ಹಾಸನ: ಮಂಗಳೂರು-ಬೆಂಗಳೂರು KSRTC ಬಸ್‌ ಪಲ್ಟಿ..!

Published : Nov 25, 2019, 08:11 AM ISTUpdated : Jan 18, 2022, 12:34 PM IST
ಹಾಸನ: ಮಂಗಳೂರು-ಬೆಂಗಳೂರು KSRTC ಬಸ್‌ ಪಲ್ಟಿ..!

ಸಾರಾಂಶ

ಮಂಗಳೂರಿನಿಂದ ಬೆಂಗಳೂರಿನ ಕಡೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ತಡರಾತ್ರಿ 3 ಗಂಟೆಯ ಸುಮಾರಿಗೆ ಘಟನೆ ನಡೆದಿದೆ.

ಹಾಸನ(ನ.25): ಮಂಗಳೂರಿನಿಂದ ಬೆಂಗಳೂರಿನ ಕಡೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ತಡರಾತ್ರಿ 3 ಗಂಟೆಯ ಸುಮಾರಿಗೆ ಘಟನೆ ನಡೆದಿದೆ.

"

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹಿರೀಸಾವೆಯಲ್ಲಿ ಘಟನೆ ನಡೆದಿದ್ದು, ತಡರಾತ್ರಿ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಚಿತ್ರದುರ್ಗದ ಬಳಿ ಭೀಕರ ಅಪಘಾತ: ಇಬ್ಬರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಬಸ್ ಪಲ್ಟಿಯಾಗಿದ್ದು, ನಂತರ ಸರ್ವಿಸ್ ರಸ್ತೆಯಲ್ಲಿ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್‌ನಲ್ಲಿದ್ದ ಅಭಿಷೇಕ್ (28) ಮೃತ ವ್ಯಕ್ತಿ. ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಅಭಿಷೇಕ್ ರಾತ್ರಿ ಬಸ್‌ನಲ್ಲಿ ಮಂಗಳೂರು-ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು.

ಪತ್ನಿಯ ನಿಂದಿಸಿದ್ದ ಗೆಳೆಯನನ್ನು ಬಾಟಲಿಯಲ್ಲಿ ಹೊಡೆದು ಹತ್ಯೆಗೈದ ಪತಿ'ರಾಯ'!

ಗಾಯಾಳುಗಳಿಗೆ ಬೆಳ್ಳೂರು ಕ್ರಾಸ್ ಹಾಗೂ ಹಿರೀಸಾವೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಿರೀಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

PREV
click me!

Recommended Stories

ಬೆಂಗಳೂರು ಕಬ್ಬನ್‌ಪಾರ್ಕ್‌ ಪುಷ್ಪ ಪ್ರದರ್ಶನಕ್ಕೆ ಇಂದು ತೆರೆ
ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ