ಕೆಆರ್‌ಎಸ್‌ : ನಿರ್ಬಂಧ ಸಡಿಲಿಸಿದ ಜಿಲ್ಲಾಡಳಿತ

Kannadaprabha News   | Asianet News
Published : Sep 16, 2020, 06:59 AM IST
ಕೆಆರ್‌ಎಸ್‌ : ನಿರ್ಬಂಧ ಸಡಿಲಿಸಿದ  ಜಿಲ್ಲಾಡಳಿತ

ಸಾರಾಂಶ

ಮಂಡ್ಯದ ಕೆಆರ್‌ಎಸ್‌ ಭೇಟಿಗೆ ಇದ್ದ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಜಿಲ್ಲಾಡಳಿತ ಪ್ರವೇಶಕ್ಕೆ ಅನುಮತಿ ನೀಡಿದೆ. 

ಶ್ರೀರಂಗಪಟ್ಟಣ/ಮೈಸೂರು (ಸೆ.16): ಕೋವಿಡ್‌ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಆರೇಳು ತಿಂಗಳುಗಳಿಂದ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದ ಕೃಷ್ಣರಾಜಸಾಗರ ಜಲಾಶಯ ವೀಕ್ಷಣೆಗೆ ಸೆ.16ರಿಂದ ಅವಕಾಶ ಕಲ್ಪಿಸಲಾಗಿದೆ.

 ಈ ಸಂಬಂಧ ಕಾವೇರಿ ನೀರಾವರಿ ಇಲಾಖೆ ಅಧಿಕಾರಿಗಳು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು ಸಾರ್ವಜನಿಕರು ಹಾಗೂ ಪ್ರವಾಸಿಗರು ಕೋವಿಡ್‌ ಮುಂಜಾಗ್ರತೆಯೊಂದಿಗೆ ಕನ್ನಂಬಾಡಿ ಅಣೆಕಟ್ಟೆಯಲ್ಲಿನ ಬೃಂದಾವನ ಉದ್ಯಾನ ವೀಕ್ಷಣೆ ಮಾಡಬಹುದು ಎಂದು ತಿಳಿಸಿದ್ದಾರೆ.

ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿ .

ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ: ಇದೇವೇಳೆ ಸೆ.16ರಿಂದ 18ರವರೆಗೆ ಮೈಸೂರಿನ ಚಾಮುಂಡಿ ಬೆಟ್ಟದೇವಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್‌ ತಿಳಿಸಿದ್ದಾರೆ. ಅಮವಾಸ್ಯೆ ಹಿನ್ನೆಲೆಯಲ್ಲಿ ಭಕ್ತಾದಿಗಳು ಹೆಚ್ಚಿನ ಪ್ರಮಾಣದಲ್ಲಿ ಬರುವುದರಿಂದ ಕೋವಿಡ್‌ ಹರಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಈ ನಿರ್ಬಂಧ ವಿಧಿಸಲಾಗಿದೆ.

PREV
click me!

Recommended Stories

ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ
ಡ್ರಗ್‌ ಪೆಡ್ಲರ್‌ಗಳಿಗೆ ಬೆಂಗಳೂರೇ ದೊಡ್ಡ ಟಾರ್ಗೆಟ್‌: ಚಾಕೋಲೆಟ್‌, ಕಾಫಿ ಪುಡಿ ಹೆಸರಲ್ಲಿ ಡ್ರಗ್ಸ್‌ ಸಾಗಾಟ