ಬಿಜೆಪಿಯಿಂದ ಮಸಾಲಾ ಜಯರಾಮ್‌, ಕಾಂಗ್ರೆಸ್‌ನಿಂದ ಬೆಮಲ್‌ ನಾಮಪತ್ರ ಸಲ್ಲಿಕೆ

By Kannadaprabha News  |  First Published Apr 18, 2023, 5:28 AM IST

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ವಿಧಾನ ಪರಿಷತ್‌ ಮಾಜಿ ಸದಸ್ಯ ಬೆಮಲ್‌ ಕಾಂತರಾಜ್‌ ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಪಟ್ಟಣದಲ್ಲಿರುವ ಹಲವಾರು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಗುಬ್ಬಿಯ ಮಾಜಿ ಶಾಸಕ ಶ್ರೀನಿವಾಸ್‌, ಎಐಸಿಸಿ ಸದಸ್ಯ ಸುಬ್ರಮಣಿ ಶ್ರೀಕಂಠೇಗೌಡ, ಸಿ ಎಸ್‌ ಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಕೆ.ನಾಗೇಶ್‌ ಸಾಥ್‌ ನೀಡಿದರು.


 ತುರುವೇಕೆರೆ :  ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ವಿಧಾನ ಪರಿಷತ್‌ ಮಾಜಿ ಸದಸ್ಯ ಬೆಮಲ್‌ ಕಾಂತರಾಜ್‌ ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಪಟ್ಟಣದಲ್ಲಿರುವ ಹಲವಾರು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಗುಬ್ಬಿಯ ಮಾಜಿ ಶಾಸಕ ಶ್ರೀನಿವಾಸ್‌, ಎಐಸಿಸಿ ಸದಸ್ಯ ಸುಬ್ರಮಣಿ ಶ್ರೀಕಂಠೇಗೌಡ, ಸಿ ಎಸ್‌ ಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಕೆ.ನಾಗೇಶ್‌ ಸಾಥ್‌ ನೀಡಿದರು.

ಹಾಲಿ ಬಿಜೆಪಿ ಶಾಸಕ ಮಸಾಲಾ ಜಯರಾಮ್‌ ಬಿಜೆಪಿ ವತಿಯಿಂದ ಸ್ಪರ್ಧೆ ಬಯಸಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಇವರಿಗೆ ತಾಲೂಕು ಬಿಜೆಪಿ ಅಧ್ಯಕ್ಷ ಕಲ್ಕೆರೆ ಮೃತ್ಯುಂಜಯ, ದಲಿತ ಮುಖಂಡ ವಿ.ಟಿ.ವೆಂಕಟರಾಮಯ್ಯ, ಅರಳೀಕೆರೆ ಸ್ವಾಮಿ, ಶಾಸಕರ ಆಪ್ತ ಕಾರ್ಯದರ್ಶಿ ಸುರೇಶ್‌ ಗೌಡ ಸಾಥ್‌ ನೀಡಿದರು. ನಾಮಪತ್ರ ಸಲ್ಲಿಸುವ ಮುನ್ನ ಪಟ್ಟಣದ ಗ್ರಾಮದೇವತೆ ಉಡುಸಲಮ್ಮ, ಬೇಟೇರಾಯಸ್ವಾಮಿ ದೇವಾಲಯ ಸೇರಿದಂತೆ ಹಲವಾರು ದೇವಾಲಯಗಳಿಗೆ ಭೇಟಿ ನೀಡಿ ಬಿ ಫಾರಂಗೆ ಪೂಜೆ ಸಲ್ಲಿಸಿದರು.

Tap to resize

Latest Videos

ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಮತ್ತೊಮ್ಮೆ ಜೆಡಿಎಸ್‌ನಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರು. ಇವರಿಗೆ ಹಿರಿಯ ಜೆಡಿಎಸ್‌ ಮುಖಂಡ ಹಿರಣ್ಣಯ್ಯ, ತಾಲೂಕು ಜೆಡಿಎಸ್‌ ಅಧ್ಯಕ್ಷ ಸ್ವಾಮಿ, ಪಕ್ಷದ ವಕ್ತಾರ ವೆಂಕಟಾಪುರ ಯೋಗೀಶ್‌, ಡಿಸಿಸಿ ಬ್ಯಾಂಕ್‌ ಮಾಜಿ ನಿರ್ದೇಶಕ ಬಿ.ಎಸ್‌.ದೇವರಾಜ್‌ ಸಾಥ್‌ ನೀಡಿದರು.

ಇದು ಕಾಂಗ್ರೆಸ್ ನಷ್ಟವಲ್ಲ

ಸೊರಬ (ಏ.17): ಕಾಗೋಡು ತಿಮ್ಮಪ್ಪ ಅವರ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್‌ ಪಕ್ಷದ ಮೇಲೆ ಯಾವುದೇ ರೀತಿಯ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ ಎಂದು ಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು. ಪಟ್ಟಣದ ಬಂಗಾರಧಾಮದ ಕಾಂಗ್ರೆಸ್‌ ಚುನಾವಣಾ ನಿರ್ವಹಣಾ ಕಚೇರಿಯಲ್ಲಿ ಶನಿವಾರ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು. ರಾಜನಂದಿನಿ ಅವರ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ನಷ್ಟವಿಲ್ಲ. ಈ ಬಗ್ಗೆ ಅವರ ತಂದೆ ಕಾಗೋಡು ತಿಮ್ಮಪ್ಪ ಅವರೇ ಹೇಳಿದ್ದಾರೆ. 

ತಿಮ್ಮಪ್ಪ ಅವರು ಸೂಕ್ಷ್ಮವಾಗಿ ಅನೇಕ ವಿಷಯಗಳನ್ನು ಸಹ ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ಸಾಗರ ಕ್ಷೇತ್ರದಲ್ಲಿ ಕೆಲ ಪ್ರಮುಖರು ಟಿಕೇಟ್‌ ಘೋಷಣೆಯಾದ ತರುವಾಯ ಕೆಲ ಭಿನ್ನಾಭಿಪ್ರಾಯಗಳು ಮೂಡಿದ್ದವು. ಮುನಿಸಿಕೊಂಡವರನ್ನು ಮನವೊಲಿಸುವ ಯತ್ನ ಮಾಡಲಾಗಿದೆ. ಶೀಘ್ರದಲ್ಲಿಯೇ ಎಲ್ಲಾ ಭಿನ್ನಾಭಿಪ್ರಾಯಗಳು ಶಮನವಾಗಲಿದೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್‌ 125ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಸೇರ್ಪಡೆಯ ಪರ್ವವೇ ಆರಂಭವಾಗಿದ್ದು, ಜನತೆ ಪಕ್ಷದ ಮೇಲೆ ವಿಶ್ವಾಸವನ್ನಿಟ್ಟು ಸೇರ್ಪಡೆಯಾಗುತ್ತಿದ್ದಾರೆ. 

ಎದುರಾಳಿ ಯಾರೇ ಆದರೂ ಅದಕ್ಕೆ ತಲೆ ಕೆಡಿಸಿಕೊಳ್ಳಬೇಡಿ: ಬಾಲಚಂದ್ರ ಜಾರಕಿಹೊಳಿ

ಇದು ರಾಜ್ಯದಲ್ಲಿಯೇ ಮಾದರಿಯಾಗಿದೆ. ನುಡಿದಂತೆ ನಡೆಯುವ ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಕಾರ್ಡ್‌ ಬಗ್ಗೆ ಜನತೆಯಲ್ಲಿ ನಂಬಿಕೆ ಮೂಡಿದ್ದು, ಸ್ವಯಂ ಪ್ರೇರಿತರಾಗಿ ಕಾರ್ಡ್‌ ಪಡೆದ ಉದಾಹರಣೆ ಕ್ಷೇತ್ರದಲ್ಲಿ ಸಾಕಷ್ಟಿದೆ ಎಂದರು. ಅಂಡಿಗೆ ಗ್ರಾಪಂ ಉಪಾಧ್ಯಕ್ಷ ಹೇಮಚಂದ್ರಪ್ಪ, ಕೊಡಕಣಿ ಗ್ರಾಪಂ ಮಾಜಿ ಅಧ್ಯಕ್ಷ ಹೂವಪ್ಪ, ಗಣಪತಿ ಯಂಕೇನ್‌ ಸೇರಿದಂತೆ ಸುಮಾರು 150ಕ್ಕೂ ಅಧಿಕ ಜನ ವಿವಿಧ ಪಕ್ಷಗಳನ್ನು ತೊರೆದು ಮಧು ಬಂಗಾರಪ್ಪ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದರು. ಇದಕ್ಕೂ ಮೊದಲು ಮಧು ಬಂಗಾರಪ್ಪ ಅವರು ಹಿರಿಯ ಸಹೋದರಿ ಸುಜಾತಾ ಅವರ ಜೊತೆಗೆ ಬಂಗಾರಧಾಮಕ್ಕೆ ತೆರಳಿ ತಂದೆ ಎಸ್‌. ಬಂಗಾರಪ್ಪ ಮತ್ತು ತಾಯಿ ಶಕುಂತಲಮ್ಮ ಬಂಗಾರಪ್ಪ ಅವರ ಸಮಾಧಿಗೆ ನಮನ ಸಲ್ಲಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಜಿಲ್ಲಾ ಉಪಾಧ್ಯಕ್ಷ ಡಾ.ಶ್ರೀಧರ್‌ ಹುಲ್ತಿಕೊಪ್ಪ, ಜಿಪಂ ಮಾಜಿ ಸದಸ್ಯ ತಬಲಿ ಬಂಗಾರಪ್ಪ, ತಾಪಂ ಮಾಜಿ ಅಧ್ಯಕ್ಷ ಎಚ್‌.ಗಣಪತಿ, ಮಾಜಿ ಸದಸ್ಯರಾದ ನಾಗರಾಜ ಚಿಕ್ಕಸವಿ, ಪುರುಷೋತ್ತಮ ಕುಪ್ಪಗಡ್ಡೆ, ಪ್ರಮುಖರಾದ ಎಲ್‌.ಜಿ. ರಾಜಶೇಖರ ಕುಪ್ಪಗಡ್ಡೆ, ಎಂ.ಡಿ. ಶೇಖರ್‌, ಸಂತೋಷ್‌ ಕೊಡಕಣಿ, ಕೆ.ಪಿ. ಪ್ರವೀಣ್‌ ಶಾಂತಗೇರಿ, ಶ್ರೀಕಾಂತ ಚಿಕ್ಕಶಕುನ, ರವಿ ಕೇಸರಿ ಸೇರಿದಂತೆ ಇತರರಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!