TikTok ವಿಡಿಯೋ ಮಾಡಿ ಪ್ರೇಮಿ ಆತ್ಮಹತ್ಯೆ

Kannadaprabha News   | Asianet News
Published : Mar 05, 2020, 11:42 AM IST
TikTok ವಿಡಿಯೋ ಮಾಡಿ ಪ್ರೇಮಿ ಆತ್ಮಹತ್ಯೆ

ಸಾರಾಂಶ

ಟಿಕ್‌ಟಾಕ್ ವಿಡಿಯೋ ಮಾಡಿ ಯುವ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ಅಂತರ್ಜಾತಿ ಯುವತಿಯರನ್ನು ಪ್ರೀತಿಸದಂತೆ ವೀಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.  

ಮೈಸೂರು(ಮಾ.05): ಟಿಕ್‌ಟಾಕ್ ವಿಡಿಯೋ ಮಾಡಿ ಯುವ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ಅಂತರ್ಜಾತಿ ಯುವತಿಯರನ್ನು ಪ್ರೀತಿಸದಂತೆ ವೀಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅಂತರ್ಜಾತಿ ಯುವತಿಯನ್ನು ಪ್ರೀತಿಸಿದ್ದ ಆಟೋ ಡ್ರೈವರ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಬುಧವಾರ ನಡೆದಿದೆ. ವಿವಿ ಮೊಹಲ್ಲಾದ ನಿವಾಸಿ ಸಿದ್ದಾರ್ಥ (24) ಆತ್ಮಹತ್ಯೆಗೆ ಶರಣಾದವರು. ಆತ್ಮಹತ್ಯೆ ಮಾಡುವ ಮೊದಲು ಅಂತರ್ಜಾತಿ ಯುವತಿಯರನ್ನು ಪ್ರೀತಿಸದಂತೆ ವೀಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕಾಲೇಜ್‌ ಡೇ ದಿನ ಮದ್ಯ ಸೇವನೆ: ಡಿಗ್ರಿ ವಿದ್ಯಾರ್ಥಿ ಆತ್ಮಹತ್ಯೆ

ಮೊಬೈಲ್‌ನಲ್ಲಿ ಸೆಲ್ಫಿ ವಿಡಿಯೋ ಮಾಡಿ ನಂತರ ನೇಣಿಗೆ ಶರಣಾಗಿದ್ದಾರೆ. ಈತ ಎರಡು ಮೂರು ವರ್ಷದಿಂದ ಬಂಬೂಬಜಾರ್‌ನ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಕೆಲ ದಿನಗಳಿಂದ ಇಬ್ಬರ ನಡುವೆ ಜಗಳವಾಗಿತ್ತು ಎನ್ನಲಾಗಿದೆ.

ಇದರಿಂದ ಬೇಸತ್ತ ಸಿದ್ದಾರ್ಥ ನನಗಾದ ಪರಿಸ್ಥಿತಿ ಯಾರಿಗೂ ಆಗುವುದು ಬೇಡ ಎಂದು ಟಿಕ್‌ಟಾಕ್‌ನಲ್ಲಿ ವೀಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ತಾಯಿ ಲಕ್ಷ್ಮೀ ದೂರು ನೀಡಿದ್ದಾರೆ. ಈ ಸಂಬಂಧ ವಿ.ವಿ ಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TikTok ಗೀಳು: ಮಂಜುಗಡ್ಡೆಯಾದ ನದಿಯೊಳಗೆ ಸಿಕ್ಕಾಕೊಂಡ ಸ್ಟಾರ್!

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]

PREV
click me!

Recommended Stories

ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!
ರಾಮನಗರದ ರೇವಣಸಿದ್ದೇಶ್ವರ ಬೆಟ್ಟದಲ್ಲಿ ದುರಂತ: ದೇವರ ದರ್ಶನಕ್ಕೂ ಮುನ್ನವೇ ಕಂದಕ ಸೇರಿದ ಭಕ್ತ!