ವಿಧಾನಸೌಧದ 3ನೇ ಮಹಡಿಯ ಶೌಚಾಲಯದಲ್ಲಿ ಗುತ್ತಿಗೆ ನೌಕರನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಬೆಂಗಳೂರು, (ಜೂ.24) : ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ವಿಧಾನಸೌಧದ 3ನೇ ಮಹಡಿಯ ಶೌಚಾಲಯದಲ್ಲಿ ರೇವಣ್ಣ ಕುಮಾರ್ (45) ಎಂಬುವವರು ಸೋಮವಾರ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾನೆ. ರೇವಣ್ಣ ಕುಮಾರ್ ಚಿಕ್ಕಬಳ್ಳಾಪುರ ಜಿಲ್ಲೆಯ ಆನೂರು ಗ್ರಾಮದವರು ಎಂದು ತಿಳಿದುಬಂದಿದೆ.
ರೇವಣ್ಣ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗ್ರಂಥಾಲಯದಲ್ಲಿ ಗುತ್ತಿಗೆ ನೌಕರನಾಗಿದ್ದು, ಕಳೆದ ಏಳು ತಿಂಗಳು ಕಾಲ ವೇತನ ನೀಡಿಲ್ಲ. ಇದರಿಂದ ಬೇಸತ್ತು ವಿಧಾನಸೌಧಕ್ಕೆ ಆಗಮಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.ಆದ್ರೆ, ಈ ಬಗ್ಗೆ ಪೊಲೀಸರು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
ಗಾಯಗೊಂಡಿರುವ ರೇವಣ್ಣ ಕುಮಾರ್‌ನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವಿಧಾನಸೌಧ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸುತ್ತಿದ್ದಾರೆ.