ಮಂಡ್ಯದ ಮಳವಳ್ಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ತಾಯಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಮಂಡ್ಯ (ಮಾ.15): ಬೆಳ್ಳಂಬೆಳಗ್ಗೆ ಮಂಡ್ಯದ ಮಳವಳ್ಳಿ ಪಟ್ಟಣದ ಕೊಳ್ಳೆಗಾಲ ರಸ್ತೆಯ ಕಣಿಗಲ್ ಹಳ್ಳದ ಬಳಿ ಹೃದಯವಿದ್ರಾವಕ ಆಕ್ಸಿಡೆಂಟ್ ನಡೆದಿದೆ. ಇಬ್ಬರು ಹೆಣ್ಣುಮಕ್ಕಳನ್ನು ಸ್ಕೂಟರ್‌ನಲ್ಲಿ ಕೂರಿಸಿಕೊಂಡು ಶಾಲೆಗೆ ಬಿಡಲು ಹೋಗುತ್ತಿದ್ದಾಗ, ಎಳನೀರು ತುಂಬಿಕೊಂಡು ಬರುತ್ತಿದ್ದ ಬುಲೊರೋ ವಾಹನ ಢಿಕ್ಕಿಯಾಗಿದೆ. ತಾಯಿ ನಡುರಸ್ತೆಯಲ್ಲೇ ಸಾವು ಕಂಡಿದ್ದಾರೆ. ತಾಯಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿ ಮಕ್ಕಳ ಆಕ್ರಂದನ ಕರುಳುಹಿಂಡುವಂತಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆಯ ತಲೆಗೆ ಪೆಟ್ಟಾಗಿ ಸ್ಥಳದಲ್ಲಿಯೇ ಸಾವು ಕಂಡಿದ್ದರೆ, ಇಬ್ಬರು ಮಕ್ಕಳಿಗೆ ಗಾಯವಾಗಿದೆ.
ವೇಗವಾಗಿ ಬರುತ್ತಿದ್ದ ಬೊಲೆರೊ ವಾಹನಕ್ಕೆ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಕುಂದೂರು ಗ್ರಾಮದ 39 ವರ್ಷದ ಮಹಿಳೆ ಶಿಲ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಕ್ಕಳಾದ 7 ವರ್ಷದ ಅನನ್ಯ ಹಾಗೂ 5 ವರ್ಷದ ಮಾನ್ಯಗೆ ಗಾಯವಾಗಿದೆ. ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವ ವೇಳೆ ದುರ್ಘಟನೆ ಸಂಭವಿಸಿದೆ. ತಲೆಗೆ ತೀವ್ರ ಪೆಟ್ಟು ಬಿದ್ದು ಶಿಲ್ಪ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಮಂಡ್ಯದ ಚುನಾವಣೆಯಲ್ಲಿ ಸುಮಲತಾ ವಿರುದ್ಧ ದರ್ಶನ್ ಸ್ಪರ್ಧೆ
ತೀವ್ರವಾಗಿ ಗಾಯಗೊಂಡ ಮಕ್ಕಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ ಮಾಡಿದ್ದು, ಮಹಿಳೆಯ ಶವವನ್ನು ಮಳವಳ್ಳಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮದ್ದೂರು : ಪತ್ನಿ, ಮಗು ಅಪಹರಿಸಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ಯತ್ನ
ತಾಯಿಯ ಶವ ಕಂಡು ಇಬ್ಬರು ಹೆಣ್ಣು ಮಕ್ಕಳ ಗೋಳಾಟ..
ಶಿಲ್ಪಾ ಅವರ ಮೃತದೇಹವನ್ನು ಪಿಕ್‌ಅಪ್ ವಾಹನದಲ್ಲಿ ಆಸ್ಪತ್ರೆಗೆ ದಾಗಿಸಲಾಯಿತು..
ಆಸ್ಪತ್ರೆಯಲ್ಲಿ ಶಿಲ್ಪಾ ಮೃತದೇಹ..