ಸಮಾಜ ಸುಧಾರಣೆಯಲ್ಲಿ ಮಾಧ್ಯಮ ಪಾತ್ರ ಅಪಾರ: ಸಚಿವ ಚಲುವರಾಯಸ್ವಾಮಿ

By Kannadaprabha NewsFirst Published Sep 30, 2024, 10:19 PM IST
Highlights

ಸಮಾಜದ ಸುಧಾರಣೆಯಲ್ಲಿ ಮಾಧ್ಯಮಗಳ ಪಾತ್ರ ಅಪಾರವಾಗಿದ್ದು, ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಗುರುತರ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. 

ಮಂಡ್ಯ (ಸೆ.30): ಸಮಾಜದ ಸುಧಾರಣೆಯಲ್ಲಿ ಮಾಧ್ಯಮಗಳ ಪಾತ್ರ ಅಪಾರವಾಗಿದ್ದು, ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಗುರುತರ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ನಗರದ ಕರ್ನಾಟಕ ಸಂಘದ ಆವರಣದಲ್ಲಿರುವ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ನೀಡಿ ಅವರು ಮಾತನಾಡಿದರು. ಭಾರತದಲ್ಲಿ ೧೪೦ ಕೋಟಿ ಹಾಗೂ ಕರ್ನಾಟದಲ್ಲಿ ೭ ಕೋಟಿಯಷ್ಟು ಜನಸಂಖ್ಯೆ ಇದ್ದು, ರಾಜಕೀಯ ಮನಸ್ತಾಪಗಳು ಸಣ್ಣ ಪುಟ್ಟ ಘಟನೆಗಳು ನಡೆಯುತ್ತವೆ. ಮಾಧ್ಯಮಗಳು ಸಣ್ಣ-ಪುಟ್ಟ ಘಟನೆಗಳನ್ನೇ ದೊಡ್ಡದಾಗಿ ಬಿಂಬಿಸುವ ಕೆಲಸ ಮಾಡಬಾರದು. ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುತ್ತದೆ ಎಂದರು.

ಇತ್ತೀಚೆಗೆ ಮಾಧ್ಯಮಗಳು ಕಮರ್ಷಿಯಲ್ ಇನ್‌ಸ್ಟಿಟ್ಯೂಟ್‌ಗಳಾಗಿವೆ. ಮಾಧ್ಯಮ ಬಂಡವಾಳ ಶಾಹಿಗಳ ಕೈಯಲ್ಲಿ ಸಿಲುಕಿವೆ. ಆದ್ದರಿಂದ ಪತ್ರಿಕಾ ಧರ್ಮ ಪಾಲನೆ ಮಾಡುವುದು ಕಷ್ಟವಾಗುತ್ತಿದೆ. ಇದರಿಂದ ಸಾಮಾಜಿಕ ನ್ಯಾಯ ದೊರಕಿಸಲು ಸಾಧ್ಯವಾಗುತ್ತಿಲ್ಲ. ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಸಾಮಾಜಿಕ ಹಿತ ಕಾಪಾಡುವುದು ಮಾಧ್ಯಮಗಳ ಜವಾಬ್ದಾರಿ ಎಂದು ನುಡಿದರು. ರಾಜ್ಯ ರಾಜಕೀಯದಲ್ಲಿ ಮಂಡ್ಯ ಜಿಲ್ಲೆಯ ಆನೇಕ ನಾಯಕರು ರಾಜ್ಯವನ್ನಾಳಿದ್ದಾರೆ. ಆದರೆ, ಅಭಿವೃದ್ಧಿಯಲ್ಲಿ ಜಿಲ್ಲೆ ಬಹಳ ಹಿಂದೆ ಉಳಿದಿದೆ. ನಾವು-ನೀವು ಸೇರಿಕೊಂದು ಜಿಲ್ಲೆಯಲ್ಲಿ ಒಂದಷ್ಟು ಅಭಿವೃದ್ಧಿ ಕೆಲಸ ಮಾಡೋಣ ಎಂದರು.

Latest Videos

ಈ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಿ.. ಸಂಕಷ್ಟದಲ್ಲಿದ್ದ ನಿರ್ದೇಶಕ ಶಂಕರ್‌ಗೆ ಮಾಜಿ ಸಿಎಂ ಜಯಲಲಿತಾ ಸಹಾಯ ಮಾಡಿದ್ರು!

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಲು ಸರ್ಕಾರ ಮುಂದಾಗಿದೆ. ಇದರಲ್ಲಿ ಕೆಲ ನಿಬಂಧನೆಗಳನ್ನು ಸಡಿಲಗೊಳಿಸುವಂತೆ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಸಡಿಲಗೊಳಿಸುವುದಾಗಿ ಭರವಸೆ ನೀಡಿದರು. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ಪತ್ರಕರ್ತರು ಪೆನ್ನು ಎಂಬ ಚಾವಟಿ ಹಿಡಿದಾಗ ಮಾತ್ರ ರಾಜಕಾರಣಿಗಳನ್ನು ಸರಿ ದಾರಿಗೆ ತರಲು ಕಾರಣವಾಗುತ್ತದೆ. ಕೊರೊನಾ ಸಂದರ್ಭದಲ್ಲಿ ಮಾಧ್ಯಮ ಮಿತ್ರರು ತಮ್ಮ ಪ್ರಾಣದ ಅಂಗನ್ನು ತೊರೆದು ಕರ್ತವ್ಯ ನಿರ್ವಹಿಸಿದ್ದಾರೆ. ಇವರ ಸೇವೆ ಮಹತ್ತರವಾದುದು ಎಂದರು.

ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಮಾತನಾಡಿ, ಮಾಧ್ಯಮಗಳು ಸಮಾಜ ಹಾಗೂ ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡಬೇಕು. ತಂತ್ರಜ್ಞಾನ ಬೆಳೆದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳು ಹೆಚ್ಚಾಗಿ ಹರಿದಾಡುತ್ತಿವೆ. ಸುಳ್ಳು ಸುದ್ದಿಗಳ ನಿಯಂತ್ರಣಕ್ಕೆ ‘ಫ್ಯಾಕ್ಟ್ ಚೆಕ್ ಕಮಿಟಿ’ ಮಾಡಲಾಗಿದೆ. ನಾವೇ ಕಲ್ಪನೆ ಮಾಡಿಕೊಂಡು ಸುದ್ದಿ ಮಾಡುವುದರಿಂದ ಸಾಕಷ್ಟು ದುಷ್ಪಾರಿಣಾಮಗಳಾಗುತ್ತಿವೆ ಎಂದು ಎಚ್ಚರಿಸಿದರು. ಪತ್ರಕರ್ತರಿಗೆ ಆರ್ಡರ್ ಓದುವ ವ್ಯವದಾನ ಇಲ್ಲ. ಓದಿ, ತಿಳಿದು ವರದಿ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಕಲ್ಪನೆ ಮಾಡಿ ಬರೆಯುವುದರಿಂದ ಬೇರೊಬ್ಬರ ಮನಸ್ಸಿಗೆ ನೋವು ತರುವ ಕೆಲಸ ಮಾಡಬಾರದು ಎಂದರು.

ಮಹಾರಾಷ್ಟ್ರದಲ್ಲಿಯು ಮೊಳಗಿದ ಕನ್ನಡ ಕಹಳೆ: ಕನ್ನಡ ಸಂಭ್ರಮ-50ಕ್ಕೆ ಸಾಕ್ಷಿಯಾದ ದಾನಮ್ಮ ದೇವಿಯ ಕ್ಷೇತ್ರ!

ಇದೇ ವೇಳೆ ವರ್ತಮಾನ ಪ್ರಾದೇಶಿಕ ದಿನಪತ್ರಿಕೆ ಸಂಪಾದಕ ಕೆ.ಎನ್.ರವಿ ಅವರಿಗೆ ಜೀವಮಾನ ಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಆಯ್ದ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ, ಕ್ರೀಡಾಕೂಟದ ವಿಜೇತರಿಗೆ ಬಹುಮಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತ್ತು. ಶಾಸಕ ಪಿ.ರವಿಕುಮಾರ್, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ನಗರಸಭೆ ಅಧ್ಯಕ್ಷ ಪ್ರಕಾಶ್, ವಾರ್ತಾಧಿಕಾರಿ ನಿರ್ಮಲಾ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಮತ್ತೀಕೆರೆ ಜಯರಾಂ, ಜಿಲ್ಲಾಧ್ಯಕ್ಷ ಬಿ.ಪಿ.ಪ್ರಕಾಶ್ ಇತರರಿದ್ದರು.

click me!