ಹೊರ ದೇಶಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್ ನಿಯಮ ಪಾಲನೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ.ತ್ರಿಲೋಕಚಂದ್ರ ಹೇಳಿದ್ದಾರೆ.
ಬೆಂಗಳೂರು (ಡಿ.22): ಹೊರ ದೇಶಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್ ನಿಯಮ ಪಾಲನೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ.ತ್ರಿಲೋಕಚಂದ್ರ ಹೇಳಿದ್ದಾರೆ.
ಬುಧವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟನ್, ಅಮೆರಿಕ, ಜಪಾನ್, ಚೀನಾ ಸೇರಿದಂತೆ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ, ಬೆಂಗಳೂರಿನಲ್ಲಿ ಮುನ್ನೆಚ್ಚರಿಕೆ ಕ್ರಮ ಅನುಸರಿಸುವುದು ಅಗತ್ಯವಾಗಿದೆ. ಸೋಂಕು ಕಡಿಮೆ ಆಗಿದೆ ಎಂಬ ಕಾರಣಕ್ಕೆ ನಗರದ ಜನರು ಕೊರೋನಾ ನಿಯಮ ಪಾಲನೆ ನಿಲ್ಲಿಸಿದ್ದಾರೆ. ಇದೀಗ ಮತ್ತೆ ಎಲ್ಲರೂ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಿದೆ. ಹೀಗಾಗಿ, ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು.
undefined
ಕೊರೋನಾ ಮುಗಿದಿಲ್ಲ, ಮಾಸ್ಕ್ ಧರಿಸಿ, ಬೂಸ್ಟರ್ ಡೋಸ್ ಹಾಕಿಸಿ: ಕೇಂದ್ರ
ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಳದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆ ಬಗ್ಗೆ ಗಮನ ವಹಿಸುವಂತೆ ಸೂಚಿಸಿದೆ. ಚೀನಾದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವರ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಬೇರೆ-ಬೇರೆ ದೇಶದಲ್ಲಿ ಯಾವ ಪರಿಸ್ಥಿತಿ ಇದೆ ಎಂಬುದನ್ನು ಗಮನಿಸುತ್ತಿದ್ದೇವೆ ಎಂದು ವಿವರಿಸಿದರು. ಸದ್ಯ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಬೂಸ್ಟರ್ ಡೋಸ್ ಪಡೆಯವರು ಬೇಗ ಲಸಿಕೆ ಹಾಕಿಸಿಕೊಳ್ಳಿ. ಈಗಲೂ ಶೇ.2ರಷ್ಟುಸೋಂಕು ಪ್ರಕರಣಗಳನ್ನು ರಾರಯಂಡಮ್ ಪರೀಕ್ಷೆ ಮಾಡಲಾಗುತ್ತಿದೆ. ಸೋಂಕು ಪರೀಕ್ಷೆ ನಿಲ್ಲಿಸಿಲ್ಲ. ಪರೀಕ್ಷೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ಮಾಸ್ಕ್ ಧರಿಸದಿದ್ದರೆ ಸದ್ಯಕ್ಕೆ ದಂಡ ಇಲ್ಲ: ಜನರು ಹೆಚ್ಚಾಗಿರುವ ಸೇರುವ ಸ್ಥಳಗಳಾದ ಮಾರ್ಕೆಟ್, ಮಾಲ್, ಥಿಯೇಟರ್, ಪಾರ್ಕ್ ಸೇರಿದಂತೆ ಬಹುತೇಕ ಸ್ಥಳದಲ್ಲಿ ಜನರು ಸ್ವಯಂ ಪ್ರೇರಿತವಾಗಿ ಮಾಸ್ಕ್ ಧರಿಸುವುದಕ್ಕೆ ಅರಿವು ಮೂಡಿಸಲಾಗುವುದು. ಮೆಟ್ರೋ, ವಿಮಾನಯಾನ ಹಾಗೂ ಬಸ್‌ನಲ್ಲಿ ಪ್ರಯಾಣ ಮಾಡುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ. ಸೋಂಕು ಪ್ರಕರಣ ಹೆಚ್ಚಾದರೆ ಮಾತ್ರ ಕಡ್ಡಾಯ ನಿಯಮ ಜಾರಿಗೊಳಿಸಿ ನಂತರ ದಂಡ ವಿಧಿಸಲಾಗುವುದು ಎಂದು ತ್ರಿಲೋಕ ಚಂದ್ರ ಮಾಹಿತಿ ನೀಡಿದ್ದಾರೆ.
ಚೀನಾದ ಕೋವಿಡ್ ಸ್ಫೋಟಕ್ಕೆ ಕಾರಣವಾದ ಒಮಿಕ್ರಾನ್ ತಳಿ ಭಾರತದಲ್ಲೂ ಪತ್ತೆ!
ಓರ್ವನಿಗೆ ಮಾತ್ರ ಆಸ್ಪತ್ರೇಲಿ ಕೊರೋನಾ ಸೋಂಕಿಗೆ ಚಿಕಿತ್ಸೆ: ನಗರದಲ್ಲಿ ಬುಧವಾರ 18 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.1.44 ದಾಖಲಾಗಿದೆ. ಸೋಂಕಿನಿಂದ 24 ಗುಣಮುಖರಾಗಿದ್ದು, ಮೃತಪಟ್ಟ ವರದಿಯಾಗಿಲ್ಲ. ನಗರದಲ್ಲಿ 1,222 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ ಒಬ್ಬರು ಆಸ್ಪತ್ರೆಯಲ್ಲಿ, ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 182 ಮಂದಿ ಕೋವಿಡ್ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 41 ಮಂದಿ ಮೊದಲ ಡೋಸ್, 15 ಮಂದಿ ಎರಡನೇ ಡೋಸ್ ಮತ್ತು 126 ಮಂದಿ ಮೂರನೇ ಡೋಸ್ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 929 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 773 ಆರ್‌ಟಿಪಿಸಿಆರ್ ಹಾಗೂ 156 ಮಂದಿಗೆ ರಾರಯಪಿಡ್ ಆ್ಯಂಟಿಜನ್ ಪರೀಕ್ಷೆ ನಡೆಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.