ತುಮಕೂರು ಜಿಲ್ಲೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಅವರು ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿದ್ದ ಸಂದರ್ಭದಲ್ಲಿ 1,300 ಕೋಟಿ ರು. ಮೊತ್ತದ ಅಕ್ರಮಗಳನ್ನು ಮಾಡಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್ ಕಾಳಪ್ಪ ಆರೋಪಿಸಿದ್ದಾರೆ.
ಬೆಂಗಳೂರು : ತುಮಕೂರು ಜಿಲ್ಲೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಅವರು ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿದ್ದ ಸಂದರ್ಭದಲ್ಲಿ 1,300 ಕೋಟಿ ರು. ಮೊತ್ತದ ಅಕ್ರಮಗಳನ್ನು ಮಾಡಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್ ಕಾಳಪ್ಪ ಆರೋಪಿಸಿದ್ದಾರೆ.
ಎಎಪಿ ರಾಜ್ಯ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಿ ಅನಿಲ್ ಕುಮಾರ್ ಅವರು 2019-20ರಲ್ಲಿ ಬಿಬಿಎಂಪಿ ಆಯುಕ್ತರಾಗಿದ್ದರು. ಈಗ ಅವರು ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. ಅನಿಲ್ ಕುಮಾರ್ ಬಿಬಿಎಂಪಿ ಆಯುಕ್ತರಾಗಿದ್ದ ಸಂದರ್ಭದಲ್ಲಿ ಮೂರು ಪ್ರಮುಖ ಅಕ್ರಮಗಳು ನಡೆದಿವೆ. ಸ್ಮಾರ್ಚ್ ಪಾರ್ಕಿಂಗ್‌ಗೆ ಮಂಜೂರಾಗಿದ್ದ 31.6 ಕೋಟಿ ರು. ಖರ್ಚಾಗದಿದ್ದರೂ ಹೆಚ್ಚುವರಿಯಾಗಿ 2 ಕೋಟಿ ರು. ಬಿಡುಗಡೆಯಾಗಿದೆ. ಗುತ್ತಿಗೆ ಸಂಸ್ಥೆಯಾದ ‘ಬಿಲ್ಡಿಂಗ್‌್ಸ ಕಂಟ್ರೋಲ್ ಸೊಲ್ಯೂಷನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ಕಂಪನಿಗೆ ಇದನ್ನು ಬಿಡುಗಡೆ ಮಾಡಿಸಿದ್ದಾರೆ ಎಂದು ಆರೋಪಿಸಿದರು.
undefined
ಪಾಲಿಕೆ ವ್ಯಾಪ್ತಿಯಲ್ಲಿ ಕೊಳವೆ ಬಾವಿಗಳ ಕಾಮಗಾರಿಗೆ 969 ಕೋಟಿ ರು. ಬಿಡುಗಡೆ ಮಾಡಿದ್ದರು. ಇಷ್ಟುದೊಡ್ಡ ಪ್ರಮಾಣದ ಹಣವು ಹೇಗೆ ಬಳಕೆಯಾಗಿದೆ ಎಂಬುದರ ಬಗ್ಗೆ ಸೂಕ್ತ ತನಿಖೆಯಾಗಬೇಕು. ಇದರಲ್ಲಿ ಒಂದೇ ಕಡೆ 49 ಕೋಟಿ ರು. ಖರ್ಚು ಮಾಡಿರುವುದೂ ಇದೆ. ಅಂತೆಯೆ ಕೋವಿಡ್ ಚಿಕಿತ್ಸೆಗಾಗಿ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಯಲಯದಲ್ಲಿ ಚಿಕಿತ್ಸಾ ಕೇಂದ್ರ ತೆರೆಯಲಾಗಿತ್ತು. ಅಲ್ಲಿಗೆ ಹಾಸಿಗೆ ಮುಂತಾದವುಗಳಿಗೆ ಕೋಟ್ಯಂತರ ರು. ಹಣ ಖರ್ಚು ಮಾಡಿದ್ದು, ಇದರಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆದಿದೆ. ಬಿಬಿಎಂಪಿಯಲ್ಲಿ ಅನಿಲ್ ಕುಮಾರ್ ಆಯುಕ್ತರಾಗಿದ್ದ ಅವಧಿಯಲ್ಲಿ ಸುಮಾರು 1,300 ಕೋಟಿ ರು. ಮೊತ್ತದ ಅಕ್ರಮಗಳು ನಡೆದಿವೆ. ಈ ಬಗ್ಗೆ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಬ್ರಿಜೇಶ್ ಹೇಳಿದರು.
ಬಿಜೆಪಿ ಟಿಕೆಟ್‌ಗಾಗಿ ಅಪ್ಪ ಮಗನ ನಡುವೆ ಫೈಟ್
ಹೊಸಪೇಟೆ(ಏ.06): ವಿಜಯನಗರ ಕ್ಷೇತ್ರದಲ್ಲೀಗ ಬಿಜೆಪಿ ಟಿಕೆಟ್‌ಗಾಗಿ ಅಪ್ಪ- ಮಗನ ನಡುವೆ ಫೈಟ್ ಏರ್ಪಟ್ಟಿದ್ದು, ಭಾರಿ ಕುತೂಹಲಕ್ಕೆಡೆ ಮಾಡಿದೆ!. ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಹಾಗೂ ಅವರ ಪುತ್ರ ಸಿದ್ದಾರ್ಥ ಸಿಂಗ್ ನಡುವೆ ಟಿಕೆಟ್‌ಗಾಗಿ ಭಾರಿ ಪೈಪೋಟಿ ಏರ್ಪಟ್ಟಿದೆ. 2008ರಲ್ಲಿ ವಿಜಯನಗರ ಕ್ಷೇತ್ರ ರಚನೆಯಾಗಿದ್ದು, ಉಪ ಚುನಾವಣೆ ಸೇರಿ ಮೂರು ಬಾರಿ ಆನಂದ ಸಿಂಗ್ ಬಿಜೆಪಿ ಟಿಕೆಟ್ ಪಡೆದು, ಸ್ಪರ್ಧಿಸಿ ಗೆದ್ದಿದ್ದರು. ಒಮ್ಮೆ ಅವರು (2018ರಲ್ಲಿ) ಕಾಂಗ್ರೆಸ್ಸಿನಿಂದ ಗೆಲುವು ಸಾಧಿಸಿದ್ದರು.
ಈಗ ಯುವ ನಾಯಕ ಸಿದ್ದಾರ್ಥ ಸಿಂಗ್ ಸ್ವತಃ ತನ್ನ ತಂದೆಗೆ ಟಿಕೆಟ್ ವಿಷಯದಲ್ಲಿ ಪೈಪೋಟಿ ನೀಡುತ್ತಿದ್ದಾರೆ. ಹೈಕಮಾಂಡ್ ಮಟ್ಟದಲ್ಲೂ ಟಿಕೆಟ್ ಫೈಟ್ ವಿಷಯ ಭಾರಿ ಚರ್ಚೆಗೆ ಗ್ರಾಸವನ್ನೊದಗಿಸಿದ್ದು, ಅಭಿಪ್ರಾಯ ಸಂಗ್ರಹದಲ್ಲೂ, ಆಂತರಿಕ ಸರ್ವೆಯಲ್ಲೂ ಸಿದ್ದಾರ್ಥ ಸಿಂಗ್ ಪರ ಒಲವು ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.
ಕೂಡ್ಲಿಗಿ: ಬಿಜೆಪಿ ಶಾಸಕ ಗೋಪಾಲಕೃಷ್ಣ ರಾಜೀನಾಮೆ ಸಲ್ಲಿಕೆ, ಕಾಂಗ್ರೆಸ್ ತೆಕ್ಕೆಗೆ ಬಿದ್ದ ಕಮಲ ನಾಯಕ..!
ಪುತ್ರನ ಪರ ಆನಂದ ಸಿಂಗ್:
ಇತ್ತ ಆನಂದ ಸಿಂಗ್ ಅವರು ಕೂಡ ಟಿಕೆಟ್ ಕೇಳುತ್ತಿದ್ದಾರೆ. ಆದರೆ, ಪುತ್ರನ ಪರ ಸಿಂಗ್ ಬ್ಯಾಟಿಂಗ್ ಬೀಸುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದು, ಬಿಜೆಪಿ ಹೈಕಮಾಂಡ್‌ಗೂ ಹೊಸ ಇಕ್ಕಟ್ಟು ತಂದಿಟ್ಟಿದೆ. ವಿಜಯನಗರ ಹೊಸ ಜಿಲ್ಲೆ ಮಾಡಿರುವ ಹಿನ್ನೆಲೆಯಲ್ಲಿ ಆನಂದ ಸಿಂಗ್ ಕಣಕ್ಕಿಳಿದರೆ, ಉಳಿದ ನಾಲ್ಕು ಕ್ಷೇತ್ರದಲ್ಲೂ ಪ್ರಭಾವ ಬೀರಬಹುದೆಂಬ ಲೆಕ್ಕಾಚಾರದಲ್ಲಿ ಹೈಕಮಾಂಡ್ ಇದೆ. ಈ ಬಗ್ಗೆ ರಾಜ್ಯ ನಾಯಕರು ಕೂಡ ಆನಂದ ಸಿಂಗ್ ಜತೆಗೆ ಒಂದು ಸುತ್ತು ಮಾತನ್ನಾಡಿದ್ದಾರೆ ಎಂದು ಹೇಳಲಾಗುತ್ತಿದ್ದು. ಹೊಸ ಮುಖ ಮತ್ತು ಯುವ ನಾಯಕ ಸಿದ್ದಾರ್ಥ ಸಿಂಗ್ ಪರ ಆನಂದ ಸಿಂಗ್ ಒಲವು ಹೊಂದಿದ್ದಾರೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಲೋಕಸಭೆಯತ್ತ ಸಿಂಗ್ ಚಿತ್ತ: ಕೊಪ್ಪಳ ಲೋಕಸಭೆ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಆನಂದ ಸಿಂಗ್ ಅವರು ಈ ಬಾರಿ ವಿಜಯನಗರ ಕ್ಷೇತ್ರದಿಂದ ತನಗೆ ಟಿಕೆಟ್ ಬೇಡ, ತನ್ನ ಪುತ್ರ ಸಿದ್ದಾರ್ಥ ಸಿಂಗ್‌ಗೆ ಟಿಕೆಟ್ ಕೊಡಿ ಎಂದು ಹೈಕಮಾಂಡ್‌ಗೆ ಸಂದೇಶ ಮುಟ್ಟಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿಯಲ್ಲಿ ಈ ಬಗ್ಗೆ ಭಾರಿ ಚರ್ಚೆಯಾಗುತ್ತಿದ್ದು, ಆನಂದ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದರೆ, ವಿಜಯನಗರ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ತೊಡಕ್ಕಾಗಬಹುದು ಎಂಬ ಚಿಂತನೆಯಲ್ಲಿ ಹೈಕಮಾಂಡ್ ಮುಳುಗಿದೆ. ಹಾಗಾಗಿ ಆನಂದ ಸಿಂಗ್‌ರನ್ನೇ ಕಣಕ್ಕಿಳಿಸಲು, ಬಿಜೆಪಿಯಲ್ಲಿರುವ ಸಿಂಗ್ ಆಪ್ತ ನಾಯಕರನ್ನು ಮನವೊಲಿಸುವ ಜವಾಬ್ದಾರಿಯನ್ನು ಕಮಲ ಪಾಳಯ ನೀಡಿದೆ ಎಂದು ಮೂಲಗಳು ತಿಳಿಸಿವೆ.