ಕುಟುಂಬ ಸಮೇತ ವಿಶ್ವೇಶ್ವರಯ್ಯ ನಾಲೆಗೆ ಬಿದ್ದ ಕಾರು: ಪ್ರಾಣ ಉಳಿದಿದ್ದೇ ದೊಡ್ಡ ಪವಾಡ

By Sathish Kumar KHFirst Published Jun 4, 2023, 5:31 PM IST
Highlights

ಭಾನುವಾರ ಕಾರಿನಲ್ಲಿ ಕುಟುಂಬ ಸಮೇತರಾಗಿ ಹೋಗುತ್ತಿದ್ದ ಕ್ರೇಟಾ ಕಾರು ನಿಯಂತ್ರಣ ತಪ್ಪಿ ಪಾಂಡವಪುರ ಬಳಿಯ ವಿಶ್ವೇಶ್ವರಯ್ಯ ನಾಲೆಗೆ ಬಿದ್ದಿದೆ. ಕೂಡಲೇ ಸ್ಥಳೀಯರು ಬಂದು ನಾಲೆಗೆ ಬಿದ್ದಿದ್ದ ಕುಟುಂಬ ಸದಸ್ಯರನ್ನು ರಕ್ಷಣೆ ಮಾಡಿದ್ದಾರೆ.

ಮಂಡ್ಯ (ಜೂ.04): ಮಂಡ್ಯ ಜಿಲ್ಲೆಯಲ್ಲಿ ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಜಲಾಶಯದಿಂದ ನೀರು ಹರಿಯುವ ನಾಲೆಗಳು ಬಹುತೇಕ ರಸ್ತೆ ಬದಿಯಿದ್ದರೂ ಅವುಗಳಿಗೆ ತಡೆಗೋಡೆ ಅಳವಡಿಸಿಲ್ಲ. ಈ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸ್ವಲ್ಪ ಎಡವಟ್ಟಾದರೂ ಕಾವೇರಿ ನಾಲೆಗೆ ಬಿದ್ದು ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಭಾನುವಾರ ಕಾರಿನಲ್ಲಿ ಕುಟುಂಬ ಸಮೇತರಾಗಿ ಹೋಗುತ್ತಿದ್ದ ಕ್ರೇಟಾ ಕಾರು ನಿಯಂತ್ರಣ ತಪ್ಪಿ ವಿಶ್ವೇಶ್ವರಯ್ಯ ನಾಲೆಗೆ ಬಿದ್ದಿದೆ. ಕೂಡಲೇ ಸ್ಥಳೀಯರು ಬಂದು ನಾಲೆಗೆ ಬಿದ್ದಿದ್ದ ಕುಟುಂಬ ಸದಸ್ಯರನ್ನು ರಕ್ಷಣೆ ಮಾಡಿದ್ದಾರೆ.

ಕುಟುಂಬ ಸಮೇತ ಜಲ ಸಮಾಧಿ ಆಗುತ್ತಿದ್ದ ಕುಟುಂಬ ಜಸ್ಟ್ ಮಿಸ್ ಆಗಿದೆ. ಬರೋಬ್ಬರಿ 25 ಅಡಿ ವಿಸಿ ನಾಲೆಗೆ ಉರುಳಿದ ಚಲಿಸುತ್ತಿದ್ದ ಕ್ರೇಟಾ ಕಾರು. ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ಪಾಂಡವಪುರ ಕಡೆ ತೆರಳುತ್ತಿದ್ದ ಕುಟುಂಬದ ಕಾರು, ತಿರುವಿನಲ್ಲಿ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಅಲ್ಲಿಯೂ ನಿಯಂತ್ರಣ ಸಿಗದೇ ವಿಶ್ವೇಶ್ವರಯ್ಯ ಕಾಲುವೆಗೆ ಉರುಳಿದ್ದು, ಪಲ್ಟಿಯಾಗಿದೆ. ಆದರೆ, ಅದೃಷ್ಟವಶಾತ್‌ ವಿಸಿ ನಾಲೆಯಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದ ಕಾರಣ ಕಾರಿನಲ್ಲಿದ್ದ ಫ್ಯಾಮಿಲಿ ಸೇಫ್ ಆಗಿದೆ.

ಹ್ಯಾಕ್‌ ಆಯ್ತಾ ಬೆಂಗಳೂರು ಪೊಲೀಸ್‌ ಇಲಾಖೆಯ ಸಹಾಯವಾಣಿ 

ನಾಲೆಗಿಳಿದು ಪ್ರಾಣ ರಕ್ಷಿಸಿದರು:  ವಿಶ್ವೇಶ್ವರಯ್ಯ (ವಿಸಿ) ನಾಲೆಗೆ ಕಾರು ಬಿದ್ದ ತಕ್ಷಣ ಮಾಚಹಳ್ಳಿ ಗ್ರಾಮಸ್ಥರು ರಕ್ಷಣೆಗೆ ದಾವಿಸಿದ್ದಾರೆ. ತಕ್ಷಣವೇ ವಿಸಿ ನಾಲೆಗೆ ಇಳಿದು ಕಾರಿನೊಳಗೆ ಸಿಲುಕಿದ್ದ ಗಂಡ, ಹೆಂಡತಿ ಮಕ್ಕಳನ್ನ ರಕ್ಷಣೆ ಮಾಡಿ ಕಾರಿನಿಂದ ಹೊರಗೆ ಎಳೆದುಕೊಂಡಿದ್ದಾರೆ. ಆದ್ದರಿಂದ, ಕುಟುಂಬದ ಎಲ್ಲ ಸದಸ್ಯರೂ ಪ್ರಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತಂತೆ, ಶಿವಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಆಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಮುಂಗಾರುಪೂರ್ವ ಮಳೆ ಕೊರತೆ; 79 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ! : ಮಂಡ್ಯ (ಮೇ.30) : ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ79.72 ಅಡಿಗೆ ಕುಸಿದಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗುವ ಆತಂಕ ಸೃಷ್ಟಿಯಾಗಿದೆ. ಕಳೆದ 5 ವರ್ಷಗಳಿಂದ ಅಣೆಕಟ್ಟೆಯ ನೀರಿನ ಸಂಗ್ರಹದಲ್ಲಿ ಸುಧಾರಣೆ ಕಂಡು ಬಂದಿತ್ತು. ಆದರೆ, ಈ ವರ್ಷ ಅತಿ ಕಡಿಮೆ ಪ್ರಮಾಣದ ನೀರು ಸಂಗ್ರಹವಾಗಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಭೀತಿ ಎದುರಾಗಿದೆ.

ರೋಗದ ಭೀತಿ: ನದಿಯಲ್ಲಿನ ನೀರು ಖಾಲಿ ಮಾಡಿಸಿದ ಅಧಿಕಾರಿಗಳು

ವಿಶ್ವೇಶ್ವರಯ್ಯ ನಾಲೆಗೆ 2503 ಕ್ಯುಸೆಕ್‌ ನೀರು ಹರಿವು: ಪ್ರಸ್ತುತ ಜಲಾಶಯಕ್ಕೆ 344 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಅಣೆಕಟ್ಟೆಯಿಂದ 2991 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ನದಿಗೆ 280 ಕ್ಯುಸೆಕ್‌, ವಿಶ್ವೇಶ್ವರಯ್ಯ ನಾಲೆಗೆ 2503 ಕ್ಯುಸೆಕ್‌, ಆರ್‌ಬಿಎಲ್‌ಎಲ್‌ ನಾಲೆಗೆ 100 ಕ್ಯುಸೆಕ್‌, ಎಲ್‌ಬಿಎಲ್‌ಎಲ್‌ ನಾಲೆಗೆ 58 ಕ್ಯುಸೆಕ್‌ ನೀರನ್ನು ಹರಿಸಲಾಗುತ್ತಿದೆ. ಅಣೆಕಟ್ಟೆಯಲ್ಲಿ ಕೇವಲ 10.663 ಟಿಎಂಸಿ ಅಡಿ ನೀರು ಮಾತ್ರ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ ಅಣೆಕಟ್ಟೆಯಲ್ಲಿ 105.12 ಅಡಿ ನೀರು ಸಂಗ್ರಹವಾಗಿತ್ತು. ಅಂದು ಜಲಾಶಯಕ್ಕೆ 3361 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, 3142 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿತ್ತು. ಅಂದು ಜಲಾಶಯದಲ್ಲಿ 27.095 ಟಿಎಂಸಿ ಅಡಿಯಷ್ಟುನೀರು ಸಂಗ್ರಹವಾಗಿತ್ತು. ಕಳೆದ ವರ್ಷ ಮುಂಗಾರು ಪೂರ್ವ ಮಳೆ ವ್ಯಾಪಕವಾಗಿ ಸುರಿದ ಪರಿಣಾಮ ಬೇಸಿಗೆಯಲ್ಲೇ ಕೆಆರ್‌ಎಸ್‌ಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿ ಜಲಾಶಯದಲ್ಲಿ ಸುಮಾರು 5 ಅಡಿಗಳಷ್ಟುನೀರು ಏರಿಕೆಯಾಗಿತ್ತು.

click me!