ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ: ಮಹಾಮೇಳಾವ್‌ಗೆ ನಾಡದ್ರೋಹಿಗಳ ಸಿದ್ಧತೆ

By Girish Goudar  |  First Published Nov 23, 2023, 8:41 AM IST

ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುವ ಚಳಿಗಾಲ ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ್ ನಡೆಸಲು ಎಂಇಎಸ್ ಸಿದ್ಧತೆ ನಡೆಸಿದೆ. ಈ ಸಂಬಂಧ ಬೆಳಗಾವಿ ಮರಾಠಾ ಮಂದಿರಲ್ಲಿ ಸಭೆ ಸೇರಿ ಮಹಾಮೇಳಾವ್ ನಡೆಸಲು ಎಂಇಎಸ್ ಪುಂಡರು ತೀರ್ಮಾನ ಕೈಗೊಂಡಿದ್ದಾರೆ. ನಾಡದ್ರೋಹಿ ಎಂಇಎಸ್ ಪುಂಡರ ನಿರ್ಧಾರಕ್ಕೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಳಗಾವಿ(ನ.23):  ಬೆಳಗಾವಿಯಲ್ಲಿ ಮಹಾಮೇಳಾವ್ ನಡೆಸಲು ನಾಡದ್ರೋಹಿ ಎಂಇಎಸ್ ಸಿದ್ಧತೆ ನಡೆಸಿದೆ. ಹೌದು, ಮಹಾಮೇಳಾವ್ ಮೂಲಕ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭಾಷಾದ್ವೇಷದ ಕಿಡಿ ಹಚ್ಚಲು ಎಂಇಎಸ್ ಹುನ್ನಾರ ನಡೆಸಿದೆ. 

ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುವ ಚಳಿಗಾಲ ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ್ ನಡೆಸಲು ಎಂಇಎಸ್ ಸಿದ್ಧತೆ ನಡೆಸಿದೆ. ಈ ಸಂಬಂಧ ಬೆಳಗಾವಿ ಮರಾಠಾ ಮಂದಿರಲ್ಲಿ ಸಭೆ ಸೇರಿ ಮಹಾಮೇಳಾವ್ ನಡೆಸಲು ಎಂಇಎಸ್ ಪುಂಡರು ತೀರ್ಮಾನ ಕೈಗೊಂಡಿದ್ದಾರೆ. ನಾಡದ್ರೋಹಿ ಎಂಇಎಸ್ ಪುಂಡರ ನಿರ್ಧಾರಕ್ಕೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Latest Videos

undefined

ಬೆಳಗಾವಿ: ಕನ್ನಡಿಗರ ಕಿಡಿಗೆ ಬೆಚ್ಚಿದ ಎಂಇಎಸ್‌ ಪುಂಡರು ಮಹಾರಾಷ್ಟ್ರಕ್ಕೆ ಪಲಾಯನ..!

ಮಹಾಮೇಳಾವ್ ಯಶಸ್ವಿಗಾಗಿ ಬೆಳಗಾವಿ ಮತ್ತು ಖಾನಾಪುರದಲ್ಲಿ ಸಮಿತಿ ರಚನೆಗೆ ನಾಡದ್ರೋಹಿಗಳು ಮುಂದಾಗಿದ್ದಾರೆ. ಮಹಾಮೇಳಾವ್ ನಡೆಸುವ ವಿಷಯವನ್ನು ಮಹಾರಾಷ್ಟ್ರ ಸರ್ಕಾರ, ಸಚಿವರ ಗಮನಕ್ಕೆ ತರಲು ನಿರ್ಧರಿಸಿದ್ದಾರೆ. ಮಹಾಮೇಳಾವ್‌ಗೆ ಮಹಾರಾಷ್ಟ್ರದ ನಾಯಕರನ್ನ ಕರ್ನಾಟಕಕ್ಕೆ ಆಹ್ವಾನ ನೀಡಲಿದ್ದಾರೆ ಎಂಇಎಸ್ ಪುಂಡರು.. 

ಈ ಮೂಳಕ ಮತ್ತೊಮ್ಮೆ ಕರ್ನಾಟಕ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮಹಾರಾಷ್ಟ್ರ ಏಕೀಕರಣ ಸಮಿತಿ ಮುಂದಾಗಿದೆ.  ಪ್ರತಿ ವರ್ಷ ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನ ಪ್ರತಿಯಾಗಿ ಎಂಇಎಸ್‌ ಪುಂಡರು ಮಹಾಮೇಳಾವ್ ನಡೆಸುತ್ತಾರೆ.  

ಕಳೆದ ವರ್ಷ ಮಹಾಮೇಳಾವ್‌ಗೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿತ್ತು. ನಾಡದ್ರೋಹಿಗಳು ಪದೇ ಪದೇ ಗಡಿ ವಿವಾದ ಕೆದಕುತ್ತಿದ್ದಾರೆ. ಕನ್ನಡ ಮತ್ತು ಮರಾಠಿ ಜನರ ನಡುವೆ ಪದೇ ಪದೇ ಭಾಷಾ ಕಿಡಿ ಹೊತ್ತಿಸಲು ಯತ್ನ ನಡೆಸುತ್ತಿದ್ದಾರೆ. ಮಹಾಮೇಳಾವ್ ನಡೆಸುವ ಎಂಇಎಸ್ ನಿರ್ಧಾರಕ್ಕೆ ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ. 

click me!