ಕೊರೋನಾ ಸೋಂಕು ಬಂದಿರಬಹುದು ಎಂಬ ಆತಂಕದಿಂದ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಾರ್ನಾಮಿದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಮದ್ದೂರು(ಜು.04): ಕೊರೋನಾ ಸೋಂಕು ಬಂದಿರಬಹುದು ಎಂಬ ಆತಂಕದಿಂದ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಾರ್ನಾಮಿದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ದೊಡ್ಡ ನೀಲ ಹೆಗಡೆ (61) ಎಂಬಾತನೇ ಕೊರೋನಾ ಸೋಂಕಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊರೋನಾ ಸೋಂಕು ದೃಢಪಟ್ಟವ್ಯಕ್ತಿಯೊಬ್ಬರೂ ಹೆಗಡೆ ಮನೆಗೆ ಬಂದಿದ್ದರೆನ್ನಲಾಗಿದೆ.
ಅವರನ್ನು ಈಗಾಗಲೇ ಕೋವಿಡ್ ಆಸ್ಪತ್ರೆಯಲ್ಲಿ ಐಸೋಲೇಷನ್‌ನಲ್ಲಿ ಇಡಲಾಗಿದೆ. ಇದರಿಂದ ಭಯಪಟ್ಟಹೆಗಡೆ ಅವರು ಬೆಳಗ್ಗೆ 11.30ರ ಸಮಯಲ್ಲಿ ತಮ್ಮ ಜಮೀನಿನಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭದ್ರಾವತಿಯಲ್ಲಿ ಹೊಸದಾಗಿ 4 ಕೊರೋನಾ ಪ್ರಕರಣ ಪತ್ತೆ..!
ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಮರದಿಂದ ಶವವನ್ನು ಇಳಿಸಿ, ಆಂಬ್ಯುಲೆಸ್ಸ್ ವಾಹನದಲ್ಲಿ ಕೋವಿಡ್ ಆಸ್ಪತ್ರೆಯ ಶವಾಗಾರಕ್ಕೆ ತಂದು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ಸಂಬಂಧ ಬೆಸಗರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಂದಿನ ಕ್ರಮ ಕೈಗೊಂಡಿದ್ದಾರೆ.