ಕಾಂಗ್ರೆಸ್‌ಗೆ ಖರ್ಗೆ ಆಯ್ಕೆ ರಾಜ್ಯಕ್ಕೆ ದೊಡ್ಡ ಶಕ್ತಿ

By Kannadaprabha News  |  First Published Oct 28, 2022, 4:17 AM IST

 ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿರುವುದರಿಂದ ನಮ್ಮ ರಾಜ್ಯಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು.


  ತುಮಕೂರು (ಅ. 27 ) : ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿರುವುದರಿಂದ ನಮ್ಮ ರಾಜ್ಯಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್‌ (Congress)  ಭವನದಲ್ಲಿ ಕಾಂಗ್ರೆಸ್‌ (SC)  ಘಟಕ ಹಾಗೂ ಮುಂಚೂಣಿ ಘಟಕಗಳ ಸಹಯೋಗದೊಂದಿಗೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿದರು. ಪಕ್ಷಕ್ಕೆ ನಿಷ್ಠರಾಗಿ ಶ್ರಮಿಸಿದರೆ ಯಾವ ಹಂತದವರೆಗಾದರೂ ಬೆಳೆಯಬಹುದು ಎಂಬುದಕ್ಕೆ ಮಲ್ಲಿಕಾರ್ಜುನ ಖರ್ಗೆಯವರೇ ಸಾಕ್ಷಿ. ಈ ಬಾರಿ ಕಾಂಗ್ರೆಸ್‌ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂಬುದಕ್ಕೆ ಮುನ್ಸೂಚನೆ ನಮ್ಮ ಕರ್ನಾಟಕದಿಂದ 9 ಬಾರಿ ಶಾಸನಸಭೆಗೆ ಹಾಗೂ ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿರುವಂತಹ ಮಲ್ಲಿಕಾರ್ಜುನ ಖರ್ಗೆಯವರು ಅಧಿಕಾರ ಸ್ವೀಕಾರ ಈ ಕಾರ್ಯಕ್ರಮ ಕರ್ನಾಟಕಕ್ಕೆ ಶುಭ ಸೂಚನೆಯಾಗಿದೆ. ಕಾಂಗ್ರೆಸ್‌ ಪಕ್ಷ ಬಲಿಷ್ಠಗೊಳ್ಳಲು ನಾವೆಲ್ಲರೂ ಒಂದಾಗಬೇಕು, ಐಕ್ಯತೆಯಿಂದ ಹೋರಾಟವನ್ನು ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸಬೇಕೆಂದು ಕರೆ ನೀಡಿದರು.

Tap to resize

Latest Videos

ಕಾಂಗ್ರೆಸ್‌ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಬಿ.ಜಿ.ನಿಂಗರಾಜು ಮಾತನಾಡಿ, ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿರುವುದರಿಂದ ಮುಂಬರುವ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್‌ ಅತ್ಯಧಿಕ ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಭ್ರಮಾಚರಣೆಯಲ್ಲಿ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಕೆಂಚರಾಮಯ್ಯ, ಮುಖಂಡರಾದ ರೆಡ್ಡಿ ಚಿನ್ನಯಲ್ಲಪ್ಪ, ನಯಾಜ್‌, ಇಕ್ಬಾಲ್‌ ಅಹಮದ್‌, ನರಸೀಯಪ್ಪ, ಸಿದ್ಧಲಿಂಗೇಗೌಡ, ಫರ್ಹಾನಾ ಬೇಗಂ, ಚಂದ್ರಶೇಖರ್‌, ಮಂಜುನಾಥ್‌, ಗುರುಪ್ರಸಾದ್‌ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಹಿರಿಯ ಮುತ್ಸದ್ದಿತನ ಮತ್ತು ಜನಪರ ಕಾಳಜಿಯ ಮೇರು ವ್ಯಕ್ತಿತ್ವದ ಖರ್ಗೆಯವರು ಕಾಂಗ್ರೆಸ್‌ ಪಕ್ಷವನ್ನು ಅತ್ಯಂತ ಸಮರ್ಥವಾಗಿ ಮುನ್ನಡೆಸಲಿದ್ದಾರೆ. ಕರುನಾಡಿನ ನಾಯಕರೊಬ್ಬರು ಪಕ್ಷದ ಉನ್ನತ ಹುದ್ದೆ ಅಲಂಕರಿಸಿದ್ದು ನಮಗೆ ಸಂತಸ ತಂದಿದೆ. ಮಾಜಿ ಮುಖ್ಯಮಂತ್ರಿ ಎಸ್‌.ನಿಜಲಿಂಗಪ್ಪ ಅವರು 1968ರಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗುವ ಮೂಲಕ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ ಸಾರಥ್ಯ ವಹಿಸಿದ ರಾಜ್ಯದ ಮೊದಲ ನಾಯಕರಾಗಿ ಗುರುತಿಸಿಕೊಂಡಿದ್ದರು. ಈಗ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ ಸ್ಥಾನ ಅಲಂಕರಿಸುವ ಮೂಲಕ ರಾಜ್ಯದ ಎರಡನೇ ನಾಯಕರಾಗಿ ಹೊರಹೊಮ್ಮಿದ್ದಾರೆ.

ಮುರಳೀಧರ ಹಾಲಪ್ಪ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ

ಕಾಂಗ್ರೆಸ್‌ಗೆ ಖರ್ಗೆ ಆಯ್ಕೆಯಿಂದ ಬಲ

 

ಪಿರಿಯಾಪಟ್ಟಣ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿರುವುದು ಪಕ್ಷ ಸಂಘಟನೆಗೆ ಬಲವರ್ಧನೆ ಬಂದಂತಾಗಿದೆ ಎಂದು ಮಾಜಿ ಸಚಿವ ಕೆ. ವೆಂಕಟೇಶ್‌ ಹೇಳಿದರು.

ಪಟ್ಟಣದ ಕಾಂಗ್ರೆಸ್‌ ಕಚೇರಿ ಬಳಿ ಬೆಟ್ಟದಪುರ ಪಿರಿಯಾಪಟ್ಟಣ ಬ್ಲಾಕ್‌ ಕಾಂಗ್ರೆಸ್‌ನಿಂದ ಸಂಭ್ರಮಾಚರಿಸಿ ಅವರು ಮಾತನಾಡಿದರು.

ದೇಶ ಕಂಡ ಅಪರೂಪದ ರಾಜಕಾರಣಿಗಳಲ್ಲಿ ಖರ್ಗೆ ಅವರು ಒಬ್ಬರಾಗಿದ್ದು, ಕರ್ನಾಟಕದವರಿಗೆ ಕಾಂಗ್ರೆಸ್‌ನ ಅತ್ಯುನ್ನತ ಸ್ಥಾನ ಒಲಿದು ಬಂದಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ, ಮುಂಬರುವ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ… ಪಕ್ಷ ಅತಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮತ್ತೆ ದೇಶ ಹಾಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಮುಖಂಡ ಎಚ್‌.ಡಿ. ಗಣೇಶ್‌, ಕೆಪಿಸಿಸಿ ಸದಸ್ಯ ನಿತಿನ್‌ ವೆಂಕಟೇಶ…, ಬ್ಲಾಕ್‌ ಕಾಂಗ್ರೆಸ… ಅಧ್ಯಕ್ಷರಾದ ಡಿ.ಟಿ. ಸ್ವಾಮಿ, ರಹಮತ್‌ ಜಾನ್‌ ಬಾಬು, ವಿವಿಧ ಮೋರ್ಚಾ ಪದಾಧಿಕಾರಿಗಳಾದ ಅಶೋಕ್‌ಕುಮಾರ್‌ ಗೌಡ, ಬಿ.ಜೆ. ಬಸವರಾಜ…, ವಿಜಯ…ಕುಮಾರ್‌, ಪಿ. ಮಹದೇವ್‌, ಮಂಜು, ಮಲ್ಲಣ್ಣ, ರಾಜೇಶ…, ಮಂಜುನಾಥ…, ಕಾಮರಾಜ…, ಮಕ್ಸೂದ್‌, ಪುಟ್ಟನಾಯಕ, ಪಿ.ಪಿ. ಮಹದೇವ್‌, ರವಿ, ಶೇಖರ್‌, ನಂದೀಶ್‌, ಕಾಂಗ್ರೆಸ್‌ ಕಾರ್ಯಕರ್ತರು ಇದ್ದರು.

click me!