ದಿನವಿಡೀ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ

By Kannadaprabha News  |  First Published Aug 11, 2019, 2:22 PM IST

ಕರಾವಳಿಯಲ್ಲಿ ಕಳೆದೊಂದು ವಾರದಿಂದ ಸುರಿದ ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳು ಜಲಾವೃತವಾಗಿದೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಅವರು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ವೀಕ್ಷಿಸಿದರು. ಶಾಸಕ ಕಾಮತ್‌ ಆಲಿಸಿ ಸ್ಥಳದಲ್ಲಿಯೇ ಸೂಕ್ತ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸಿದರು.


ಮಂಗಳೂರು(ಆ.11): ಮಂಗಳೂರಿನಲ್ಲಿ ಸುರಿದ ಮಳೆಗೆ ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಅವರು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ವೀಕ್ಷಿಸಿದರು.

ನಂತರ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

Tap to resize

Latest Videos

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಂಗಳೂರು ಮಹಾನಗರದ ಬೋಳೂರು, ಕುದ್ರೋಳಿ, ಬೊಕ್ಕಪಟ್ಣ, ಬೋಳೂರಿನ ಪರವು ಪ್ರದೇಶಗಳಿಗೆ ಭೇಟಿ ನೀಡಿ ನಾಗರಿಕರ ಸಂಕಷ್ಟವನ್ನು ಶಾಸಕ ಕಾಮತ್‌ ಆಲಿಸಿ ಸ್ಥಳದಲ್ಲಿಯೇ ಸೂಕ್ತ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸಿದರು. ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ, ಜಗದೀಶ್‌ ಶೆಟ್ಟಿ, ವಸಂತ ಪೂಜಾರಿ, ರಾಹುಲ್‌ ಇದ್ದರು.

ದಾವಣಗೆರೆ: ನೆರೆ ಸಂತ್ರಸ್ಥರಿಗೆ ಬಿಜೆಪಿ ದೇಣಿಗೆ ಸಂಗ್ರಹ

Mangalore south MLA  D Vedavyas Kamath Visits flooded areas

click me!