Mandya : 29 ನೇ ದಿನಕ್ಕೆ ರೈತ ಹಿತರಕ್ಷಣಾ ಸಮಿತಿ ಧರಣಿ

By Kannadaprabha NewsFirst Published Oct 4, 2023, 8:46 AM IST
Highlights

ತಮಿಳುನಾಡಿಗೆ ನೀರು ಬಿಡದಂತೆ ಒತ್ತಾಯಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದರು ನಡೆಯುತ್ತಿರುವ ಧರಣಿ ಸತ್ಯಾಗ್ರಹ ೨೯ನೇ ದಿನಕ್ಕೆ ಕಾಲಿಟ್ಟಿದೆ.

  ಮಂಡ್ಯ :  ತಮಿಳುನಾಡಿಗೆ ನೀರು ಬಿಡದಂತೆ ಒತ್ತಾಯಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದರು ನಡೆಯುತ್ತಿರುವ ಧರಣಿ ಸತ್ಯಾಗ್ರಹ ೨೯ನೇ ದಿನಕ್ಕೆ ಕಾಲಿಟ್ಟಿದೆ.

ಪಟಾಪಟಿ ಚಡ್ಡಿ, ಎಣ್ಣೆ ಬಾಟಲ್ ಹಿಡಿದು ಕನ್ನಡಸೇನೆ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರ ವಿರುದ್ಧ ಘೋಷಣೆ ಕೂಗಿದರು.

Latest Videos

ರಾಜ್ಯಕ್ಕೆ ಒಂದು ನ್ಯಾಯ, ತಮಿಳುನಾಡಿಗೆ ಮತ್ತೊಂದು ನ್ಯಾಯದಾನ ನೀಡುತ್ತಿರುವ ನದಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸಮಿತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದರು.

ರಾಜ್ಯ ಸರ್ಕಾರದ ಮಂತ್ರಿಗಳಿಗೆ ಚಡ್ಡಿಯ ಚಿಂತೆ. ಇರ್ವಿನ್ ನಾಲಾ ಚಳವಳಿ, ವರುಣಾ ಚಳವಳಿಯಲ್ಲಿ ಮಂಡ್ಯದ ರೈತರು ಚಡ್ಡಿ ಧರಿಸಿಯೇ ಹೋರಾಟ ಮಾಡಿ ನ್ಯಾಯ ಪಡೆದರು. ಇಂತಹ ಚಡ್ಡಿಯ ಬಗ್ಗೆ ಸಚಿವರು ಮಾತನಾಡುವುದನ್ನು ಬಿಟ್ಟು ಆಡಳಿತಾತ್ಮಕ ವಿಚಾರಗಳತ್ತ ಗಮನ ಹರಿಸಿ, ಮೊದಲು ರೈತರಿಗಾಗಿ ವಿಶೇಷ ಯೋಜನೆಗಳನ್ನು ರೂಪಿಸುವತ್ತ ಚಿಂತನೆ ನಡೆಸಬೇಕು. ಚಡ್ಡಿಯ ಬಗ್ಗೆ ಮಾತನಾಡುವವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.

ಹಳ್ಳಿ ಹಳ್ಳಿಗಳಿಗೆ ಬಾರು-ಬೀರು ಬೇಡ, ನೀರಾವರಿ ಯೋಜನೆಗಳನ್ನು ರೂಪಿಸಿ, ರೈತರಿಗೆ ನೀರಿನ ಭಾಗ್ಯ ಕಲ್ಪಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿದರು.

ಇಂದಿನ ಧರಣಿ ಸತ್ಯಾಗ್ರಹದಲ್ಲಿ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಮತ್ತವರ ಬೆಂಬಲಿಗರು ಪಾಲ್ಗೊಂಡಿದ್ದರು. ಬಿಜೆಪಿ ವಕ್ತಾರ ಸಿ.ಟಿ. ಮಂಜುನಾಥ್, ಹೊಸಹಳ್ಳಿ ಶಿವು, ಚಂದ್ರಶೇಖರ್, ಕನ್ನಡ ಸೇನೆ ಮಂಜುನಾಥ್, ಷಫಿ ಮೊಹಮ್ಮದ್, ಮಂಜುನಾಥ್, ಹಿತರಕ್ಷಣಾ ಸಮಿತಿಯ ಸುನಂದಾ ಜಯರಾಂ, ಅಂಬುಜಮ್ಮ, ಬೋರಯ್ಯ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಕನ್ನಡಪ್ರಭ ವಾರ್ತೆ ಮಂಡ್ಯ

ತಮಿಳುನಾಡಿಗೆ ನೀರು ಬಿಡದಂತೆ ಒತ್ತಾಯಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದರು ನಡೆಯುತ್ತಿರುವ ಧರಣಿ ಸತ್ಯಾಗ್ರಹ ೨೯ನೇ ದಿನಕ್ಕೆ ಕಾಲಿಟ್ಟಿದೆ.

ಪಟಾಪಟಿ ಚಡ್ಡಿ, ಎಣ್ಣೆ ಬಾಟಲ್ ಹಿಡಿದು ಕನ್ನಡಸೇನೆ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರ ವಿರುದ್ಧ ಘೋಷಣೆ ಕೂಗಿದರು.

ರಾಜ್ಯಕ್ಕೆ ಒಂದು ನ್ಯಾಯ, ತಮಿಳುನಾಡಿಗೆ ಮತ್ತೊಂದು ನ್ಯಾಯದಾನ ನೀಡುತ್ತಿರುವ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸಮಿತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದರು.

ರಾಜ್ಯ ಸರ್ಕಾರದ ಮಂತ್ರಿಗಳಿಗೆ ಚಡ್ಡಿಯ ಚಿಂತೆ. ಇರ್ವಿನ್ ನಾಲಾ ಚಳವಳಿ, ವರುಣಾ ಚಳವಳಿಯಲ್ಲಿ ಮಂಡ್ಯದ ರೈತರು ಚಡ್ಡಿ ಧರಿಸಿಯೇ ಹೋರಾಟ ಮಾಡಿ ನ್ಯಾಯ ಪಡೆದರು. ಇಂತಹ ಚಡ್ಡಿಯ ಬಗ್ಗೆ ಸಚಿವರು ಮಾತನಾಡುವುದನ್ನು ಬಿಟ್ಟು ಆಡಳಿತಾತ್ಮಕ ವಿಚಾರಗಳತ್ತ ಗಮನ ಹರಿಸಿ, ಮೊದಲು ರೈತರಿಗಾಗಿ ವಿಶೇಷ ಯೋಜನೆಗಳನ್ನು ರೂಪಿಸುವತ್ತ ಚಿಂತನೆ ನಡೆಸಬೇಕು. ಚಡ್ಡಿಯ ಬಗ್ಗೆ ಮಾತನಾಡುವವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.

ಹಳ್ಳಿ ಹಳ್ಳಿಗಳಿಗೆ ಬಾರು-ಬೀರು ಬೇಡ, ನೀರಾವರಿ ಯೋಜನೆಗಳನ್ನು ರೂಪಿಸಿ, ರೈತರಿಗೆ ನೀರಿನ ಭಾಗ್ಯ ಕಲ್ಪಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿದರು.

ಇಂದಿನ ಧರಣಿ ಸತ್ಯಾಗ್ರಹದಲ್ಲಿ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಮತ್ತವರ ಬೆಂಬಲಿಗರು ಪಾಲ್ಗೊಂಡಿದ್ದರು. ಬಿಜೆಪಿ ವಕ್ತಾರ ಸಿ.ಟಿ.ಮಂಜುನಾಥ್, ಹೊಸಹಳ್ಳಿ ಶಿವು, ಚಂದ್ರಶೇಖರ್, ಕನ್ನಡ ಸೇನೆ ಮಂಜುನಾಥ್, ಷಫಿ ಮೊಹಮ್ಮದ್, ಮಂಜುನಾಥ್, ಹಿತರಕ್ಷಣಾ ಸಮಿತಿಯ ಸುನಂದಾ ಜಯರಾಂ, ಅಂಬುಜಮ್ಮ, ಬೋರಯ್ಯ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

click me!