ಕೊಪ್ಪಳ: ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಸಾವು, ವಿಂಡ್ ಪವರ್ ಕಂಪನಿ ವಿರುದ್ಧ ಗ್ರಾಮಸ್ಥರ ಆಕ್ರೋಶ

By Girish GoudarFirst Published May 10, 2024, 11:30 AM IST
Highlights

ವಿಂಡ್ ಪವರ್ ಕಂಪನಿ ನಿರ್ಲಕ್ಷ್ಯದಿಂದಲೇ ಈರಪ್ಪ ಸಾವನ್ನಪ್ಪಿದ್ದಾನೆ ಎಂದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಕೆಗಳನ್ನು ಮೇಯಿಸಲು ಹೋದಾಗ ವಿದ್ಯುತ್ ತಗುಲಿ ಸಾವನ್ನಪ್ಪಿದ ಈರಪ್ಪ. 
 

ಕೊಪ್ಪಳ(ಮೇ.10):  ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಿನ್ನೆ(ಗುರುವಾರ) ನಡೆದಿದೆ. ಈರಪ್ಪ ಕುರಿ(55) ಮೃತ ವ್ಯಕ್ತಿಯಾಗಿದ್ದಾರೆ.

ವಿಂಡ್ ಪವರ್ ಕಂಪನಿ ನಿರ್ಲಕ್ಷ್ಯದಿಂದಲೇ ಈರಪ್ಪ ಸಾವನ್ನಪ್ಪಿದ್ದಾನೆ ಎಂದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಕೆಗಳನ್ನು ಮೇಯಿಸಲು ಹೋದಾಗ ವಿದ್ಯುತ್ ತಗುಲಿ ಈರಪ್ಪ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. 
ಮೇಕೆಗಳಿಗೆ ಮರದ ತಪ್ಪಲು ಹಾಕಲು ಮರದ ಟೊಂಗೆ ಕತ್ತರಿಸಲು ಮುಂದಾದಾಗ ಹೈಟೆನ್ಷನ್ ವೈಯರ್ ಮರಕ್ಕೆ ತಾಗಿದ್ದರಿಂದ ಈರಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 

ಜನಾರ್ದನ ರೆಡ್ಡಿ ತನ್ನನ್ನು ತಾನೇ ಮಹಾನ್‌ ನಾಯಕ ಅಂತ ಅಂದುಕೊಂಡಿದ್ದಾನೆ: ಶಿವರಾಜ್ ತಂಗಡಗಿ ಗರಂ

ನಿನ್ನೆ ಸಂಜೆಯೇ ಈರಪ್ಪ ಮೃತಪಟ್ಟಿದ್ದಾರೆ. ರಾತ್ರಿಯಾದ್ರು ಈರಪ್ಪ ಮನೆಗೆ ಬಾರದೇ ಇದ್ದಾಗ ಕುಟುಂಬ ಆತಂಕಗೊಂಡಿತ್ತು. ಈರಪ್ಪನಿಗಾಗಿ ಹುಡುಕಾಟ ನಡೆಸಿದಾಗ ಮರದ ಬಳಿ ಈರಪ್ಪನ ಶವ ಪತ್ತೆಯಾಗಿದೆ. ಕುಕನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಘಟಾನ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಂಡ್ ಪವರ್ ಕಂಪನಿ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಟೆನ್ಷನ್ ವೈಯರ್ ಇದ್ರೂ ಯಾವುದೇ ಸೂಚನೆ ನೀಡದ, ಮರಕ್ಕೆ ತಾಗದಂತೆ ನೋಡಿಕೊಂಡಿಲ್ಲ ಆಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಮೃತ ವ್ಯಕ್ತಿಯ ಕುಟುಂಬಕ್ಕೆ ವಿಂಡ್ ಪವರ್ ಕಂಪನಿ ಪರಿಹಾರ ನೀಡಬೇಕು ಅಂತ ಗ್ರಾಮಸ್ಥರು ಆಗ್ರಹಿಸಿದ್ದಾರೆ. 

click me!