ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಪೂರ್ವ ನಿಯೋಜಿತ ಎಂದು ಮಂಗಳೂರಿನ ಮುಸ್ಲಿಂ ಸಂಘಟನೆಗಳು ಆರೋಪಿಸಿವೆ. ಪೊಲೀಸರು ಗೋಲಿಬಾರ್ ನಡೆಸೋ ಅಗತ್ಯವಿರಲಿಲ್ಲ. ಪೊಲೀಸರು ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಮಂಗಳೂರು(ಡಿ.21): ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಪೂರ್ವ ನಿಯೋಜಿತ ಎಂದು ಮಂಗಳೂರಿನ ಮುಸ್ಲಿಂ ಸಂಘಟನೆಗಳು ಆರೋಪಿಸಿವೆ. ಪೊಲೀಸರು ಗೋಲಿಬಾರ್ ನಡೆಸೋ ಅಗತ್ಯವಿರಲಿಲ್ಲ. ಪೊಲೀಸರು ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಮುಸ್ಲಿಂ ಸಂಘಟನೆ ಪಿಎಫ್‌ಐ ಸಂಘಟನೆಯ ಮುಖಂಡ ಅಶ್ರಫ್ ಕೆ. ಅಗ್ನಾಡಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದು, ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಪೊಲೀಸರ ಪೂರ್ವ ನಿಯೋಜಿತ ಕೃತ್ಯ. ಮುಸ್ಲಿಂ ಯುವಕರು ಶಾಂತ ರೀತಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದರು. ಅವರ ಮೇಲೆ ಲಾಠಿಚಾರ್ಜ್, ಅಶ್ರುವಾಯು ಸಿಡಿಸಿ ಆಕ್ರೋಶಿತರನ್ನಾಗಿಸಿದ್ದಾರೆ ಎಂದು ಹೇಳಿದ್ದಾರೆ.
ಮಂಗಳೂರು: ಕಾಂಗ್ರೆಸ್ ಪಕ್ಷದ ನಿಯೋಗ ಪೊಲೀಸ್ ವಶಕ್ಕೆ
ಪೊಲೀಸರು ಗೋಲಿಬಾರ್ ನಡೆಸೋ ಅಗತ್ಯವಿರಲಿಲ್ಲ. ಪೊಲೀಸರು ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮುಸ್ಲಿಂ ಸಂಘಟನೆಗಳು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಿ ನಂತರದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ತಳೆದಿತ್ತು.
ಮಂಗಳೂರು: ಬೆಳ್ತಂಗಡಿಯಲ್ಲಿ ಐದು ಬಸ್‌ಗಳಿಗೆ ಕಲ್ಲುತೂರಾಟ..!