಸೀಟು ಬಂದ್ ಮಾಡಿ ಕೊಡಗು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಇದರಂತೆ ಮಡಿಕೇರಿಯಲ್ಲಿ ಇರುವ ರಾಜಾಸೀಟು ನವೆಂಬರ್ 16 ರಿಂದ ಡಿಸೆಂಬರ್ 15 ರವರೆಗೆ ರಾಜಾಸೀಟು ಬಂದ್ ಆಗಲಿದೆ.
ಮುಂದಿನ ಒಂದು ತಿಂಗಳ ಕಾಲ ರಾಜಾಸೀಟು ಪ್ರವಾಸಿಗರಿಗೆ ಬಂದ್ ಆಗಲಿದೆ. ಸದ್ಯ ರಾಜಾಸೀಟಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ನಡೆಯುತ್ತಿರುವ ಹೆದ್ದಾರಿ ಹೊರತುಪಡಿಸಿದರೆ, ರಾಜಾಸೀಟಿಗೆ ಸಂಪರ್ಕ ಕಲ್ಪಿಸಲು ಬೇರೆ ಯಾವುದೇ ಮಾರ್ಗ ಇಲ್ಲ ಕಾರಣ ಜಿಲ್ಲಾಧಿಕಾರಿಗಳು ರಾಜಾಸೀಟು ಬಂದ್ ಮಾಡಿ ಆದೇಶ ಹೊರಡಿಸಿದ್ದಾರೆ.
ಮಂಗೇರಿರ ಮುತ್ತಣ್ಣ ವೃತ್ತದಿಂದ ರಾಜಾಸೀಟು, ಚೌಟಿ ಮಾರಿಯಮ್ಮ ದೇವಾಲಯ, ಎಲ್ಐಸಿ ಮಾರ್ಗವಾಗಿ ಹಲವು ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಕಾಮಗಾರಿ ನಡೆಯುತ್ತಿದೆ. ಜಿಲ್ಲಾಧಿಕಾರಿ ಕಚೇರಿ ಎಂಟ್ರಿಯಿಂದ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದವರೆಗೆ ರಸ್ತೆ ಕಾಮಗಾರಿ ಆರಂಭವಾಗಿದೆ. ಈ ಮಾರ್ಗದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ದೇಶ ನೀಡಿದ್ದಾರೆ.
ರಾಜಾಸೀಟು ಬಿಟ್ಟು ಜಿಲ್ಲೆಯ ಉಳಿದ ಪ್ರವಾಸಿ ತಾಣಗಳಲ್ಲಿ ಯಥಾಸ್ಥಿತಿ ಮುಂದುವರಿಯಲಿದೆ. ಸದ್ಯ ರಾಜಾಸೀಟಿಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಸುಮಾರು ಮೂರುವರೆ ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ಆರಂಭಿಸಲಾಗಿದೆ. ಕಾಂಕ್ರೀಟ್ ರಸ್ತೆ ಜೊತೆಗೆ ಪಾದಚಾರಿ ಮಾರ್ಗ, ವಿದ್ಯುತೀಕರಣ ಕಾಮಗಾರಿಗಳು ಕೂಡ ನಡೆಯುತ್ತಿದೆ. ನವೆಂಬರ್ ನಿಂದ ಜನವರಿ ಕೊನೆಯವರೆಗೆ ಅತೀ ಹೆಚ್ಚು ಪ್ರವಾಸಿಗರು ರಾಜಾಸೀಟಿಗೆ ಭೇಟಿ ನೀಡುತ್ತಾರೆ. ಇದೇ ಸಂದರ್ಭದಲ್ಲಿ ರಾಜಾಸೀಟು ಪ್ರವಾಸಿ ತಾಣ ಬಂದ್ ಮಾಡಿ ಜಿಲ್ಲಾಡಳಿತ ಆದೇಶಿಸಿರುವುದು ಸಾವಿರಾರು ಪ್ರವಾಸಿಗರಿಗೆ ನಿರಾಸೆಯನ್ನು ಉಂಟು ಮಾಡುವ ಸಾಧ್ಯತೆ ಇದೆ.
ಕೊಡಗು ಗೌಡ ಯುವ ವೇದಿಕೆ ವತಿಯಿಂದ 4ನೇ ಆವೃತ್ತಿಯ ಗೌಡ ಪ್ರೀಮಿಯರ್‌ಲೀಗ್ (ಜಿಪಿಎಲ್) ಲೆದರ್‌ಬಾಲ್ ಟಿ-10 ಕ್ರಿಕೆಟ್ ಪಂದ್ಯಾವಳಿ ಡಿ.21ರಿಂದ 27ರವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಕ್ಕಲಿಗ ಗೌಡ ಜನಾಂಗದವರಿಗಾಗಿ ಆಯೋಜಿಸಲಾಗುತ್ತಿರುವ ಈ ಪಂದ್ಯಾವಳಿಯಲ್ಲಿ ಒಟ್ಟು 8 ಫ್ರಾಂಚೈಸಿಗಳು ಪಾಲ್ಗೊಳ್ಳಲಿವೆ ಎಂದು ವೇದಿಕೆಯ ಪ್ರಧಾನ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಕೊಡಗು ಗೌಡ ಯುವ ವೇದಿಕೆ ಜನಾಂಗದ ಯುವಜನರಿಗೆ ಕ್ರೀಡಾ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿವಿಧ ಕ್ರೀಡಾ ಕೂಟ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. 2023ರಲ್ಲಿ ಮೊದಲ ಬಾರಿಗೆ ಮನರಂಜನಾ ಕ್ರಿಕೆಟ್‌ನಿಂದ ವೃತ್ತಿಪರ ಕ್ರಿಕೆಟ್ ನತ್ತ ಯುವ ಪ್ರತಿಭೆಗಳನ್ನು ಕೊಂಡೊಯ್ಯುವ ಉದ್ದೇಶದಿಂದ ಲೆದರ್‌ಬಾಲ್ ಕ್ರಿಕೆಟ್ ಪರಿಚಯಿಸಲಾಯಿತು. ಕಳೆದ ಮೂರು ವರ್ಷಗಳಿಂದ ಪಂದ್ಯಾವಳಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು, ಇದೀಗ ಗ್ರಾಮೀಣ ಪ್ರದೇಶಗಳಲ್ಲಿಯೂ ಲೆದರ್ ಬಾಲ್ ಕ್ರಿಕೆಟ್‌ಗೆ ಅಗತ್ಯ ಮೂಲ ಸೌಕರ್ಯಗಳು ರೂಪುಗೊಳ್ಳುತ್ತಿವೆ ಎಂದರು.
ಪಂದ್ಯಾವಳಿಯ ವಿಜೇತ ತಂಡಕ್ಕೆ ಒಂದು ಲಕ್ಷ ರು. ನಗದು ಹಾಗೂ ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ 60 ಸಾವಿರ ರು. ನಗದು ಬಹುಮಾನ ನೀಡಲಾಗುವುದು. ಜಿಪಿಎಲ್ ಗೌಡ ಪ್ರೀಮಿಯರ್‌ಲೀಗ್ ಲೆದರ್‌ಬಾಲ್ ಟಿ-10 ಕ್ರಿಕೆಟ್ ಪಂದ್ಯಾವಳಿಗೆ ಆಟಗಾರರ ನೋಂದಣಿ ಪ್ರಕ್ರಿಯೆ ಆಫ್‌ಲೈನ್ ಮತ್ತು ಆನ್‌ಲೈನ್ ಮೂಲಕ ಆರಂಭಗೊಂಡಿದ್ದು, ನ. 25 ಕೊನೆಯ ದಿನವಾಗಿದೆ.