ವಿವೇಕಾನಂದ ಕಾಲೇಜಿನಲ್ಲಿ ಮೀಡಿಯಾ ವಿವೇಕ್‌, ರಾಜ್ಯ ಮಟ್ಟದ ಪ್ರತಿಭೋತ್ಸವ

Kannadaprabha News   | Asianet News
Published : Jan 29, 2020, 08:22 AM IST
ವಿವೇಕಾನಂದ ಕಾಲೇಜಿನಲ್ಲಿ ಮೀಡಿಯಾ ವಿವೇಕ್‌, ರಾಜ್ಯ ಮಟ್ಟದ ಪ್ರತಿಭೋತ್ಸವ

ಸಾರಾಂಶ

ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗಗಳ ಆಶ್ರಯದಲ್ಲಿ ಮೀಡಿಯಾ ವಿವೇಕ್‌’ ಎಂಬ ರಾಜ್ಯ ಮಟ್ಟದ ಪ್ರತಿಭೋತ್ಸವ ನಡೆಯಲಿದೆ. ರಾಜ್ಯದ ಎಲ್ಲ ಪತ್ರಿಕೋದ್ಯಮ ಕಾಲೇಜಿನ ವಿದ್ಯಾರ್ಥಿಗಳು ಈ ಪ್ರತಿಭೋತ್ಸವದಲ್ಲಿ ಭಾಗವಹಿಸಲಿದ್ದಾರೆ.

ಮಂಗಳೂರು(ಜ.29): ವಿವೇಕಾನಂದ ಮಹಾವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗಗಳ ಆಶ್ರಯದಲ್ಲಿ ಜ. 29ರಂದು ‘ಮೀಡಿಯಾ ವಿವೇಕ್‌’ ಎಂಬ ರಾಜ್ಯ ಮಟ್ಟದ ಪ್ರತಿಭೋತ್ಸವ ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆಯಲಿದೆ.

ಬೆಳಗ್ಗೆ 9.30ಕ್ಕೆ ಕಲ​ರ್ಸ್ ಕನ್ನಡ ವಾಹಿನಿಯ ನಟ ಹಾಗೂ ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ರಾಕೇಶ್‌ ಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀನಿವಾಸ್‌ ಪೈ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ಕೃಷ್ಣ ಭಟ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್‌., ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್‌ ವಿಲ್ಸನ್‌ ಪ್ರಭಾಕರ್‌, ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ಡಾ.ಎಚ್‌.ಜಿ. ಶ್ರೀಧರ್‌ ಉಪಸ್ಥಿತರಿರುವರು.

ಮಲ್ಪೆಯಲ್ಲಿ ಬಲೆಗೆ ಬಿತ್ತು ಸ್ಪಾನರ್ ಕ್ರ್ಯಾಬ್..! 1 ಕೆಜಿ ತೂಗುತ್ತೆ ಈ ಏಡಿ

ಸಂಜೆ 3.30ಕ್ಕೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಸೇಡಿಯಾಪು ಜನಾರ್ದನ ಭಟ್‌ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಂಶುದ್ದಿನ್‌ ಸಂಪ್ಯ ಭಾಗವಹಿಸಲಿದ್ದಾರೆ. ರಸಪ್ರಶ್ನೆ, ಮಾಕ್‌ ಪ್ರೆಸ್‌, ಪ್ರಬಂಧ ಸ್ಪರ್ಧೆ, ಮ್ಯಾಡ್‌ ಆಡ್‌, ಸ್ಟೋರಿ ಬಿಲ್ಡಿಂಗ್‌, ಸರ್‌ಪ್ರೈಸ್‌ ಇವೆಂಟ್‌, ಚರ್ಚಾ ಸ್ಪರ್ಧೆಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

PREV
click me!

Recommended Stories

ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!
Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!