ಸಾರ್ವಜನಿಕ ಶಿಕ್ಷಣ ಉಳಿಸಿ ಹೋರಾಟದ ಹಲವು ಬೇಡಿಕೆಗಳಿಗೆ ರಾಜ್ಯ ಬಜೆಟ್‌ನಲ್ಲಿ ಮನ್ನಣೆ ಸಿಕ್ಕಿದ್ದು, ಇದು ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ ಎಂದು ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ತಿಳಿಸಿದ್ದಾರೆ.
ಮೈಸೂರು: ಸಾರ್ವಜನಿಕ ಶಿಕ್ಷಣ ಉಳಿಸಿ ಹೋರಾಟದ ಹಲವು ಬೇಡಿಕೆಗಳಿಗೆ ರಾಜ್ಯ ಬಜೆಟ್‌ನಲ್ಲಿ ಮನ್ನಣೆ ಸಿಕ್ಕಿದ್ದು, ಇದು ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ ಎಂದು ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ತಿಳಿಸಿದ್ದಾರೆ.
ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಬಲಪಡಿಸಲು ನಡೆಯುತ್ತಿ ರುವ ವಿದ್ಯಾರ್ಥಿಗಳ ಹೋರಾಟದ ಫಲವಾಗಿ, ಸಾರ್ವಜನಿಕ ಶಿಕ್ಷಣ ಬಲಪಡಿಸುವಲ್ಲಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಹಲವು ಘೋಷಣೆಗಳನ್ನು ನೀಡಿರುವುದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ. ಇದು ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯವಾಗಿದೆ. ಸರ್ಕಾರಿ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಸರ್ಕಾರಿ ಶಾಲೆಗಳ ನವೀಕರಣ, ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ಪಾಸ್, ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಸೇರಿದಂತೆ ಹಲವು ವಿದ್ಯಾರ್ಥಿ ಹೋರಾ ಟದ ಬೇಡಿಕೆಗಳಿಗೆ ಸ್ಪಂದನೆ ದೊರೆತಿದೆ.
undefined
ಪ್ರತಿ ಜಿಲ್ಲೆಗೂ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ, ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಮತ್ತು ಇನ್ನಿತರ ವಿದ್ಯಾರ್ಥಿಗಳ ಬೇಡಿಕೆಗಳು ಈ ಬಜೆಟ್‌ನಲ್ಲಿಯೂ ಈಡೇರಿಲ್ಲ ಎಂದು ದೂರಿದ್ದಾರೆ. ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲಾಗುತ್ತಿದ್ದ ಲ್ಯಾಪ್‌ಟಾಪ್ ಅಥವಾ ಟ್ಯಾಬ್ ಕುರಿತು ಅನುದಾನ ಬಿಡುಗಡೆ ಆಗಿಲ್ಲ. ಈ ಎಲ್ಲಾ ಬೇಡಿಕೆಗಳಿಗೂ ಇದೇ ಬಜೆಟ್‌ನಲ್ಲಿ ಅನುದಾನ ನೀಡಬೇಕು. ರಾಜ್ಯದ 5 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಕೆಐಟಿಯ ನ್ನಾಗಿ ಮಾರ್ಪಾಡು ಮಾಡಲು ಬಜೆಟ್‌ನಲ್ಲಿ ಹೇಳಲಾ ಗಿದೆ.
ಇವುಗಳು ಸ್ವಾಯತ್ತ ಶಿಕ್ಷಣ ಸಂಸ್ಥೆಗಳಾಗಿ ಬದಲಾದಲ್ಲಿ, ಶುಲ್ಕ ಏರಿಕೆಯಿಂದಾಗಿ ಬಡ ವಿದ್ಯಾರ್ಥಿ ಗಳಿಗೆ ಈ ಸಂಸ್ಥೆಗಳ ಬಾಗಿಲುಗಳು ಮುಚ್ಚುತ್ತದೆ. ಈ ರೀತಿ ಜರುಗದಂತೆ ಸರ್ಕಾರ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಎಲ್ಲಾ ಘೋಷಣೆಗಳು ಕೇವಲ ಚುನಾವಣೆಯ ದೃಷ್ಟಿಯಿಂದ ಆಗಿರದೇ, ಮುಂದಿನ ಶೈಕ್ಷಣಿಕ ವರ್ಷದಿಂದಲೇ, ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಅನುಷ್ಠಾನಕ್ಕೆ ಬರುವಂತೆ ಅನು ದಾನ ಬಿಡುಗಡೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ರೈತರಿಗಾಗಿಯೂ ಉತ್ತಮ ಯೋಜನೆ
ಬೆಂಗಳೂರು (ಫೆ.17): ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು 2023ನೇ ಆರ್ಥಿಕ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅನ್ನದಾತರ ಆರ್ಥಿಕ ಸಬಲೀಕರಣಕ್ಕೆ ಬಜೆಟ್ ನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈ ಬಾರಿ ಕೃಷಿ ವಲಯದ ಬೆಳವಣಿಗೆ ಶೇ.5.5ರಷ್ಟಿದೆ ಎಂದು ಸಿಎಂ ಬಜೆಟ್ ಭಾಷಣದಲ್ಲಿ ಮಾಹಿತಿ ನೀಡಿದ್ದಾರೆ. ರೈತರಿಗಾಗಿ ವಿವಿಧ ಸಹಾಯಧನಗಳನ್ನು ಕೂಡ ಘೋಷಿಸಲಾಗಿದೆ. ಇನ್ನು ಭೂ ಸಿರಿ ಎಂಬ ಹೊಸ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ. ರೈತರಿಗೆ ನೀಡುವ ಬಡ್ಡಿರಹಿತ ಸಾಲದ ಮೊತ್ತವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಹಾಗೂ ವೈಜ್ಞಾನಿಕ ಪದ್ಧತಿಗಳ ಅಳವಡಿಕೆಯೊಂದಿಗೆ ರೈತರು ಮಾಹಿತಿಪೂರ್ಣ ನಿರ್ಧಾರ ಕೈಗೊಳ್ಳಲು ಪೂರಕ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಲಿದೆ ಎಂದು ಸಿಎಂ ತಿಳಿಸಿದರು. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮೂಲಕ ರಫ್ತಿಗೆ ಆದ್ಯತೆ ನೀಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ಮೂಲಕ ರೈತರ ಆದಾಯದಲ್ಲಿ ಸ್ಥಿರತೆಯನ್ನು ತರಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದರು. ಬಿತ್ತನೆಯಿಂದ ಮಾರುಕಟ್ಟೆ ತನಕ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ನೆರವು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಈ ಬಾರಿ ಕೃಷಿ ವಲಯಕ್ಕೆ ಸಂಬಂಧಿಸಿದ ವಿಚಾರಗಳನ್ನು ಪ್ರಸ್ತಾಪಿಸುವ ಮುನ್ನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕವಿ ಕೆ.ಎಸ್. ನರಸಿಂಹಸ್ವಾಮಿ ಅವರ ಕವನದ 'ಮಣ್ಣಿನ ಕೊಡುಗೆಗೆ ನೋವಿಗೆ ನಲಿವಿಗೆ ಕನ್ನಡಿ ಹಿಡಿವಾಸ ಮಾನವ ಹೃದಯದ ಕರುಣೆಗೆ ಒಲವಿಗೆ ದನಿಗೂಡಿಸುವಾಸೆ' ಸಾಲುಗಳನ್ನು ವಾಚಿಸಿದ್ದು ವಿಶೇಷವಾಗಿತ್ತು.
ಬಡ್ಡಿರಹಿತ ಸಾಲದ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ
ರೈತರಿಗೆ ನೀಡುವ ಬಡ್ಡಿರಹಿತ ಸಾಲದ ಮೊತ್ತವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಹೀಗಾಗಿ ಈ ಬಾರಿ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ 5 ಲಕ್ಷ ರೂ. ಸಾಲ ಸಿಗಲಿದೆ. 30 ಲಕ್ಷಕ್ಕಿಂತ ಹೆಚ್ಚು ರೈತರಿಗೆ 25 ಸಾವಿರ ಕೋಟಿ ಸಾಲ ನೀಡಲಾಗಿದೆ ಎಂದು ಸಿಎಂ ತಿಳಿಸಿದರು. ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ. ಗಳಷ್ಟು ಸಾಲ ವಿತರಿಸಲಾಗುವುದು ಎಂದು ಸಿಎಂ ತಿಳಿಸಿದರು.