ಯಂತ್ರಶ್ರೀ ಯೊಜನೆ ಮೂಲಕ ಕೊಡಗು ಜಿಲ್ಲೆಯಲ್ಲಿ ಸಾವಿರ ಎಕರೆಯಲ್ಲಿ ಯಾಂತ್ರೀಕೃತ ಭತ್ತ ಬೇಸಾಯ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎಂ. ಸುಜಾ ಕುಶಾಲಪ್ಪ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ವಿರಾಜಪೇಟೆ ಮಗ್ಗುಲ ಗ್ರಾಮದಲ್ಲಿ ಯಂತ್ರಶ್ರೀ ಯೋಜನೆಗೆ ಚಾಲನ
\ನಾಪೋಕ್ಲು (ಆ.2) : ಯಂತ್ರಶ್ರೀ ಯೊಜನೆ ಮೂಲಕ ಕೊಡಗು ಜಿಲ್ಲೆಯಲ್ಲಿ 1000 ಎಕರೆ ಪ್ರದೇಶದಲ್ಲಿ ಯಾಂತ್ರೀಕೃತ ಭತ್ತ ಬೇಸಾಯ ಅನುಷ್ಠಾನಗೊಳಿಸುವ ಮೂಲಕ ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಕೃಷಿ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ. ಸುಜಾ ಕುಶಾಲಪ್ಪ(M.Suja Kushalappa) ಹೇಳಿದರು. ವಿರಾಜಪೇಟೆ(Virajapete)ಯ ಮಗ್ಗುಲ ವಾಟೇರಿರ ಎಸ್. ಪೂವಯ್ಯ(S.Poovaiah) ಎಂಬವರ ಭತ್ತದ ಗದ್ದೆಯಲ್ಲಿ ಆಯೋಜಿಸಿದ್ದ ವಿರಾಜಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ವ್‌ನಡಿ ಕೊಡಗು ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ 1000 ಎಕರೆ ಪ್ರದೇಶದಲ್ಲಿ ಅನುಷ್ಠಾನಗೊಳ್ಳುತ್ತಿರುವ ಯಾಂತ್ರೀಕೃತ ಭತ್ತ ಬೇಸಾಯ ಯಂತ್ರಶ್ರೀ ಯೊಜನೆಗೆ ಭತ್ತ ಸಸಿಮುಡಿಯಯ ಟ್ರೇಗೆ ಕೈ ಚಾಲಿತ ಯಂತ್ರದ ಮೂಲಕ ಬೀಜ ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಸತತ 6 ಗಂಟೆ ಕಾರ್ಯಾಚರಣೆ ಬಳಿಕ ಗ್ರಾಮಕ್ಕೆ ವಿದ್ಯುತ್ ಮರು ಸಂಪರ್ಕ
ನಾಟಿ ಯಂತ್ರದ ಮೂಲಕ ಯಂತ್ರಶ್ರೀ ನಾಟಿ ಕಾರ್ಯಕ್ಕೆ ಚಾಲನೆ ನೀಡಿದ ಜಂಟಿ ಕೃಷಿ ನಿರ್ದೇಶಕರಾದ ಶಬಾನಾ ಎಂ. ಶೇಖ್ ಮಾತನಾಡಿ, ಸರ್ಕಾರ ಹಾಗೂ ವಿವಿಧ ಸಂಘ ಸಂಸ್ಥೆಗಳ ಒಟ್ಟು ಸಹಯೋಗದೊಂದಿಗೆ ಬಾಡಿಗೆ ಆಧಾರಿತ ಸೇವಾ ಕೇಂದ್ರ ಕರ್ನಾಟಕ ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತಿದೆ. ಆದರೆ ಇದನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾದರಿಯಾಗಿ ಅನುಷ್ಠಾನ ಮಾಡಿದೆ. ಇದರಿಂದ ಸಾವಿರಾರು ಜನರಿಗೆ ಉಪಯೋಗವಾಗಿದೆ. ಗ್ರಾಮಾಭಿವೃದ್ಧಿ ಯೋಜನೆಯು ಜನ ಸಾಮಾನ್ಯರ ಬೇಡಿಕೆಯನ್ನು ನೋಡಿಕೊಂಡು ಹೊಸ ಹೊಸ ಯಂತ್ರಗಳನ್ನು ಬಾಡಿಗೆ ಆಧಾರಿತ ಸೇವಾ ಕೇಂದ್ರದಲ್ಲಿ ನೀಡುತ್ತಿದೆ. ರೈತರಿಗೆ ಕೃಷಿ ಪೂರಕ ಉಪಕರಣಗಳನ್ನು ಕಡಿಮೆ ದರದಲ್ಲಿ ನೀಡಲಾಗುತ್ತಿದೆ. ಪಿಎಂ ಕಿಸಾನ್ ಯೋಜನೆಯ ಮೂಲಕ ನೇರವಾಗಿ ರೈತರ ಖಾತೆಗೆ 3 ತಿಂಗಳಿಗೊಮ್ಮೆ 2 ಸಾವಿರ ರು. ಮೊತ್ತ ಜಮೆಯಾಗುತ್ತದೆ. ಬೆಳೆ ಸಮೀಕ್ಷೆ ಕಾರ್ಯ ಆಗಸ್ಟ್ ಮೊದಲ ವಾರದಿಂದ ಆರಂಭವಾಗಲಿದ್ದು, ಪ್ರತಿಯೊಬ್ಬ ರೈತರು ನೋಂದಣಿ ಮಾಡಿಕೊಳ್ಳುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ (Shri Kshetra Dharmastala Gramabhivruddhia)ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಮಾತನಾಡಿ, ರೈತರ ಬೇಡಿಕೆಗೆ ತುರ್ತು ಸ್ಪಂದನೆಯನ್ನು ನೀಡಿ ರೈತನ ಬದುಕು ಹಸನಾಗುವಂತೆ ಮಾಡಿದೆ. ಶೌರ್ಯ ವಿಪತ್ತು ಘಟಕದ ಸದಸ್ಯರ ಮೂಲಕ ಯಾವುದೇ ಫಲಾಪೇಕ್ಷೆ ಇಲ್ಲದೆ ಪ್ರಾಕೃತಿಕ ವಿಕೋಪ ಹಾಗೂ ಇನ್ನಿತರ ಸಮಸ್ಯೆಗಳು ಬಂದಾಗ ಸೇವೆಯನ್ನು ನೀಡುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಸಿಎಸ್‌ಸಿ ಕಾರ್ಯಕ್ರಮದ ಮೂಲಕ ಜನರಿಗೆ ಸೇವೆಯನ್ನು ನೀಡುತ್ತಿದೆ. ರೈತರಿಗೆ ಕೃಷಿ ತರಬೇತಿಗಳು, ಕೃಷಿ, ಸ್ವ ಉದ್ಯೊಗ ಅಧ್ಯಯನ ಪ್ರವಾಸಗಳು, ಕೃಷಿ ಪೂರಕ ಚಟುವಟಿಕೆಗಳಿಗೆ ಅನುದಾನ ನೀಡುವುದರೊಂದಿಗೆ, ರೈತರಿಗೆ ನಿರಂತರ ಪ್ರೇರಣೆಯನ್ನು ನೀಡುತ್ತಿದೆ ಎಂದರು.
ಮಡಿಕೇರಿ-ವಿರಾಜಪೇಟೆ ರಸ್ತೆ: ರಾಷ್ಟ್ರೀಯ ಹೆದ್ದಾರಿಯಾಗಿ ಮಾರ್ಪಡಿಸಲು ಗಡ್ಕರಿ ಒಪ್ಪಿಗೆ
ಧರ್ಮಸ್ಥಳದ ಕೃಷಿ ವಿಭಾಗದ ಯೋಜನಾಧಿಕಾರಿಗಳಾದ ಸುಧೀರ್ ಜೈನ್ ಮಾತನಾಡಿ, 2022- 23ನೇ ಸಾಲಿನ ಮುಂಗಾರು ಮತ್ತು ಹಿಂಗಾರಿನಲ್ಲಿ ಯಾಂತ್ರೀಕೃತ ಭತ್ತ ಬೇಸಾಯ ಯಂತ್ರಶ್ರೀ ಕಾರ್ಯಕ್ರಮದಡಿ ಕರ್ನಾಟಕ ರಾಜ್ಯದಲ್ಲಿ 20000 ಹೆಕ್ಟೇರ್ ಪ್ರದೇಶದಲ್ಲಿ ಯಂತ್ರಶ್ರೀ ಅನುಷ್ಠಾನಿಸುತ್ತಿದೆ. ಪ್ರತಿ ತಾಲೂಕಿನಲ್ಲಿ ಕೃಷಿ ಮೇಲ್ವಿಚಾರಕರು ಯಂತೀಕೃತ ನಾಟಿ ಕಾರ್ಯದ ಬಗ್ಗೆ ರೈತರಿಗೆ ಮಾಹಿತಿ ನೀಡುತ್ತಾರೆ ಎಂದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ. ವೀರೇಂದ್ರ ಕುಮಾರ್ ಭತ್ತದಲ್ಲಿ ಯಾಂತ್ರಿಕತೆಯ ಬಗ್ಗೆ ಮಾಹಿತಿ ನೀಡಿದರು. ವಿರಾಜಪೇಟೆ ತಾಲ್ಲಕಿನ ಸಹಾಯಕ ಕೃಷಿ ನಿರ್ದೇಶಕರಾದ ಶಿವಮೂರ್ತಿ ಕೃಷಿ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಪ್ರಗತಿಪರ ಕೃಷಿಕ ವಾಟೇರಿರ ಎಸ್. ಪೂವಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೈತರಿಗೆ ಸಂವಾದದ ಮೂಲಕ ಮಾಹಿತಿ ನೀಡಲಾಯಿತು. ಬಾಡಿಗೆ ಆಧಾರಿತ ಸೇವಾ ಕೇಂದ್ರ(ಕೃಷಿ ಯಂತ್ರಧಾರೆಯ) ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ, ಸೆಲ್ಕೋ ಸೋಲಾರ್ ಲೈಟ್‌ನ ಪ್ರಾತ್ಯಕ್ಷಿಕೆ ಮಾಡಲಾಯಿತು. ವಿರಾಜಪೇಟೆ ವಲಯ ಮೇಲ್ವಿಚಾರಕರಾದ ನಾಗರಾಜ್ ಉಪಸ್ಥಿತರಿದ್ದರು.\ ಸನ್ಮಾನ: ಕಾರ್ಯಕ್ರಮದಲ್ಲಿ ಶೌರ್ಯ ವಿಪತ್ತು ಘಟಕದ ಸಂಯೋಜಕರಾದ ರೇಖಾ ಗಣೇಶ್ ಮತ್ತು ಬಾಲೆಯಡ ದಿವ್ಯಾ ಮಂದಪ್ಪ ನಾಪೋಕ್ಲು, ಹಡಿಲು ಭೂಮಿ ಅಭಿವೃದ್ಧಿಪಡಿಸಿ ಬೇತ್ರಿ ರೈತರಾದ ಸಜನ್ ದೇವಯ್ಯ ಮತ್ತು ಉಮೇಶ್, ಸತತ 3 ವರ್ಷಗಳಿಂದ ಯಂತ್ರಶ್ರೀ ಅನುಷ್ಠಾನಿಸಿದ ರೈತರನ್ನು ಸನ್ಮಾನಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರಾಜಪೇಟೆ ತಾಲೂಕಿನ ಯೋಜನಾಧಿಕಾರಿಗಳಾದ ದಿನೇಶ್ ಬಿ. ಸ್ವಾಗತಿಸಿದರು. ತಾಲೂಕಿನ ಕೃಷಿ ಮೇಲ್ವಿಚಾರಕರಾದ ರಾಮ್ ಕುಮಾರ್ ನಿರೂಪಿಸಿದರು. ಸಿಎಚ್‌ಎಸ್‌ಸಿ ಸುಳ್ಯ ವಿಭಾಗದ ಯೋಜನಾಧಿಕಾರಿ ಉಮೇಶ್ ಪೂಜಾರಿ ವಂದಿಸಿದರು. ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ ಯಾಂತ್ರೀಕೃತ ನಾಟಿಯ ಸಸಿಮಡಿಯ ಟ್ರೇಗೆ ಕೈ ಚಾಲಿತ ಯಂತ್ರದ ಮೂಲಕ ಬೀಜ ಹಾಕುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.