ಸ್ವ ಕ್ಷೇತ್ರದಲ್ಲಿ ಬೀಡು ಬಿಟ್ಟ ಸಂಸದೆ ಸುಮಲತಾ

Published : Aug 13, 2019, 12:21 PM ISTUpdated : Aug 13, 2019, 01:11 PM IST
ಸ್ವ ಕ್ಷೇತ್ರದಲ್ಲಿ ಬೀಡು ಬಿಟ್ಟ ಸಂಸದೆ ಸುಮಲತಾ

ಸಾರಾಂಶ

ಲೋಕಸಭಾ ಅಧಿವೇಶನ ಮುಕ್ತಾಯದ ಬಳಿಕ ಸ್ವ ಕ್ಷೇತ್ರಕ್ಕೆ ತೆರಳಿರುವ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲೇ ಬೀಡು ಬಿಟ್ಟಿದ್ದಾರೆ. ಇಲ್ಲಿನ ಜನರ ಸಮಸ್ಯೆ ಆಲಿಸುತ್ತಿದ್ದಾರೆ. 

ಮಂಡ್ಯ(ಆ.13]: ಸಂಸದೆ ಸುಮಲತಾ ಅಂಬರೀಶ್ ಕಳೆದ ಎರಡು ದಿನಗಳಿಂದ ಮಂಡ್ಯದಲ್ಲಿಯೇ ಬೀಡು ಬಿಟ್ಟಿದ್ದಾರೆ. ಅಲ್ಲಿನ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. 

ಮಳವಳ್ಳಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಜನರ ಕುಂದುಕೊರತೆಗಳ ಬಗ್ಗೆ ಈ ಸಂದರ್ಭದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಕಿವಿಯಾಗಿದ್ದಾರೆ. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ತಾಲೂಕು ಮಟ್ಟದ ಸಭೆಯ ಬಳಿಕ ಸುಮಲತಾ ಅಂಬರೀಶ್ ಜಿಲ್ಲಾ ಪಂಚಾಯತ್ ಸಭೆಯಲ್ಲಿಯೂ ಕೂಡ ಪಾಲ್ಗೊಳ್ಳಲಿದ್ದು, ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. 

ಲೋಕಸಭಾ ಅಧಿವೇಶನ ಮುಕ್ತಾಯದ ಬಳಿಕ ಜಿಲ್ಲೆಗೆ ಆಗಮಿಸಿರುವ ಸುಮಲತಾ ತಮ್ಮ ಕ್ಷೇತ್ರದ ಜನರ ಸಮಸ್ಯೆಗಳ ನಿವಾರಣೆಯತ್ತ ಗಮನ ಹರಿಸಿದ್ದಾರೆ. 

PREV
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು