
ಮಂಡ್ಯ(ಸೆ.16): ಐರಾವತ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಬೆಂಗಳೂರು- ಮೈಸೂರು ಹೆದ್ದಾರಿಯ ಮದ್ದೂರು ತಾಲೂಕಿನ ರುದ್ರಾಕ್ಷಿ ಪುರದ ಬಳಿ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಮೈಸೂರಿನ ಕೆ.ಸಿ. ಲೇಔಟ್ ನ ಸುಕನ್ಯಾ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತೀಯಾದ ವೇಗದಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಮದ್ದೂರು ಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.