ಹೈ ಅಲರ್ಟ್: ಮಂಗಳೂರಿನಲ್ಲಿ ಮತ್ತೆ ಇಬ್ಬರು ಶಂಕಿತರ ಬಂಧನ

Published : Aug 24, 2019, 05:00 PM ISTUpdated : Aug 24, 2019, 05:20 PM IST
ಹೈ ಅಲರ್ಟ್: ಮಂಗಳೂರಿನಲ್ಲಿ ಮತ್ತೆ ಇಬ್ಬರು ಶಂಕಿತರ ಬಂಧನ

ಸಾರಾಂಶ

ಉಗ್ರರು ಪೈಶಾಚಿಕ ಕೃತ್ಯ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸೂಚನೆ ಮೇರೆಗೆ ರಾಜ್ಯದಲ್ಲಿ ಹೈಅಲರ್ಟ್​ ಘೋಷಣೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತ  ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದೆಲ್ಲೆಡೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಇದರ ಬೆನ್ನಲ್ಲೇ ಮಂಗಳೂರಿನಲ್ಲಿ ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು, (ಆ.24): ಮಂಗಳೂರಿನಲ್ಲಿ  ಮತ್ತೆ ಇಬ್ಬರು ಅನುಮಾನಸ್ಪದ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊನ್ನೇ ಅಷ್ಟೇ ಕೇಂದ್ರ ಕ್ರೈಂ ಬ್ರಾಂಚ್ ಬೋರ್ಡ್‌ ಇರುವ ವಾಹನದಲ್ಲಿ ಸುತ್ತಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದರು.

ಇದರ ಬೆನ್ನಲ್ಲೇ ಇಂದು (ಶನಿವಾರ) ಮತ್ತಿಬ್ಬರನ್ನು ಬಂಧಿಸಿದ್ದಾರೆ. ಕಾಶ್ಮೀರ ಮೂಲದ ಶೌಖತ್ ಅಹಮದ್ ಲೋನೆ ಹಾಗೂ ಚಂಡೀಗಢ ಮೂಲದ ಬಲ್ಜಿಂಧರ್ ಸಿಂಗ್ ಬಂಧಿತರು.

ಟೆರರ್ ಅಲರ್ಟ್: ಶಂಕಿತರನ್ನು ಮಂಗಳೂರು ಪೊಲೀಸರು ಖೆಡ್ಡಾಗೆ ಬೀಳಿಸಿದ್ದು ಹೀಗೆ...

ಈ ಇಬ್ಬರು ಡಬ್ಲ್ಯೂ.ಹೆಚ್.ಓ ದ ನಿರ್ದೇಶಕರು ಎಂದು ಹೇಳಿಕೊಂಡು ಆಗಸ್ಟ್ 16 ರಂದು ಮಂಗಳೂರಿಗೆ ಬಂದು ಮಂಗಳೂರಿನ ಲಾಡ್ಜ್‌ನಲ್ಲಿ ವಾಸ್ತವ್ಯ ಹೂಡಿದ್ದರು.

ಇವರ ಮೇಲೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಫೋಟೋ ಬಿಡುಗಡೆ ಮಾಡಿದ್ದು, ಇವರ ಬಗ್ಗೆ ಮಾಹಿತಿ ಇದ್ರೆ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

PREV
click me!

Recommended Stories

ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!
ಡಿ.16ರಂದು ಮಂಡ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ಜಿಲ್ಲಾಡಳಿತದಿಂದ ಭರದ ಸಿದ್ದತೆ, ಕಟ್ಟುನಿಟ್ಟಿನ ಭದ್ರತೆ