ಕೋವಿಡ್‌ ಸೋಂಕಿತ ಛಾಯಚಿತ್ರಗ್ರಾಹಕ ಬಾವಿಗೆ ಹಾರಿ ಆತ್ಮಹತ್ಯೆ

Kannadaprabha News   | Asianet News
Published : Oct 04, 2020, 07:23 AM IST
ಕೋವಿಡ್‌ ಸೋಂಕಿತ ಛಾಯಚಿತ್ರಗ್ರಾಹಕ ಬಾವಿಗೆ ಹಾರಿ ಆತ್ಮಹತ್ಯೆ

ಸಾರಾಂಶ

ಕೋವಿಡ್ ಸೊಂಕು ತಗುಲಿದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 

ಉಡುಪಿ (ಅ.04): ಕೋವಿಡ್‌ ಸೋಂಕಿತ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ಶನಿವಾರ ನಡೆದಿದೆ.

ವೃತ್ತಿಯಲ್ಲಿ ಛಾಯ ಚಿತ್ರಗ್ರಾಹಕರಾಗಿದ್ದ 46 ಹರೆಯದ ವ್ಯಕ್ತಿ ಮೃತರು. ಅವರು ಇಲ್ಲಿನ ಮಾರ್ಕೆಟ್‌ ರಸ್ತೆಯ ರಾಧಿಕಾ ಟಾಕೀಸ್‌ ಬಳಿ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. 

ಕೊರೋನಾ ಲಾಕ್‌ಡೌನ್‌ನಿಂದ ಸಂಪಾದನೆ ಇಲ್ಲದೇ ಸಂಕಷ್ಟದಲ್ಲಿದ್ದ ಅವರಿಗೆ ಇತ್ತೀಚೆಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ಕೋವಿಡ್‌ ಸೋಂಕು ಪತ್ತೆಯಾಗಿದ್ದು, ಮನೆಯಲ್ಲಿದ್ದು ಚಿಕಿತ್ಸೆ ಪಡೆಯುತಿದ್ದರು. 

ಕೋವಿಡ್‌ ಹಿನ್ನೆಲೆಯಲ್ಲಿ ತೀವ್ರವಾಗಿ ನೊಂದುಕೊಂಡಿದ್ದ ಅವರು ಶನಿವಾರ ಸಂಜೆ ಮನೆ ಮುಂಭಾಗದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

PREV
click me!

Recommended Stories

ಆತಂಕದ ವಿಷಯ: ಬೆಂಗಳೂರಿನಲ್ಲಿ 11 ವರ್ಷದ ಮಕ್ಕಳಿಗೂ ಡ್ರಗ್ಸ್‌ ಚಟ!
ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!