ಮಲ್ಲೇಶ್ವರ ಆಟದ ಮೈದಾನ ದುರಂತ: ಮೃತ ಬಾಲಕನ ಕುಟುಂಬಕ್ಕೆ ₹10 ಲಕ್ಷ ಚೆಕ್ ಕೊಟ್ಟ ಡಿಸಿಎಂ

By Sathish Kumar KHFirst Published Sep 25, 2024, 4:33 PM IST
Highlights

ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಮೃತಪಟ್ಟ ಬಾಲಕ ನಿರಂಜನ್ ಕುಟುಂಬಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ₹10 ಲಕ್ಷ ಪರಿಹಾರದ ಚೆಕ್ ವಿತರಿಸಿದರು. ಬಿಬಿಎಂಪಿ ಮತ್ತು ಕಾಂಗ್ರೆಸ್ ಪಕ್ಷದಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗಿದೆ.

ಬೆಂಗಳೂರು (ಸೆ.25) : ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಮೃತಪಟ್ಟ ಬಾಲಕ ನಿರಂಜನ್ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಪೋಷಕರಿಗೆ ₹10 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿದರು.

ಮಲ್ಲೇಶ್ವರಂನ ಬಾಲಕನ ನಿವಾಸಕ್ಕೆ ಶಿವಕುಮಾರ್ ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಬಿಬಿಎಂಪಿ ಆಟದ ಮೈದಾನದಲ್ಲಿ ಗೇಟ್ ಬಿದ್ದು ಮೃತಪಟ್ಟ ಬಾಲಕನ ಮನೆಗೆ ನಮ್ಮ ಮಂತ್ರಿಗಳು ಹಾಗೂ ಶಾಸಕರು ಬಂದು ಸಾಂತ್ವನ ಹೇಳಿದ್ದರು.  ನಾನು ಅವರ ಮನೆಗೆ ಬಂದು ಬಾಲಕನ ತಂದೆ ತಾಯಿ ಭೇಟಿ ಮಾಡಿದೆ. ಬಿಬಿಎಂಪಿ ವತಿಯಿಂದ 5 ಲಕ್ಷ ಹಾಗೂ ಪಕ್ಷದ ವತಿಯಿಂದ (ಬ್ಲಾಕ್ ಕಾಂಗ್ರೆಸ್) 5 ಲಕ್ಷ ಪರಿಹಾರ ಸೇರಿ ಒಟ್ಟು 10 ಲಕ್ಷದ ಚೆಕ್ ನೀಡಲಾಗಿದೆ ಎಂದರು.

Latest Videos

ಮೃತಪಟ್ಟ ಬಾಲಕನ ನೇತ್ರವನ್ನು ಕುಟುಂಬದವರು ದಾನ ಮಾಡಿ ನಮಗೆ ಮಾದರಿಯಾಗಿದ್ದಾರೆ. ಬಡತನವಿದ್ದರೂ ಸಮಾಜ ಹಾಗೂ ದೇಶಕ್ಕೆ ಕಾಣಿಕೆ ನೀಡುವ ತೀರ್ಮಾನವನ್ನು ನಾವು ಮೆಚ್ಚಬೇಕು. ಮಗನನ್ನು ಕಳೆದುಕೊಂಡಿರುವ ನೋವನ್ನು ಭರಿಸುವ ಶಕ್ತಿ ಅವರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಈ ಕುಟುಂಬದ ಜತೆ ಕಾಂಗ್ರೆಸ್ ಪಕ್ಷ ನಿಲ್ಲಲಿದೆ. ದಿನೇಶ್ ಗುಂಡೂರಾವ್ ಅವರ ಫೌಂಡೇಶನ್ ವತಿಯಿಂದ ಮೃತ ಬಾಲಕನ ತಂಗಿಯ ವಿದ್ಯಾಭ್ಯಾಸಕ್ಕೆ ನೆರವು ನೀಡಲಾಗುವುದು. ಮಾನವೀಯತೆ ದೃಷ್ಟಿಯಿಂದ ಈ ನೆರವು ನೀಡುತ್ತಿದ್ದೇವೆ. ಇದು ನಮ್ಮ ಧರ್ಮ. ಎಂದು ಹೇಳಿದರು.

Bengaluru: ಮಲ್ಲೇಶ್ವರಂನಲ್ಲಿ ಬಿಬಿಎಂಪಿ ಮೈದಾನದ ಗೇಟ್​ ಬಿದ್ದು 10 ವರ್ಷದ ಬಾಲಕ ಸಾವು!

ಬಿಬಿಎಂಪಿ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದ್ದು, ಬೇರೆ ಪಾರ್ಕ್ ಹಾಗೂ ಮೈದಾನಗಳ ಪರಿಸ್ಥಿತಿ ಇದೇ ರೀತಿ ಇದೆ ಎಂದು ಕೇಳಿದಾಗ, “ಈ ಪ್ರಕರಣದ ವರದಿ ಕೇಳಿದ್ದೇವೆ. ವರದಿ ಬಂದ ಬಳಿಕ ತೀರ್ಮಾನ ಮಾಡುತ್ತೇವೆ. ಬೆಂಗಳೂರಿನ ಬೇರೆ ಕಡೆಗಳಲ್ಲಿ ಗೇಟ್ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಮಲ್ಲೇಶ್ವರದ ದತ್ತಾತ್ರೇಯ ದೇವಸ್ಥಾನ ವಾರ್ಡ್‌ನಲ್ಲಿನ ರಾಜ್‌ಶಂಕರ್‌ ಆಟದ ಮೈದಾನದ ಗೇಟ್‌ ಬಿದ್ದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡಲು ಬಿಬಿಎಂಪಿ ಮೂವರು ಮುಖ್ಯ ಎಂಜಿನಿಯರ್‌ಗಳ ಸಮಿತಿ ರಚಿಸಿದೆ. ಜತೆಗೆ ಮೈದಾನದ ಗೇಟ್‌ನ ನಿರ್ವಹಣೆ ಮಾಡದೆ ನಿರ್ಲಕ್ಷ್ಯವಹಿಸಿದ ಸಹಾಯಕ ಎಂಜಿನಿಯರ್‌ನ್ನು ಅಮಾನತುಗೊಳಿಸಲಾಗಿದೆ. ದುರ್ಘಟನೆಗೆ ಕಾರಣ ತಿಳಿಯಲು ಮೂವರು ಮುಖ್ಯ ಎಂಜಿನಿಯರ್‌ಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ನಡೆಸಿರುವ ಗುತ್ತಿಗೆದಾರ, ಕಾಮಗಾರಿ ಯಾವಾಗ ಪೂರ್ಣಗೊಂಡಿತು, ನಂತರ ನಿರ್ವಹಣೆ ಮಾಡಲಾಗಿದೆಯೇ ಎಂಬುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪರಿಶೀಲಿಸಲಿದೆ ಎಂದು ಬಿಬಿಎಂಪಿ ಮುಖ್ಯ ಎಂಜಿನಿಯರ್ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಬೆಂಗಳೂರು ವೈಯಾಲಿಕಾವಲ್ ನೇಪಾಳಿ ಕನ್ನಡತಿ ಮಹಾಲಕ್ಷ್ಮಿ ಕೊಲೆ ಆರೋಪಿ ಇವನೇ ನೋಡಿ..!

ಪಶ್ವಿಮ ವಲಯದ ಅಧಿಕಾರಿಗಳು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಲು ಮುಂದಾಗಿದ್ದರು. ಆದರೆ, ಆ ವಲಯದಲ್ಲಿ ನಡೆದಿರುವ ಘಟನೆ ಬಗ್ಗೆ ಅವರೇ ವರದಿ ನೀಡಿದರೆ ಅನುಮಾನಗಳು ಹುಟ್ಟಿಕೊಳ್ಳುತ್ತವೆ. ಹೀಗಾಗಿ ಬಿಬಿಎಂಪಿ ಕೆರೆ ವಿಭಾಗದ ಮುಖ್ಯ ಎಂಜಿನಿಯರ್‌ ಹರಿದಾಸ್‌, ಟಿವಿಸಿಸಿ ಮುಖ್ಯ ಎಂಜಿನಿಯರ್‌ ವಿಶ್ವನಾಥ್‌ ಹಾಗೂ ಗುಣಮಟ್ಟ ನಿಯಂತ್ರಣ ವಿಭಾಗದ ಮುಖ್ಯ ಎಂಜಿನಿಯರ್‌ ರಾಜೇಂದ್ರ ಪ್ರಸಾದ್‌ ಅವರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಸೆ. 30ರೊಳಗೆ ವರದಿ ನೀಡುವಂತೆ ಹೇಳಲಾಗಿದ್ದು, ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದು ಎಂದು ತಿಳಿಸಿದ್ದರು.

click me!