'ಸಿದ್ದು ಸೃಷ್ಟಿಸಿದ ಮರಿ ಟಿಪ್ಪುಗಳಿಂದ ಮಂಗಳೂರಲ್ಲಿ ಗಲಭೆ..'!

Suvarna News   | Asianet News
Published : Dec 24, 2019, 03:15 PM IST
'ಸಿದ್ದು ಸೃಷ್ಟಿಸಿದ ಮರಿ ಟಿಪ್ಪುಗಳಿಂದ ಮಂಗಳೂರಲ್ಲಿ ಗಲಭೆ..'!

ಸಾರಾಂಶ

ಸಿದ್ದರಾಮಯ್ಯ ಸೃಷ್ಟಿಸಿದ ಮರಿ ಟಿಪ್ಪುಗಳು ಗಲಭೆ ಮಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಗಲಭೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು(ಡಿ.24): ಸಿದ್ದರಾಮಯ್ಯ ಸೃಷ್ಟಿಸಿದ ಮರಿ ಟಿಪ್ಪುಗಳು ಗಲಭೆ ಮಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಗಲಭೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸಂಸದ ಪ್ರತಾಪ್‌ ಸಿಂಹ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಸೊಳ್ಳೆ ಇದ್ದಂತೆ. ಕೊಚ್ಚೆ ಎಲ್ಲಿರುತ್ತೋ ಅಲ್ಲಿಗೆ ಸೊಳ್ಳೆ ಹುಡುಕಿಕೊಂಡು ಹೋಗುತ್ತೆ. ಕಾಂಗ್ರೆಸ್ ಎಲ್ಲಿರುತ್ತೋ ಅಲ್ಲಿ ನಿರುದ್ಯೋಗ, ಅಕ್ಷರತೆ, ದೌರ್ಜನ್ಯ, ಬಡತನ ಇದ್ದೆ ಇರುತ್ತೆ ಎಂದು ಹೇಳಿದ್ದಾರೆ.

ಮಂಗಳೂರು: ಗಲಭೆಗೂ ಮುನ್ನ SDPI ಮಖಂಡ ಹಾಕಿದ್ದ ಪ್ರಚೋದನಾತ್ಮಕ ಸಂದೇಶ ವೈರಲ್..!.

ಈ ರೀತಿಯ ಗಲಭೆ ಮಾಡುತ್ತಿರುವವರು ಸಿದ್ದರಾಮಯ್ಯ ಸೃಷ್ಟಿಸಿದ ಮರಿ ಟಿಪ್ಪುಗಳು. ಅವರನ್ನೆಲ್ಲ ಇಟ್ಟುಕೊಂಡು ಈ ರೀತಿಯ ಗಲಭೆ ಮಾಡಿಸುತ್ತಿದ್ದಾರೆ. ಆಸ್ಪತ್ರೆಗೆ ನುಗ್ಗಿ ಬಾಗಿಲು ಹಾಕಿಕೊಂಡು ರೋಗಿಗಳ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಕಾಂಗ್ರೆಸ್‌ಗೆ ಅಧಿಕಾರದ ಚಡಪಡಿಕೆ ಶುರುವಾಗಿದೆ ಎಂದು ಆರೋಪಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಮಂಗಳೂರು ಗಲಭೆಯ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಿಜೆಪಿ ಇದ್ದ ಕಡೆ ಈ ರೀತಿ ಗಲಭೆ ಸೃಷ್ಟಿಸಿ ಅಧಿಕಾರ ಹಿಡಿಯುವ ಹುನ್ನಾರ ಕಾಂಗ್ರೆಸ್ ಮಾಡುತ್ತಿದೆ. ಕೋಮು ದಳ್ಳುರಿ ಸೃಷ್ಟಿಸಿ ಅಧಿಕಾರ ಹಿಡಿಯುವುದು ಬಹಿರಂಗವಾಗಿದೆ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್‌ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.

PREV
click me!

Recommended Stories

ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!