ಮಂಡ್ಯದ ಮೂವರು ಭ್ರಷ್ಟ ಪೊಲೀಸರು ಅಮಾನತು

By Sathish Kumar KH  |  First Published Jan 2, 2025, 9:28 PM IST

ಹೊರ ರಾಜ್ಯದ ವಾಹನಗಳಿಂದ ಹಣ ವಸೂಲಿ ಮಾಡುತ್ತಿದ್ದ ಮಂಡ್ಯ ಜಿಲ್ಲೆಯ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಕೆಆರ್‌ಎಸ್ ಪೊಲೀಸ್ ಠಾಣೆಯ ಮುಖ್ಯಪೇದೆ ಸೇರಿದಂತೆ ಇಬ್ಬರು ಪೇದೆಗಳನ್ನು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತುಗೊಳಿಸಿದ್ದಾರೆ.


ಮಂಡ್ಯ (ಜ.02): ಹೊರ ರಾಜ್ಯಗಳಿಂದ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಬೃಂದಾವನ ಗಾರ್ಡನ್ ನೋಡಲು ಬರುತ್ತಿದ್ದ ವಾಹನಗಳನ್ನು ಗುರಿಯಾಗಿಸಿಕೊಂಡು ಅವರಿಂದ ಹಣವನ್ನು ವಸೂಲಿ ಮಾಡುತ್ತಿದ್ದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಕುರಿತು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮೂವರು ಪೊಲೀಸರನ್ನು ಅಮಾನತ್ತು ಮಾಡಲಾಗಿದೆ. ಕೆಆರ್‌ಎಸ್ ಪೊಲೀಸ್ ಠಾಣೆಯ ಮುಖ್ಯಪೇದೆ ಸೇರಿದಂತೆ ಒಟ್ಟು ಮೂವರು ಪೊಲೀಸರು ಸೇರಿಕೊಂಡು ಹೊರ ರಾಜ್ಯದಿಂದ ಮಂಡ್ಯದ ಕೆಆರ್‌ಎಸ್ ಬೃಂದಾವನ ಗಾರ್ಡನ್ ನೋಡಲು ಬರುತ್ತಿದ್ದ ವಾಹನಗಳಿಂದ ಹಣ ವಸೂಲಿ ಮಾಡುತ್ತಿದ್ದರು. ಈ ಬಗ್ಗೆ ವಿಡಿಯೋ ಸಾಕ್ಷಿ ಸಮೇತ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯ ಪೇದೆ ಸೇರಿ ಮೂವರು ಪೊಲೀಸ್ ಪೇದೆಗಳ ಸಸ್ಪೆಂಡ್ ಮಾಡಲಾಗಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.

Tap to resize

Latest Videos

ಇದನ್ನೂ ಓದಿ: Mandya: ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಕೆನ್ನೆಗೆ ಬಾರಿಸಿದ ಆರೋಪಿ!

ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಠಾಣೆಯ ಮುಖ್ಯ ಪೇದೆ ಪುರುಷೋತ್ತಮ್, ಪೇದೆಗಳಾದ ಅನಿಲ್ ಕುಮಾರ್, ಪ್ರಭುಸ್ವಾಮಿ ಅಮಾನತ್ತಾದವರಾಗಿದ್ದಾರೆ. ಕೆಆರ್‌ಎಸ್ ಬೃಂದಾವನ ಗಾರ್ಡನ್ ವೀಕ್ಷಿಸಲು ಹೊರ ರಾಜ್ಯದಿಂದ ಹೆಚ್ಚಿನ ಪ್ರವಾಸಿಗರು ಬರುತ್ತಿದ್ದರು. ಆಗ ಹೊರ ರಾಜ್ಯದ ವಾಹನಗಳನ್ನೇ ಗುರಿಯಾಗಿಸಿ ಹಣ ವಸೂಲಿ ಮಾಡುತ್ತಿದ್ದ ವೀಡಿಯೋ ವೈರಲ್ ಆಗಿದೆ. ವೀಡಿಯೋ ಸಾಕ್ಷಿ ಆಧರಿಸಿ ಎಸ್‌ಪಿ ಮಲ್ಲಿಕಾರ್ಜುನ ಅವರು ಮೂವರು ಪೊಲೀಸರನ್ನು ಅಮಾನತ್ತು ಮಾಡಿದ್ದಾರೆ.

click me!