ಕುವೈಟ್‌ನಿಂದ ಆಗಮಿಸಿ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಇಲ್ಲದಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.
ಮಂಗಳೂರು(ಮಾ.15): ಕುವೈಟ್‌ನಿಂದ ಆಗಮಿಸಿ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಇಲ್ಲದಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.
ಕುವೈಟ್‌ನಿಂದ ವಿಮಾನ ಸಂಚಾರ ರದ್ದು ಮಾಡುವ ಮೊದಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಈ ವ್ಯಕ್ತಿಯಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದಿದ್ದರಿಂದ ಕೂಡಲೆ ಅವರನ್ನು ವೈದ್ಯಕೀಯ ನಿಗಾದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ನಡುವೆ ಅವರ ಗಂಟಲ ದ್ರವ ಮಾದರಿಯನ್ನು ಪರೀಕ್ಷಾಲಯಕ್ಕೆ ಕಳುಹಿಸಲಾಗಿದ್ದು, ಶನಿವಾರ ನೆಗೆಟಿವ್ ಎನ್ನುವ ವರದಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿದ್ದ ವ್ಯಕ್ತಿಯನ್ನು ಬಿಡುಗಡೆಗೊಳಿಸಲಾಗಿದೆ.
ಕೊರೋನಾ ನಿವಾರಣೆಗೆ ಶಾಸಕರಿಂದ ವಿಶೇಷ ಪೂಜೆ, ಪ್ರಾರ್ಥನೆ
ಕೆಲ ದಿನಗಳ ಹಿಂದೆ ಉಳ್ಳಾಲ ಮೂಲದ ವ್ಯಕ್ತಿಯೊಬ್ಬರನ್ನು ಕೊರೋನಾ ಶಂಕೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಅವರು ಕಾರಣಾಂತರಗಳಿಂದ ಅಲ್ಲಿಂದ ತಪ್ಪಿಸಿಕೊಂಡಿದ್ದರು. ಬಳಿಕ ಅವರನ್ನು ಪತ್ತೆಹಚ್ಚಿ ಗ್ರಾಮಾಂತರದ ಆರೋಗ್ಯ ಕೇಂದ್ರಕ್ಕೆ ಮತ್ತೆ ಸೇರಿಸಲಾಗಿತ್ತು. ಆ ಪ್ರಕರಣದಲ್ಲೂ ಕೊರೋನಾ ನೆಗೆಟಿವ್ ವರದಿ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು. ಇದುವರೆಗೆ ದ.ಕ. ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಯಾರಲ್ಲೂ ದೃಢಪಟ್ಟಿಲ್ಲ.