Kolar: ಯೋಗಾಭ್ಯಾಸ ದಿನನಿತ್ಯ ಬದುಕಿನ ಭಾಗವಾಗಲಿ: ಸಂಸದ ಮುನಿಸ್ವಾಮಿ

By Govindaraj S  |  First Published Sep 11, 2022, 12:26 PM IST

ಜಿಲ್ಲೆಯ ಯುವಜನತೆಯು ಹೆಚ್ಚಿನ ಸಂಖ್ಯೆಯಲ್ಲಿ ಯುವೋತ್ಸವದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಸಂಸದ ಎಸ್‌.ಮುನಿಸ್ವಾಮಿ ಮನವಿ ಮಾಡಿದರು. 


ಕೋಲಾರ (ಸೆ.11): ಜಿಲ್ಲೆಯ ಯುವಜನತೆಯು ಹೆಚ್ಚಿನ ಸಂಖ್ಯೆಯಲ್ಲಿ ಯುವೋತ್ಸವದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಸಂಸದ ಎಸ್‌.ಮುನಿಸ್ವಾಮಿ ಮನವಿ ಮಾಡಿದರು. ಜೂನಿಯರ್‌ ಕಾಲೇಜು ಮೈದಾನದಲ್ಲಿ ಯುವೋತ್ಸವ 2022, ಜನಪರ ಉತ್ಸವ ಹಾಗೂ ಆಯುಷ್‌ ಆರೋಗ್ಯ ಮೇಳದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಬಾರಿಯ ಯೋಗ ದಿನಾಚರಣೆ ಕೋಲಾರದ ಶತಶೃಂಗ ಬೆಟ್ಟದಲ್ಲಿ ಮಕ್ಕಳೊಂದಿಗೆ ವಿಶ್ವ ಯೋಗ ದಿನಾಚರಣೆ ಆಚರಿಸಿರುವುದು ಹೆಮ್ಮೆಯ ಸಂಗತಿ ಎಂದರು.

ತ್ರಿವರ್ಣ ಧ್ವಜ ಲಿಮ್ಕಾ ದಾಖಲೆ: ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಸ್ವಾತಂತ್ರ ದಿನಾಚರಣೆಯಲ್ಲಿ ದೇಶದಲ್ಲೇ ಬೃಹತ್‌ ತ್ರಿವರ್ಣ ಧ್ವಜ ಪ್ರದರ್ಶಿಸಿ ಲಿಮ್ಕಾ ದಾಖಲೆ ಮಾಡಿರುವುದಕ್ಕೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮನ್‌ಕಿಬಾತ್‌ ಕಾರ್ಯಕ್ರಮದಲ್ಲಿ ತಿಳಿಸಿರುವುದು ಜಿಲ್ಲೆಯ ಪ್ರತಿಯೊಬ್ಬರಿಗೂ ಹೆಮ್ಮೆಯ ವಿಷಯವಾಗಿದೆ. ನಮ್ಮ ದಿನನಿತ್ಯದ ಜೀವನದಲ್ಲಿ ಯೋಗಾಭ್ಯಾಸ ಮಾಡುವುದರಿಂದ ನಮ್ಮ ಆರೋಗ್ಯ ಸದೃಢಗೊಳಿಸಿಕೊಳ್ಳಬಹುದು ಎಂದು ತಿಳಿಸಿದರು.

Tap to resize

Latest Videos

ಭರವಸೆ ಈಡೇರಿಸದೇ ಬಿಜೆಪಿ ಜನಾಕ್ರೋಶಕ್ಕೆ ತುತ್ತಾಗಿದೆ: ಉಗ್ರಪ್ಪ ಟೀಕೆ

ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಮಾತನಾಡಿ, ಜಿಲ್ಲೆಯಲ್ಲಿ ಎರಡು ದಿನ ಯುವೋತ್ಸವ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ ಆಹಾರ ಮೇಳ ಹಾಗೂ ವಿವಿಧ ಇಲಾಖೆಯಿಂದ ಮಳಿಗೆಗಳನ್ನು ಏರ್ಪಡಿಸಲಾಗಿದೆ. ಜಿಲ್ಲೆಯ ಸಾರ್ವಜನಿಕರು ಹಾಗೂ ಯುವಜನತೆಯು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಜಿಲ್ಲೆಯಲ್ಲಿ ನಡೆಯಲಿರುವ ಯೋಗಥಾನ್‌ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಿಕೊಂಡು ಎಲ್ಲರೂ ಭಾಗವಹಿಸಬೇಕು ಎಂದು ತಿಳಿಸಿದರು.

ಮೇಳದಲ್ಲಿ ಆರೋಗ್ಯ ಶಿಬಿರ: ಆಯುಷ್‌ ಆರೋಗ್ಯ ಮೇಳದಲ್ಲಿ ಸಾರ್ವಜನಿಕರು ರಕ್ತದೊತ್ತಡ, ಮಧುಮೇಹ ಸೇರಿದಂತೆ ಇತರೆ ರೋಗಗಳ ಪರೀಕ್ಷೆ ಹಾಗೂ ಚಿಕಿತ್ಸೆ ಪಡೆಯಲು ಆಯೋಜಿಸಲಾಗಿದೆ. ಕನ್ನಡ ಮತ್ತು ಸಂಸ್ಕತ್ರೃತಿ ಇಲಾಖೆಯಿಂದ ಜನಪರ ಉತ್ಸವದಲ್ಲಿ ಕಲಾ ತಂಡಗಳಾದ ಡೊಳ್ಳು ಕುಣಿತ, ತಮಟೆ ವಾದ್ಯ, ಗಾರುಡಿ ಗೊಂಬೆ, ಕೀಲುಕುದುರೆ, ಚಕ್ಕೆ ಕೋಲಾಟ, ಕಾವಡಿ ನೃತ್ಯ, ವೀರಗಾಸೆ ಹಾಗೂ ಜಿಲ್ಲೆಯ ಹೆಸರಾಂತ ಜಾನಪದ ಕಲಾವಿದರಿಂದ ಸುಮಧುರ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. 

ಆರ್ಯುವೇದ ತಜ್ಞ ಸಂತೋಷ ಭಾರತಿ ಗುರೂಜಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್‌.ನರೇಂದ್ರಬಾಬು, ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಜಿ.ಸುರೇಶ್‌ ಬಾಬು, ಜಿಲ್ಲಾ ಆಯುಷ್‌ ಅಧಿಕಾರಿ ರಾಘವೇಂದ್ರ ಶೆಟ್ಟಿಗಾರ್‌ ಉಪಸ್ಥಿತರಿದ್ದರು.

ಶಿಕ್ಷಕರು ದೇಶ ಕಟ್ಟುವ ಶಿಲ್ಪಿಗಳಾಗಬೇಕು: ಶಿಕ್ಷಕರು ಮೌಲ್ಯ, ಗುಣಮಟ್ಟಉಳಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಿ ಇತಿಹಾಸದಲ್ಲಿ ಉಳಿಯುವಂತಹ ಕೆಲಸ ಮಾಡಿ ದೇಶ,ಸಮಾಜ ಕಟ್ಟುವ ಸದೃಢ ಮಾನವ ಸಂಪನ್ಮೂಲ ಸಿದ್ದಪಡಿಸುವ ಶಿಲ್ಪಿಗಳಾಗಿ ಎಂದು ಸಂಸದ ಎಸ್‌.ಮುನಿಸ್ವಾಮಿ ಕರೆ ನೀಡಿದರು. ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ರಂಗಮಂದಿರದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಅವರಿಗೆ ಗುರುವಿನ ಮಾರ್ಗದರ್ಶನ ಬೇಕೇಬೇಕು, ಮಕ್ಕಳಲ್ಲಿ ಚೈತನ್ಯ ತುಂಬಿ ಅವರನ್ನು ಸಿದ್ದಗೊಳಿಸುವ ನಿಜವಾರ ಹೀರೋಗಳು ಶಿಕ್ಷಕರು ಎಂದ ಅವರು, ಪ್ರತಿಯೊಬ್ಬರಿಗೂ ಗುರುಬಲ ಇದ್ದರೆ ಮಾತ್ರವೇ ಅವರು ಸಾಧಕರಾಗಲು ಸಾಧ್ಯ ಎಂದರು.

Heavy Rain: ಕೋಲಾರದಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಮಳೆರಾಯ

ಜಿಲ್ಲೆಯ 500 ಶಾಲೆಗಳ ದುಸ್ಥಿತಿ: ಜಿಲ್ಲೆಯ 500ಕ್ಕೂ ಹೆಚ್ಚು ಶಾಲೆಗಳು ಇತ್ತೀಚಿನ ಮಳೆಯಿಂದ ಸೋರುತ್ತಿವೆ, ಇತ್ತೀಚೆಗೆ ನಡೆದ ದಿಶಾ ಸಮಿತಿ ಸಭೆಯಲ್ಲಿ ಶಿಕ್ಷಣ ಹಾಗೂ ಶಾಲೆಗಳಿಗೆ ಒತ್ತು ನೀಡಲಾಗಿದೆ ಶಾಲೆಗಳ ಅಭಿವೃದ್ದಿಗೆ ಸರ್ಕಾರದ ಅನುದಾನದ ಜತೆಗೆ ವಿವಿಧ ಕಂಪನಿಗಳ ಸಿಎಸ್‌ಆರ್‌ ನಿಧಿ ಪಡೆಯಲು ಅಗತ್ಯ ಕ್ರಿಯಾಯೋಜನೆ ತಯಾರಿಸಿಕೊಡಿ ಅನುದಾನ ಒದಗಿಸುವುದಾಗಿ ತಿಳಿಸಿದರು. ಚೆನ್ನೈ ಕಾರಿಡಾರ್‌ ಬರುತ್ತಿದೆ ಇದರಿಂದ ಕೈಗಾರಿಕೆಗಳ ಅಭಿವೃದ್ದಿಯಾಗಿ ನಿರುದ್ಯೊಗ ನಿವಾರಣೆಯಾಗುತ್ತದೆ ಎಂದ ವರು ಅಮೃತ ಸರೋವರ ಯೋಜನೆಯಡಿ ಜಿಲ್ಲೆಯಲ್ಲಿ ಕೆರೆಗಳ ಅಭಿವೃದ್ದಿಗೆ 44 ಕೋಟಿ ಖರ್ಚು ಮಾಡಲಾಗುವುದು ಎಂದರು.

click me!