ಖರ್ಗೆಗೆ ಇತಿಹಾಸವೇ ಗೊತ್ತಿಲ್ಲ: ಸುಧಾಕರ್‌

By Kannadaprabha NewsFirst Published Mar 9, 2020, 10:58 AM IST
Highlights

104 ಬಾರಿಗೆ ಸಂವಿಧಾನ ತಿದ್ದುಪಡಿ ಮಾಡಿರುವ ಕಾಂಗ್ರೆಸ್‌ ಸಂವಿಧಾನ ರಕ್ಷಣೆ ಮಾಡಿದೆಯೇ? ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇತಿಹಾಸವೇ ಗೊತ್ತಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್‌ ವ್ಯಂಗ್ಯವಾಡಿದ್ದಾರೆ.

ಚಾಮರಾಜನಗರ(ಮಾ.09): 104 ಬಾರಿಗೆ ಸಂವಿಧಾನ ತಿದ್ದುಪಡಿ ಮಾಡಿರುವ ಕಾಂಗ್ರೆಸ್‌ ಸಂವಿಧಾನ ರಕ್ಷಣೆ ಮಾಡಿದೆಯೇ? ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇತಿಹಾಸವೇ ಗೊತ್ತಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್‌ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಚಾಮರಾಜನಗರದಲ್ಲಿ ಸಿಎಎ ವಿರುದ್ಧ ನಡೆದ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕುರಿತು ಕೇವಲವಾಗಿ ಮಾತನಾಡಿದ್ದಾರೆ.

BJP ಸೇರ್ತಾರಾ ಸಿದ್ದರಾಮಯ್ಯ..? ಸುಧಾಕರ್ ಕೊಟ್ರು ಸ್ಪಷ್ಟನೆ

ದೇಶದಲ್ಲಿ ಮೊಟ್ಟಮೊದಲು 1951ರಲ್ಲಿ ಕಾಂಗ್ರೆಸ್‌ ಸರ್ಕಾರ ಸಂವಿಧಾನವನ್ನು ತಿದ್ದುಪಡಿ ಮಾಡಿದೆ. ಇದನ್ನು ಖರ್ಗೆ ಅವರು ಅರಿತುಕೊಳ್ಳುವುದು ಒಳಿತು ಎಂದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಬರಲು ನನ್ನ ಜೊತೆ ಚರ್ಚೆ ಮಾಡಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದರು.

click me!