ಮೈಷುಗರ್‌ ಕಾರ್ಖಾನೆ 40 ವರ್ಷ ಖಾಸಗಿಗೆ?

Kannadaprabha News   | Asianet News
Published : Mar 06, 2020, 02:00 PM IST
ಮೈಷುಗರ್‌ ಕಾರ್ಖಾನೆ 40 ವರ್ಷ ಖಾಸಗಿಗೆ?

ಸಾರಾಂಶ

ಮಂಡ್ಯ ಮೈಷುಗರ್‌ ಕಾರ್ಖಾನೆಯನ್ನು ಕೊನೆಗೂ ಬಿಜೆಪಿ ಸರ್ಕಾರ ಖಾಸಗಿಯವರಿಗೆ ವಹಿಸಲು ನಿರ್ಧರಿಸಿದೆ. ಸಿಎಂ ಯಡಿಯೂರಪ್ಪ ಅವರು ಮೈಷುಗರ್‌ ಕಾರ್ಖಾನೆ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಮಾಡದಿದ್ದರೂ ರೈತರ ಹಿತರಕ್ಷಣೆಗೆ ಕಾರ್ಖಾನೆಯನ್ನು 40 ವರ್ಷಗಳ ಕಾಲ ಖಾಸಗಿಯವರಿಗೆ ವಹಿಸಲು ಅಂತಿಮ ನಿರ್ಧಾರ ಮಾಡಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.  

ಮಂಡ್ಯ(ಮಾ.06): ಮಂಡ್ಯ ಮೈಷುಗರ್‌ ಕಾರ್ಖಾನೆಯನ್ನು ಕೊನೆಗೂ ಬಿಜೆಪಿ ಸರ್ಕಾರ ಖಾಸಗಿಯವರಿಗೆ ವಹಿಸಲು ನಿರ್ಧರಿಸಿದೆ. ಸಿಎಂ ಯಡಿಯೂರಪ್ಪ ಅವರು ಮೈಷುಗರ್‌ ಕಾರ್ಖಾನೆ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಮಾಡದಿದ್ದರೂ ರೈತರ ಹಿತರಕ್ಷಣೆಗೆ ಕಾರ್ಖಾನೆಯನ್ನು 40 ವರ್ಷಗಳ ಕಾಲ ಖಾಸಗಿಯವರಿಗೆ ವಹಿಸಲು ಅಂತಿಮ ನಿರ್ಧಾರ ಮಾಡಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಸಿಎಂ ಯಡಿಯೂರಪ್ಪ ಖಾಸಗಿಯವರಿಗೆ ವಹಿಸುವ ಕುರಿತಂತೆ ಗುರುವಾರ ಪ್ರಸ್ತಾವನೆಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅಂಕಿತ ಹಾಕಿದ್ದಾರೆ. ಈ ಮೂಲಕ ಖಾಸಗಿಯವರಿಗೆ ಕಾರ್ಖಾನೆಯನ್ನು ವಹಿಸಲು ಟೆಂಡರ್‌ ಕರೆಯಲು ಸಿದ್ಧತೆ ಮಾಡುವಂತೆ ಸೂಚಿಸಲಾಗಿದೆ. ಅದರಂತೆ ಜಿಲ್ಲಾ ಬಿಜೆಪಿ ನಾಯಕರು 40 ವರ್ಷಗಳ ಕಾಲ ಖಾಸಗಿಯವರಿಗೆ ವಹಿಸುವುದಕ್ಕಿಂತ ಕನಿಷ್ಠ 25 ವರ್ಷ ಕಾಲಾವಕಾಶ ನಿಗದಿ ಮಾಡಿ ಎಂದು ಸಿಎಂ ಅವರಲ್ಲಿ ಮನವಿ ಮಾಡಿರುವುದಾಗಿ ಮೂಲಗಳು ಹೇಳಿವೆ.

ಮಠದ ಸ್ವಾಮೀಜಿ ಹುಡ್ಗಿ ಜೊತೆ ಎಸ್ಕೇಪ್..! ಈಗಾಗಲೇ ಮದ್ವೆಯಾಗಿತ್ತಾ ಸ್ವಾಮೀಜಿಗೆ?

ಈಗಾಗಲೇ ಪಿಎಸ್‌ಎಸ್‌ಕೆ ಕಾರ್ಖಾನೆಯನ್ನು ಖಾಸಗಿಯವರಿಗೆ ಗುತ್ತಿಗೆ ವಹಿಸಲು ಟೆಂಡರ್‌ ಕರೆಯಲಾಗಿದೆ. ಗುತ್ತಿಗೆ ಪಡೆಯುವ ಕಂಪನಿಗಳು ಅರ್ಜಿ ಹಾಕಿವೆ ಎಂದು ಗೊತ್ತಾಗಿದೆ. ಅದರಂತೆ ಈಗ ಮೈಷುಗರ್‌ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಲು ಸರ್ಕಾರ ಸಿದ್ಧತೆ ಮಾಡುತ್ತಿದೆ. ಕೊನೆ ಪಕ್ಷ ಈ ವರ್ಷ ಜೂನ್‌ನಿಂದಲಾದರೂ ಮೈಷುಗರ್‌, ಪಿಎಸ್‌ಎಸ್‌ಕೆ ಕಾರ್ಖಾನೆ ಆರಂಭವಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎನ್ನಲಾಗಿದೆ. ಈ ಕಾರಣದಿಂದಾಗಿ ಮೈಷುಗರ್‌ ಮತ್ತು ಪಿಎಸ್‌ಎಸ್‌ಕೆ ಕಾರ್ಖಾನೆ ಪುನಶ್ಚೇತನದ ಬಗ್ಗೆ ಬಜೆಟ್‌ನಲ್ಲಿ ಅನುದಾನ ನಿಗದಿ ಮಾಡಲು ಮುಂದಾಗಿಲ್ಲ ಎಂದು ಹೇಳಲಾಗಿದೆ.

PREV
click me!

Recommended Stories

ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!
Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!