ಬೆಳಗಾವಿ, ಬೀದರ್, ಬಾಲ್ಕಿ, ನಿಪ್ಪಾಣಿ, ಖಾನಾಪುರ ಸೇರಿ ಗಡಿಭಾಗಗಳು ಮಹಾರಾಷ್ಟ್ರಕ್ಕೆ ಸೇರಬೇಕು ಅಂತ ನಾಡದ್ರೋಹಿ ಘೋಷಣೆ ಕೂಗುವ ಮೂಲಕ ಉದ್ಧಟತನ ಪ್ರದರ್ಶನ ಮಾಡಿದ ಎಂಇಎಸ್ ಪುಂಡರು
ಬೆಳಗಾವಿ(ನ.01): ಕುಂದಾನಗರಿ ಬೆಳಗಾವಿಯಲ್ಲಿ ಒಂದೆಡೆ ಅದ್ದೂರಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಆದರೆ, ಮತ್ತೊಂದೆಡೆ ಕರ್ನಾಟಕ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ನಾಡದ್ರೋಹಿ ಎಂಇಎಸ್ ಕರಾಳ ದಿನಾಚರಣೆಯನ್ನ ಇಂದು(ಮಂಗಳವಾರ) ಆಚರಿಸುತ್ತಿದ್ದಾರೆ. ಬೆಳಗಾವಿಯ ಸಂಭಾಜೀ ಮೈದಾನದಿಂದ ಎಂಇಎಸ್ ಕರಾಳ ದಿನದ ಮೆರವಣಿಗೆಗೆ ಚಾಲನೆ ನೀಡಲಾಗಿದೆ.
ಮೆರವಣಿಗೆ ಆರಂಭವಾಗ್ತಿದ್ದಂತೆ ಎಂಇಎಸ್ ಕಾರ್ಯಕರ್ತರು ಪುಂಡಾಟ ಶುರು ಮಾಡಿದ್ದಾರೆ. ಬೆಳಗಾವಿ, ಬೀದರ್, ಬಾಲ್ಕಿ, ನಿಪ್ಪಾಣಿ, ಖಾನಾಪುರ ಸೇರಿ ಗಡಿಭಾಗಗಳು ಮಹಾರಾಷ್ಟ್ರಕ್ಕೆ ಸೇರಬೇಕು ಅಂತ ನಾಡದ್ರೋಹಿ ಘೋಷಣೆ ಕೂಗುವ ಮೂಲಕ ಉದ್ಧಟತನ ಪ್ರದರ್ಶನ ಮಾಡಿದ್ದಾರೆ.
ಚಿಕ್ಕೋಡಿ: ಕರ್ನಾಟಕ ರಾಜ್ಯೋತ್ಸವದಂದು ಡಾ. ರಾಜ್ ವೇಷ ಧರಿಸುವ ಬಸ್ ಕಂಡಕ್ಟರ್..!
ಮಹಾರಾಷ್ಟ್ರಕ್ಕೆ ಸೇರುತ್ತೇವೆ ಇಲ್ಲವಾದ್ರೆ ಜೈಲಿಗೆ ಹೋಗುತ್ತೇವೆ ಅಂತ ಘೋಷಣೆ ಕೂಗಿ ಕಪ್ಪು ಬಟ್ಟೆ ಧರಿಸಿ ಎಂಇಎಸ್ ಪುಂಡರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ಎಂಇಎಸ್ ಮುಖಂಡ ಶುಭಂ ಶೆಳಕೆ ನೇತೃತ್ವದಲ್ಲಿ ಕರಾಳ ದಿನವನ್ನ ಆಚರಿಸುತ್ತಿದ್ದಾರೆ. ಎಂಇಎಸ್ ಪುಂಡಾಟಿಕೆ ಹತ್ತಿಕ್ಕಲು ಬಿಗಿ ಪೋಲಿಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.