ಇನ್ಮುಂದೆ ಪಂಚೆ ಧರಿಸಿದವರ ತಡೆದರೆ ಮಾಲ್‌ ಲೈಸನ್ಸ್‌ ರದ್ದು..!

Published : Aug 03, 2024, 12:11 PM ISTUpdated : Aug 05, 2024, 02:36 PM IST
ಇನ್ಮುಂದೆ ಪಂಚೆ ಧರಿಸಿದವರ ತಡೆದರೆ ಮಾಲ್‌ ಲೈಸನ್ಸ್‌ ರದ್ದು..!

ಸಾರಾಂಶ

ಬೆಂಗಳೂರಿನ ಮಾಲ್, ಸೂಪರ್‌ಮಾರ್ಕೆಟ್ ಹಾಗೂ ಅಂಗಡಿಗಳಿಗೆ ಆಗಮಿಸುವ ಸಾರ್ವಜನಿಕರು ಧರಿಸಿರುವ ಉಡುಪಿನ ಆಧಾರದ ಮೇಲೆ ಪ್ರವೇಶ ನಿರಾಕರಿಸದಂತೆ ತಮ್ಮ ಭದ್ರತಾ ಸಿಬ್ಬಂದಿಗೆ ಸೂಕ್ತ ನಿರ್ದೇಶನ ಮತ್ತು ಮಾರ್ಗದರ್ಶನ ಮಾಡಬೇಕೆಂದು ತಿಳಿಸಿದ ಬಿಬಿಎಂಪಿ   

ಬೆಂಗಳೂರು(ಆ.03):  ಪಂಚೆ ಧರಿಸಿ, ತಲೆಗೆ ಪೇಟ ಸುತ್ತಿಕೊಂಡು ಆಗಮಿ ಸಿದ್ದ ರೈತರೊಬ್ಬರನ್ನು ಒಳಗೆ ಬಡದ ಘಟನೆ ಬೆನ್ನಲ್ಲೇ ಇದೀಗ ಬಿಬಿಎಂಪಿಯು ರಾಜಧಾನಿ ಬೆಂಗಳೂರಿನ ಎಲ್ಲಾ ಮಾಲ್, ಸೂಪರ್ ಮಾರ್ಕೆಟ್ ಸೇರಿದಂತೆ ಅಂಗಡಿಗಳಿಗೆ ಮಾರ್ಗಸೂಚಿ ರಚಿಸಿದೆ. ಮುಂದಿನ ದಿನಗಳಲ್ಲಿ ವಂಚ ಮಾದರಿಯ ಘಟನೆ ಮರುಕಳಿಸದಂತೆ ಕ್ರಮಕ್ಕೆ ಮುಂದಾಗಿದೆ.

ಕಳೆದ ಜು.16ರಂದು ಹಾವೇರಿ ಮೂಲದ ಪಂಜೆ ಧರಿಸಿ ಬಂದಿದ್ದ ರೈತರೊಬ್ಬರಿಗೆ ಮಾಗಡಿ ರಸ್ತೆಯ 'ಜಿ.ಟಿ. ವರ್ಲ್ಡ್ ಮಾಲ್'ನಲ್ಲಿ ಸಿನಿಮಾ ನೋಡಲು ಬಿಡದೇ ಅವಮಾನಿಸಿದ ಘಟನೆ ನಡೆದಿತ್ತು. ಈ ಬಗ್ಗೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ವಿಧಾನಸಭೆಯಲ್ಲೂ ಪಕ್ಷಾತೀತವಾಗಿ ಸದಸ್ಯರು ಖಂಡಿಸಿ ಮಾಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯು ಆಸ್ತಿ ತೆರಿಗೆ ಬಾಕಿ ಕಾರಣ ನೀಡಿ ಮಾಲ್ ಸೀಜ್ ಮಾಡಿತ್ತು. ಘಟನೆಯ ಹಿನ್ನೆಲೆಯಲ್ಲಿ ಮಾಲ್‌ಗಳಿಗೆ ಮಾರ್ಗಸೂಚಿ ರಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವರು ವಿಧಾನ ಸಭೆಯಲ್ಲಿ ಹೇಳಿದ್ದರು. ಅದರಂತೆ ಇದೀಗ ಬಿಬಿಎಂ ಪಿಯು ಹಲವು ಅಂಶಗಳನ್ನು ಒಳಗೊಂಡ ಮಾರ್ಗಸೂಚಿ ರಚಿಸಿ ಆದೇಶಿಸಿದೆ.

ಬೆಂಗಳೂರು: ಪಂಚೆ ಹಾಕೊಂಡು ಬಂದಿದ್ದಕ್ಕೆ ಮಾಲ್‌ಗೆ ನೋ ಎಂಟ್ರಿ, ರೈತನನ್ನ ಹೊರಗಡೆ ಕೂಡಿಸಿದ ಸಿಬ್ಬಂದಿ..!

ಜಾತಿ, ಜನಾಂಗ ಆಧರಿಸಿ ಮಾಲಲ್ಲಿ ತಾರತಮ್ಯ ಮಾಡುವಂತಿಲ್ಲ.

ಬಿಬಿಎಂಪಿಯ ಮಾರ್ಗಸೂಚಿಯಲ್ಲಿ ಭಾರತೀಯ ಸಂವಿಧಾನದ ವಿಧಿ 14, 19, 21 ಹಾಗೂ 25 ಅನ್ನು ಗಣನೆಗೆ ತೆಗೆದುಕೊಂಡು ಮತ್ತು ಆರ್ಟಿ ಕಲ್ 15(1), 12)ರಲ್ಲಿ ಭಾರತದ ಪ್ರತಿಯೊಬ್ಬ ನಾಗರಿಕರಿಗೂ ಸಾರ್ವಜನಿಕ ಪ್ರದೇಶಗಳಿಗೆ ಪ್ರವೇ ಶಿಸುವ ಮತ್ತು ಸಾಮಾಜಿಕ ಸಮಾನತೆಯ ಹಕ್ಕನ್ನು ಖಾತ್ರಿ ಪಡಿಸಲಾಗಿದೆ. ಅದು ಜಾತಿ, ಧರ್ಮ, ಭಾಷೆ, ಜನಾಂಗ, ಧರ್ಮ, ಉಡುಪು ಮತ್ತು ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯ ಮಾಡುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ. ಅದನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಿದೆ ಎಂದು ಬಿಬಿಎಂಪಿ ತಿಳಿಸಲಾಗಿದೆ.

ಸಿಬ್ಬಂದಿಗೆ ಮಾರ್ಗದರ್ಶನ ನೀಡಿ

ನಗರದ ಮಾಲ್, ಸೂಪರ್‌ಮಾರ್ಕೆಟ್ ಹಾಗೂ ಅಂಗಡಿಗಳಿಗೆ ಆಗಮಿಸುವ ಸಾರ್ವಜನಿಕರು ಧರಿಸಿರುವ ಉಡುಪಿನ ಆಧಾರದ ಮೇಲೆ ಪ್ರವೇಶ ನಿರಾಕರಿಸದಂತೆ ತಮ್ಮ ಭದ್ರತಾ ಸಿಬ್ಬಂದಿಗೆ ಸೂಕ್ತ  ನಿರ್ದೇಶನ ಮತ್ತು ಮಾರ್ಗದರ್ಶನ ಮಾಡಬೇಕೆಂದು ಬಿಬಿಎಂಪಿ ತಿಳಿಸಿದೆ.

ಪಂಚೆಯುಟ್ಟ ರೈತನಿಗೆ ಪ್ರವೇಶ ನಿರಾಕರಸಿ ಅವಮಾನಿಸಿದ ಜಿಟಿ ಮಾಲ್ ಸಿಬ್ಬದಿಯಿಂದ ಕೈಮುಗಿದು ಕ್ಷಮೆ!

ಉದ್ದಿಮೆ ಪರವಾನಗಿ ರದ್ದು

ಉಡುವು ಆಧಾರದಲ್ಲಿ ಪ್ರವೇಶ ನಿರಾಕರಿಸಿದ ಘಟನೆ ಮತ್ತೆ ತಮ್ಮ ಮಾಲ್, ಸೂಪರ್ ಮಾರ್ಕೆಟ್ ಹಾಗೂ ಅಂಗಡಿಗಳನ್ನು ಮರುಕಳಿಸದಂತೆ ಕಬ್ಬು ನಿಟ್ಟಾಗಿ ಕ್ರಮ ವಹಿಸಬೇಕು. ಒಂದು ವೇಳೆ ಘಟನೆ ಮರುಕಳಿಸಿದರೆ, ಸಂವಿಧಾನ ಹಕ್ಕು ಹಾಗೂ ಮಾನದ ಹಕ್ಕು ಉಲ್ಲಂಘಿಸಿದ ಅಪರಾಧ ಎಂದು ಪರಿಗಣಿಸಿ అదేమ ಪರವಾನಗಿ ರಮಗೊಳಿಸಲಾಗುವುದು. ಜತೆಗೆ, ತಮ್ಮ ಉದ್ದಿಮೆಯನ್ನು ನಿರ್ಧಾ ಕ್ಷಿಣ್ಯವಾಗಿ ಸೀಜ್ ಮಾಡಲಾಗುವುದು ಎಂದು ಎಚ್ಚರಿಸಿದೆ.

ದೂರು ಬಂದರೆ ಐಪಿಸಿ ಅಡಿ ಕ್ರಮ

ಅಷ್ಟೇ ಅಲ್ಲದೇ, ಮಾಲ್, ಸೂಪರ್ ಮಾರ್ಕೆಟ್ ಹಾಗೂ ಅಂಗಡಿ ಮಾಲೀಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಕಾನೂನು ಕ್ರಮ ಜರುಗಿಸ ಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಹೊರಡಿಸಿರುವ ಮಾರ್ಗಸೂಚಿ ಆದೇಶದಲ್ಲಿ ಉಲ್ಲಖಿಸಲಾಗಿದೆ.

PREV
Read more Articles on
click me!

Recommended Stories

ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ
ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!