ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ನಾಳೆ ಏ.3ರಂದು ಕಾಂಗ್ರೆಸ್, ಬಿಜೆಪಿಯ ಹಲವು ಮುಖಂಡರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಜೆಡಿಎಸ್ ಅಭ್ಯರ್ಥಿ ಎಚ್.ಟಿ.ಮಂಜು ತಿಳಿಸಿದ್ದಾರೆ.
ಕೆ.ಆರ್.ಪೇಟೆ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ನಾಳೆ ಏ.3ರಂದು ಕಾಂಗ್ರೆಸ್, ಬಿಜೆಪಿಯ ಹಲವು ಮುಖಂಡರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಜೆಡಿಎಸ್ ಅಭ್ಯರ್ಥಿ ಎಚ್.ಟಿ.ಮಂಜು ತಿಳಿಸಿದ್ದಾರೆ.
ಪಟ್ಟಣಕ್ಕೆ ದಿಢೀರ್ ಭೇಟಿ ನೀಡಲಿರುವ ಕುಮಾರಣ್ಣ ನೇತೃತ್ವದಲ್ಲಿ ಪಟ್ಟಣದ ಪಟ್ಟಣದ ಹಿರಿಯ ಮುಖಂಡ ಕೆ.ಎಸ್.ರಾಮೇಗೌಡ ಕುಟುಂಬ ಸೇರಿದಂತೆ ನೂರಾರು ಯುವಕರು ಬಿಜೆಪಿ ಮತ್ತು ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ.
undefined
ಹಲವರು ಜೆಡಿಎಸ್ ಸೇರುವ ಬಗ್ಗೆ ಕಳೆದ ಕೆಲವು ದಿನಗಳಿಂದ ಗುಸುಗುಸು ಕೇಳಿ ಬರುತ್ತಿತ್ತು. ಎಚ್ಡಿಕೆ ಆಗಮಿಸುವ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಸಿದ್ಧತಾ ಕ್ರಮಗಳನ್ನು ನಡೆಸಲಾಗುತ್ತಿದೆ.
ಪಟ್ಟಣದ ಅಗ್ರಹಾರ ಬಡಾವಣೆಯ ಕಾಳೇಗೌಡ ಸೊಸೈಟಿ ಬಳಿ ಇಂದು ಬೆಳಗ್ಗೆ 9.30ಕ್ಕೆ ಹಲವು ಯುವಕರು ಮತ್ತು ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಹಾಸನದಿಂದ ಮಾಜಿ ಸಿಎಂ ಕುಮಾರಸ್ವಾಮಿ ಮೈಸೂರು ಜಿಲ್ಲೆಗೆ ತೆರಳುವರು. ಮಾರ್ಗಮಧ್ಯೆ ಕೆ.ಆರ್.ಪೇಟೆ ಪಟ್ಟಣದಲ್ಲಿನ ಹಲವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಹಾಸನ ಟಿಕೆಟ್ ವಿಚಾರ- ಮುಖಂಡರ ಸಂಧಾನ
ಬೆಂಗಳೂರು(ಏ.02): ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಉದ್ಭವಿಸಿರುವ ಬಿಕ್ಕಟ್ಟು ನಿವಾರಿಸುವ ಉದ್ದೇಶದಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ತಮ್ಮ ಇಬ್ಬರು ಪುತ್ರರಾದ ಎಚ್.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ರೇವಣ್ಣ ನಡುವೆ ಸಂಧಾನ ಮಾತುಕತೆ ನಡೆಸುವ ಸಾಧ್ಯತೆಯಿದೆ. ಈ ಸಂಧಾನ ಯಶಸ್ವಿಯಾದಲ್ಲಿ ಸೋಮವಾರ ಹೊರಬೀಳಲಿದೆ ಎನ್ನುತ್ತಿರುವ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿಯ ಹೆಸರೂ ಘೋಷಣೆಯಾಗಲಿದೆ.
ಕಳೆದ ಎರಡು-ಮೂರು ದಿನಗಳಿಂದ ಹಾಸನ ಜಿಲ್ಲೆಯ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿ ದೇವೇಗೌಡರನ್ನು ಭೇಟಿ ಮಾಡಿ ಅಭ್ಯರ್ಥಿ ಆಯ್ಕೆ ಕುರಿತಂತೆ ತಮ್ಮ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ಮುಂದಿಟ್ಟು ಹೋಗಿದ್ದಾರೆ. ಇಡೀ ರಾಜ್ಯದಲ್ಲಿ ಕಗ್ಗಂಟಾಗಿರುವ ಕ್ಷೇತ್ರ ಎಂದರೆ ಅದು ಹಾಸನ ವಿಧಾನಸಭಾ ಕ್ಷೇತ್ರ ಮಾತ್ರ. ದಿನೇ ದಿನೇ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಪ್ರಕಟಗೊಳ್ಳುತ್ತಿರುವುದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗುತ್ತಿದೆ. ಇನ್ನು ಈ ವಿಷಯದಲ್ಲಿ ವಿಳಂಬ ಮಾಡದೆ ನಿರ್ಧಾರ ಕೈಗೊಳ್ಳಬೇಕು ಎಂಬ ನಿಲವಿಗೆ ದೇವೇಗೌಡರು ಬಂದಿದ್ದಾರೆ ಎನ್ನಲಾಗಿದೆ.
ಕುತ್ತಿಗೆ ಕೊಯ್ದು ಹೋದವ ನೀನು: ಸಚಿವ ನಾರಾಯಣಗೌಡ ವಿರುದ್ಧ ಎಚ್‌ಡಿಕೆ ಆಕ್ರೋಶ
ಒಂದೆಡೆ ಹಾಸನ ಕ್ಷೇತ್ರದಿಂದ ತಮ್ಮ ಪತ್ನಿ ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡಬೇಕು. ಇಲ್ಲದಿದ್ದರೆ ಪ್ರಬಲ ಆಕಾಂಕ್ಷಿ ಸ್ವರೂಪ್ ಅವರನ್ನು ಹೊರತುಪಡಿಸಿ ತಾವು ಹೇಳಿದವರನ್ನೇ ಕಣಕ್ಕಿಳಿಸಬೇಕು ಎಂಬ ಪಟ್ಟನ್ನು ರೇವಣ್ಣ ಮುಂದಿಟ್ಟಿದ್ದಾರೆ. ಆದರೆ, ಇದಕ್ಕೆ ಸೊಪ್ಪು ಹಾಕುವುದಿಲ್ಲ. ಸ್ವರೂಪ್ ಅವರಿಗೆ ಟಿಕೆಟ್ ನೀಡುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂಬ ನಿಲವಿಗೆ ಕುಮಾರಸ್ವಾಮಿ ಅಂಟಿಕೊಂಡಿದ್ದಾರೆ. ಸಹೋದರರಿಬ್ಬರ ಹೇಳಿಕೆ-ಪ್ರತಿ ಹೇಳಿಕೆಗಳು ಬಹಿರಂಗವಾಗಿಯೇ ವ್ಯಕ್ತವಾಗುತ್ತಿವೆ. ಒಂದು ಹಂತದಲ್ಲಿ ಈ ಕಗ್ಗಂಟು ಕುಟುಂಬದ ಅಸ್ತಿತ್ವಕ್ಕೇ ಧಕ್ಕೆ ತರಬಹುದೇನೋ ಎಂಬ ಆತಂಕ ದೇವೇಗೌಡರನ್ನು ಕಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.
ಹೀಗಾಗಿಯೇ ಹಾಸನ ಜಿಲ್ಲೆ ಮತ್ತು ಹಾಸನ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಪಡೆದಿರುವ ದೇವೇಗೌಡರು ಭಾನುವಾರದ ಹೊತ್ತಿಗೆ ಪುತ್ರರಿಬ್ಬರನ್ನೂ ಕರೆದು ಮುಖಾಮುಖಿ ಮಾತುಕತೆ ನಡೆಸುವ ಮೂಲಕ ಬಿಕ್ಕಟ್ಟು ನಿವಾರಣೆಗೆ ಪ್ರಯತ್ನಿಸಬಹುದು ಎಂದು ತಿಳಿದು ಬಂದಿದೆ.