Mangaluru Surathkal toll Plaza Row: ಮಂಗಳೂರಿನಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ಸುರತ್ಕಲ್ ಟೋಲ್ ಗೇಟ್ ಕೊನೆಗೂ ರದ್ದಾಗಿದೆ. ಈ ಬಗ್ಗೆ ದ.ಕ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅಧಿಕೃತವಾಗಿ ಟ್ವೀಟ್ ಮಾಡಿದ್ದು, ಸುರತ್ಕಲ್ ಟೋಲ್ ಗೇಟ್ ರದ್ದು ಮಾಡಿರುವುದಕ್ಕೆ ಕೇಂದ್ರ ಸರ್ಕಾರಕ್ಕೆ ಟ್ವಿಟರ್‌ನಲ್ಲಿ ಧನ್ಯವಾದ ತಿಳಿಸಿದ್ದಾರೆ.
ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್ ಮಂಗಳೂರು
ಮಂಗಳೂರು (ನ.14): ಮಂಗಳೂರಿನಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ಸುರತ್ಕಲ್ ಟೋಲ್ ಗೇಟ್ ಕೊನೆಗೂ ರದ್ದಾಗಿದೆ. ಈ ಬಗ್ಗೆ ದ.ಕ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅಧಿಕೃತವಾಗಿ ಟ್ವೀಟ್ ಮಾಡಿದ್ದು, ಸುರತ್ಕಲ್ ಟೋಲ್ ಗೇಟ್ ರದ್ದು ಮಾಡಿರುವುದಕ್ಕೆ ಕೇಂದ್ರ ಸರ್ಕಾರಕ್ಕೆ ಟ್ವಿಟರ್‌ನಲ್ಲಿ ಧನ್ಯವಾದ ತಿಳಿಸಿದ್ದಾರೆ.
ಸುರತ್ಕಲ್ ಟೋಲ್ ಗೇಟ್ ರದ್ದತಿಗೆ ಸಂಬಂಧಿಸಿದ ನಮ್ಮ ಮನವಿಗೆ ಸ್ಪಂದಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಟೋಲ್ ರದ್ದು ಮಾಡುವ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ. ಕೊನೆಗೂ ಟೋಲ್ ವಿರೋಧಿ ಹೋರಾಟ ಸಮಿತಿ ಹೋರಾಟಕ್ಕೆ ಗೆಲುವು ಸಿಕ್ಕಿದೆ.
Magalauru: ಕಾಂಗ್ರೆಸ್ ನಾಯಕಿ ವಿರುದ್ದ ಟ್ರೋಲ್, ಕಮಿಷನರ್ ಗೆ ದೂರು ಕೊಟ್ಟ ಪ್ರತಿಭಾ ಕುಳಾಯಿ!
ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ವಿರುದ್ದ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ಸಮಿತಿ, ಅಕ್ಟೋಬರ್ 28ರಂದು ಸುರತ್ಕಲ್ ಟೋಲ್ ಬಳಿ ಧರಣಿ ಆರಂಭಿಸಿತ್ತು. ಅನಿರ್ಧಿಷ್ಟ ಕಾಲ ಹಗಲು-ರಾತ್ರಿ ಧರಣಿ ನಡೆಸಿದ್ದರು. ವಾರದ ಹಿಂದೆಯಷ್ಟೇ ಹೋರಾಟ ಸಮಿತಿ ಟೋಲ್ ಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ, ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿರುವ ಟೋಲ್ ಗೇಟ್ ವಿರುದ್ದ ಕಾಂಗ್ರೆಸ್, ಡಿವೈಎಫ್ಐ, ಸಿಪಿಐಎಂ ಸೇರಿ ಹತ್ತಾರು ಸಮಾನ ಮನಸ್ಕ ಸಂಘಟನೆಗಳ ಸಮಿತಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿವೆ.
2015 ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆರಂಭಗೊಂಡಿದ್ದ ಟೋಲ್ ಗೇಟ್ ಅನಧಿಕೃತ ಎನ್ನುವುದು ಇವರ ಆರೋಪ. ಹೈವೆಯಲ್ಲಿ 60 ಕಿಲೋಮೀಟರ್ ಅಂತರದಲ್ಲಿ ಟೋಲ್ ಇರಬೇಕಾದದ್ದು ಹೆದ್ದಾರಿ ಪ್ರಾಧಿಕಾರದ ನಿಯಮ. ಆದರೆ ಸುರತ್ಕಲ್ ಟೋಲ್ ಆ ನಿಯಮವನ್ನು ಮೀರಿದೆ ಎಂಬ ಆರೋಪ ಇದೆ. ಸುರತ್ಕಲ್ ಟೋಲ್ ನಿಂದ ಉಡುಪಿಯ ಹೆಜಮಾಡಿ ಟೋಲ್ ಪ್ಲಾಜಾ ದೂರ ಕೇವಲ 17 ಕಿ.ಮೀ ಇದೆ. ಹೀಗಾಗಿ ಸುರತ್ಕಲ್ ನಲ್ಲಿ ಅಕ್ರಮವಾಗಿ ಹಲವು ವರ್ಷಗಳಿಂದ ಟೋಲ್ ಸಂಗ್ರಹ ಆರೋಪ ವ್ಯಕ್ತವಾಗಿತ್ತು. ಇದೀಗ ಮನವಿಗೆ ಸ್ಪಂದಿಸಿ ಟೋಲ್ ಗೇಟ್ ರದ್ದುಪಡಿಸಿಸಿರುವುದರಿಂದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.
Surathkal Toll Gate Issue: ಟೋಲ್ ಗೇಟ್ ಕಿತ್ತೆಸೆಯಲು ನಾಳೆ ನೇರ ಕಾರ್ಯಾಚರಣೆ!
ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ಶ್ರೀ ಹಾಗೂ ಪ್ರಧಾನಿ ಶ್ರೀ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.
ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ.