ಟಿಕ್ ಟಾಕ್ ಮಾಡುತ್ತಲೇ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ [ಫೆ.07]: ಟಿಕ್ ಟಾಕ್ ನಲ್ಲಿ ವಿಡಿಯೋ ಮಾಡಿಕೊಂಡು ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ತಾಲೂಕಿನ ಮಾಗನಹಳ್ಳಿ ಗ್ರಾಮದ ನಾಗರಾಜು [34] ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಬೇಸತ್ತು ನಾಗರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಟಿಕ್ ಟಾಕ್ ಮೂಲಕ ಸಾಮಾನ್ಯರು ಈಗ ಸೆಲೆಬ್ರೆಟಿ...
ಆಟೋ ಚಾಲಕನಾಗಿದ್ದ ನಾಗರಾಜ್ ಇದರಿಂದ ಮನೆ ನಿರ್ವಹಣೆ ಮಾಡುತ್ತಿದ್ದ. ಮಾನಸಿಕ ಖಿನ್ನತೆಗೂ ಒಳಗಾಗಿದ್ದು, ಪದೇ ಪದೇ ಮನೆಯಲ್ಲಿ ಜಗಳ ನಡೆಯುತ್ತಿತ್ತೆನ್ನಲಾಗಿದೆ.
ಟಿಕ್ ಟಾಕ್ ಹುಚ್ಚಿಗೆ ಡ್ಯಾಂಗೆ ಧುಮುಕಿದ ಯುವಕ : ವಿಡಿಯೋ ವೈರಲ್!...
ಟಿಕ್ ಟಾಕ್ ಮಾಡುತ್ತಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ದಾವಣಗೆರೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.