ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ದುರಂತ..!

By Web DeskFirst Published Jun 30, 2019, 8:08 PM IST
Highlights

ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ದುರಂತ|  ರನ್ ವೇನಿಂದ ಜಾರಿ ಸಾಕಷ್ಟು ಮುಂದೆ ಲ್ಯಾಂಡ್ ಆದ ಏರ್ ಇಂಡಿಯಾ ವಿಮಾನ| ಮಂಗಳೂರಿನ ಬಜಪೆಯ  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ| ಪೈಲೆಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ| ದುರಂತ ತಪ್ಪಿದ ಹಿನ್ನೆಲೆ ನಿಟ್ಟುಸಿರು ಬಿಟ್ಟ 183 ಪ್ರಯಾಣಿಕರು.

ಮಂಗಳೂರು, [ಜೂ.30]: ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ರನ್ ವೇಯಿಂದ ಹೊರ ಬಂದಿದ್ದು, ಪೈಲೆಟ್ ಸಮಯಪ್ರಜ್ಞೆಯಿಂದಾಗ ದೊಡ್ಡ ಅನಾಹುತವೊಂದು ತಪ್ಪಿದೆ.

181 ಪ್ರಯಾಣಿಕರನ್ನು ಹೊತ್ತು  ದುಬೈನಿಂದ ಹೊರಟ ಏರ್ ಇಂಡಿಯಾ ವಿಮಾನ ಇಂದು [ಭಾನುವಾರ] ಸಂಜೆ 5.20ಕ್ಕೆ ಮಂಗಳೂರಿನ ಬಜಪೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಹೊರ ಬಂದಿದೆ.

ಇದ್ರಿಂದ ವಿಮಾನದಲ್ಲಿದ್ದ ಪ್ರಯಾಣಿಕರು ಹಾಗೂ ನಿಲ್ದಾಣದ ಸಿಬ್ಬಂದಿಗಳು ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ. ಅದೃಷ್ಟವಶಾತ್ ಪೈಲೆಟ್ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ್ದು, 183 ಪ್ರಯಾಣಿಕರು ನಿಟ್ಟುಸಿರುಬಿಟ್ಟಿದ್ದಾರೆ.

Mangalore Airport Official: IX384 Air India Express Dubai to Mangalore aircraft veered off the taxiway around 5:40 pm today. All passengers are safe & have been deboarded. More details awaited. pic.twitter.com/wHh4EAlH9G

— ANI (@ANI)


 ವಿಮಾನದಲ್ಲಿದ್ದ ಸಿಬ್ಬಂದಿ ಸೇರಿದಂತೆ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಏರ್‌ಪೋರ್ಟ್‌  ಮೂಲಗಳು ತಿಳಿಸಿವೆ.  ವಿಮಾನ ರನ್ ವೇಯಿಂದ ಹೊರ ಬರಲು ನಿಖರ ಕಾರಣ ತಿಳಿದು ಬಂದಿಲ್ಲ. 

ಸ್ಥಳದಲ್ಲಿ ವಿಮಾನದ ಸಿಬ್ಬಂದಿ ಆಗಮಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರ ಕರೆತಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 22 ಮೇ, 2010ರಲ್ಲಿ  ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ, 6 ಜನ ಸಿಬ್ಬಂದಿ ಸೇರಿದಂತೆ 166 ಮಂದಿಯನ್ನು ಹೊತ್ತು ತಂದಿದ್ದ ವಿಮಾನ ಬಜ್ಪೆ ವಿಮಾನ ನಿಲ್ದಾಣದಲ್ಲಿ ರನ್ ವೇಯನ್ನು ಜಿಗಿದು ಹತ್ತಿರದಲ್ಲಿದ್ದ ಗುಡ್ಡಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿತ್ತು. 

ಈ ದುರಂತದಲ್ಲಿ 8 ಜನ ಬದುಕುಳಿದಿದ್ದರೆ, ಮಡಿದ 158 ಮಂದಿಯಲ್ಲಿ 12 ಮಂದಿಯ ಗುರುತನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಆದಿನ ಕಹಿ ದಿನ ಮೃತದೇಹಗಳನ್ನು ತಣ್ಣೀರು ಬಾವಿ ಸಮುದ್ರ ಕಿನಾರೆಯ ಸಮೀಪ ಜಿಲ್ಲಾಡಳಿತದ ವತಿಯಿಂದ ಸರಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಘಟನೆ ನಡೆದು ಬರೋಬ್ಬರಿ 9 ವರ್ಷಗಳೇ ಕಳೆದರು ಮಂಗಳೂರು ಜನತೆಗೆ ಮಾತ್ರ ಇದನ್ನು ಇನ್ನೂ ಮರೆತಿಲ್ಲ. ಇದರ ಮಧ್ಯೆ ಈ ರೀತಿಯ ಅವಘಡ ಸಂಭವಿಸಿದೆ.

click me!