ಬಿಜೆಪಿ ಸೇರಿದ ಮಂಡ್ಯದ ಕಾಂಗ್ರೆಸ್ ಮುಖಂಡರು

Published : Aug 19, 2019, 11:21 AM IST
ಬಿಜೆಪಿ ಸೇರಿದ ಮಂಡ್ಯದ ಕಾಂಗ್ರೆಸ್ ಮುಖಂಡರು

ಸಾರಾಂಶ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅತ್ತ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜಿಲ್ಲೆಯಾದ ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ತಮ್ಮ ಬೆಂಬಲ ನೀಡಿ ಸೇರ್ಪಡೆಯಾಗುತ್ತಿದ್ದಾರೆ. ಉಪ ಚುನಾವಣೆಗೆ ಕೆಲ ದಿನ ಬಾಕಿ ಇರುವಾಗಲೇ ಕೆ.ಆರ್ ಪೇಟೆ ಕ್ಷೇತ್ರದ ಮುಖಂಡರು ಕಮಲದ ಕೈ ಹಿಡಿದಿದ್ದಾರೆ. 

ಕೆ.ಆರ್‌.ಪೇಟೆ [ಆ.19]:  ಕೇಂದ್ರ ಮತ್ತು ರಾಜ್ಯದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ, ಸಿಎಂ ಬಿ.ಎಸ್‌.ಯಡಿಯೂರಪ್ಪ ಆಡಳಿತವನ್ನು ಮೆಚ್ಚಿಕೊಂಡು ತಾಲೂಕಿನಲ್ಲಿ ಸಾಕಷ್ಟು ಮಂದಿ ಬಿಜೆಪಿ ಸೇರಲು ಮುಂದೆ ಬರುತ್ತಿದ್ದಾರೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಬಿ.ಸಿ.ಮಂಜು ತಿಳಿಸಿದರು.

ಕಾಂಗ್ರೆಸ್‌ ತ್ಯಜಿಸಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಕಾಪನಹಳ್ಳಿ ಕಾಂತರಾಜ್‌, ಚಿಕ್ಕೋಸಹಳ್ಳಿ ನಾಗೇಶ್‌ ಮತ್ತಿತರರನ್ನು ಪಕ್ಷದ ಬಾವುಟ ನೀಡಿ ಸ್ವಾಗತಿಸಿ ಮಾತನಾಡಿ, ದೇಶದ ಅಭಿವೃದ್ಧಿ ಹಾಗೂ ರಕ್ಷಣೆಗಾಗಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು.

ತಾಲೂಕಿನಲ್ಲಿ ಬಿಜೆಪಿಗೆ ಸೇರ್ಪಡೆಯಾಗಲು ಸಾವಿರಾರು ಜನರು ತುದಿಗಾಲಿನಲ್ಲಿ ನಿಂತಿದ್ದಾರೆ. ನಾವುಗಳು ಮುಂದಿನ ದಿನಗಳಲ್ಲಿ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಪಕ್ಷಕ್ಕೆ ಸೇರ್ಪಡೆಯಾಗಲು ಸಿದ್ಧರಿರುವ ಯುವಕರು, ಇತರೆ ಪಕ್ಷದ ಮುಖಂಡರನ್ನು ಸಾಮೂಹಿಕವಾಗಿ ಪಕ್ಷಕ್ಕೆ ಸೇರಿಕೊಳ್ಳುತ್ತೇವೆ ಎಂದು ಹೇಳಿದರು.

ತಾಲೂಕಿನವರೇ ಆದ ಯಡಿಯೂರಪ್ಪನವರು ಸಿಎಂ ಆಗಿರುವುದರಿಂದ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಅಭಿವೃದ್ಧಿ ಪಡಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ತಾಲೂಕು ಬಿಜೆಪಿ ಉಪಾಧ್ಯಕ್ಷ ಶೀಳನೆರೆ ಭರತ್‌, ಪ್ರಧಾನ ಕಾರ್ಯದರ್ಶಿ ಯತೀಶ್‌, ಬಿ.ಸಿ.ಹರೀಶ್‌, ಮುಖಂಡರಾದ ಅಕ್ಕಿಹೆಬ್ಬಾಳು ಜಯರಾಮನಾಯಕ್‌, ಪರಮೇಶ್‌, ಭರತ್‌, ಪ್ರಕಾಶ್‌, ಕಬ್ಬಲಗೆರೆ ನಾಗೇಶ್‌ ಹಲವರು ಇದ್ದರು.

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!