ಮದ್ದೂರು (ಮೇ.30): ಸಾಮಾಜಿಕ ಜಾಲತಾಣಗಳಲ್ಲಿ ನನ್ನ ವಿರುದ್ದ ಟೀಕೆ ಟಿಪ್ಪಣಿಗಳನ್ನು ಮಾಡುತ್ತಿರುವವರು ಯಾರು ಎನ್ನುವುದು ಸಮಾಜಕ್ಕೆ ತಿಳಿದ ವಿಚಾರ. ಇಂತಹ ಪೊಳ್ಳು ಆರೋಪಗಳಿಗೆ ಪ್ರತಿಕ್ರಿಯಿಸಲ್ಲ. ಅದರ ಅಗತ್ಯವೂ ಇಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ತಾಲೂಕಿನ ದೊಡ್ಡರಸಿನಕೆರೆ ಗ್ರಾಮದಲ್ಲಿ ರೆಬಲ್ ಸ್ಟಾರ್ ದಿ. ಅಂಬರೀಶ್ ಅವರ 69ನೆ ಹುಟ್ಟುಹಬ್ಬದ ಅಂಗವಾಗಿ ಸಮಾಧಿಗೆ ಪೂಜೆ ಸಲ್ಲಿಸಲು ತೆರಳುತ್ತಿದ್ದ ವೇಳೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡುತ್ತಿರುವವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಒವರ್ಯಾರಯ ಕಷ್ಟದ ಜೀವಿಗಳಲ್ಲ. ರಾಜಕೀಯ ವಿಚಾರಕ್ಕಾಗಿ ಮಾತ್ರ ನನ್ನ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ.
ಇಂದು ರೆಬೆಲ್ ಸ್ಟಾರ್ ಅಂಬರೀಶ್ ಹುಟ್ಟುಹಬ್ಬ!
ನಾನು ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಹೀಗಾಹಿ ಪೊಳ್ಳು ಆರೋಪಗಳಿಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದರು.
ಕೊರೋನಾ ಸೋಂಕಿನಿಂದ ಕನ್ನಡ ಚಿತ್ರರಂಗ ಮಾತ್ರವಲ್ಲದೆ ನಾಡಿನ ಸಮಸ್ತ ಜನತೆ ಸಂಕಷ್ಟದಲ್ಲಿದ್ದಾರೆ ಇಂತಹ ಸಮಯದಲ್ಲಿ ವಿರೋಧಿಗಳ ಟೀಕೆ ಟಿಪ್ಪಣಿಗಳನ್ನು ಬಿಟ್ಟು ಸರ್ಕಾರದೊಂದಿಗೆ ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು.
ಮಂಡ್ಯ ಜನತೆಯ ಕಷ್ಟಗಳಿಗೆ ಸ್ಪಂದಿಸುವುದು ನನ್ನ ಮೊದಲ ಆದ್ಯತೆ ಎಂದು ಸುಮಲತಾ ಹೇಳಿದರು.