ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಿನಿ ವಿಮಾನ ನಿಲ್ದಾಣ ಸ್ಥಾಪನೆಗೆ ನಾಗರಿಕ ವಿಮಾನಯಾನ ಪ್ರಾಧಿಕಾರದಿಂದ ಗ್ರೀನ್ ಸಿಗ್ನಲ್ ದೊರೆಯುವುದರೊಂದಿಗೆ ಜಿಲ್ಲೆ ಭಾರತೀಯ ವಿಮಾನಯಾನ ಸಂಸ್ಥೆಯ ಕಾಯ್ದಿರಿಸಿದ ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.
ಮಡಿಕೇರಿ(ಡಿ.23): ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಿನಿ ವಿಮಾನ ನಿಲ್ದಾಣ ಸ್ಥಾಪನೆಗೆ ನಾಗರಿಕ ವಿಮಾನಯಾನ ಪ್ರಾಧಿಕಾರದಿಂದ ಗ್ರೀನ್ ಸಿಗ್ನಲ್ ದೊರೆಯುವುದರೊಂದಿಗೆ ಜಿಲ್ಲೆ ಭಾರತೀಯ ವಿಮಾನಯಾನ ಸಂಸ್ಥೆಯ ಕಾಯ್ದಿರಿಸಿದ ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.
ನಾಗರಿಕ ವಿಮಾನಯಾನ ಸಂಸ್ಥೆ ನವೆಂಬರ್‌ನಲ್ಲಿ ಹೊರಡಿಸಿರುವ ಪ್ರಕಟಣೆಯಲ್ಲಿ ರಾಜ್ಯದ ಉದ್ದೇಶಿತ ನಿಲ್ದಾಣಗಳ ಪೈಕಿ ಪ್ರಾಧಾನ್ಯತೆ ಹೊರತುಪಡಿಸಿದ ಇತರೆ ನಿಲ್ದಾಣಗಳ ಪಟ್ಟಿಯಲ್ಲಿ ಕುಶಾಲನಗರ ಸ್ಥಾನ ಪಡೆದುಕೊಂಡಿದೆ. ಉಡಾನ್ ಯೋಜನೆ ಮೂಲಕ ಕೂಡಿಗೆಯಲ್ಲಿ 20 ಆಸನಗಳ ವಿಮಾನ ಯಾನ ಸೇವೆ ಆರಂಭಿಸುವ ಉದ್ದೇಶವನ್ನು ಎಎಐ ಹೊಂದಿರುವ ಮಾಹಿತಿ ಹೊರಬಿದ್ದಿದೆ.
ಮಂಗಳೂರು ಗಲಭೆ: 148 ಮಂದಿ ವಿರುದ್ಧ FIR
ಜಿಲ್ಲೆಯಲ್ಲಿ ಮಿನಿ ವಿಮಾನ ನಿಲ್ದಾಣ ಕಾರ್ಯಗತಗೊಳಿಸಲು ಮುಂಚೂಣಿಯಲ್ಲಿ ಶ್ರಮಿಸುತ್ತಿರುವ ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚು ರಂಜನ್ ಈ ಮಾಹಿತಿಯನ್ನು ಕನ್ನಡಪ್ರಭಕ್ಕೆ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮಿನಿ ವಿಮಾನ ನಿಲ್ದಾಣ ಪ್ರಾರಂಭಿಸುವ ನಿಟ್ಟಿನಲ್ಲಿ ನಾಗರಿಕ ವಿಮಾನ ಯಾನ ಇಲಾಖೆ ಅಧಿಕಾರಿಗಳ ತಂಡ ಜೆಲ್ಲೆಯ ಕೆಲವು ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಅದರಂತೆ ಕುಶಾಲನಗರ ಸಮೀಪದ ಕೂಡಿಗೆ ಕೃಷಿ ಕ್ಷೇತ್ರದ ಜಾಗವನ್ನು ಮೂರು ಬಾರಿ ಪರಿಶೀಲಿಸಿ ಅಗತ್ಯ ಮಾಹಿತಿ ಕಲೆ ಹಾಕಿದ್ದರು. ಈಗ ಕೂಡಿಗೆ ಪ್ರದೇಶ ವಿಮಾನ ನಿಲ್ದಾಣ ಸ್ಥಾಪನೆಗೆ ಸೂಕ್ತವಾಗಿದೆ ಎಂಬ ಅಂಶ ದೃಢಪಟ್ಟಿದೆ ಎಂದು ರಂಜನ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಂಬಂಧಪಟ್ಟಇಲಾಖೆಯ ಎಂಜಿನಿಯರ್ ಮೂಲಕ ಸರ್ವೆ ಕಾರ್ಯ ನಡೆಸಿ ಆರು ತಿಂಗಳ ಅವಧಿಯಲ್ಲಿ ಮಿನಿ ವಿಮಾನ ನಿಲ್ದಾಣದ ಆರಂಭಿಸಲು ಎಲ್ಲ ರೀತಿಯ ಕ್ರಮಕೈಗೊಳ್ಳಲಾಗುವುದು. ಅಲ್ಲದೆ ಈ ಬಾರಿಯ ವಿಧಾನಸಭಾ ಆಧಿವೇಶನದಲ್ಲಿ ಚರ್ಚಿಸಿ ಅನುದಾನ ಬಿಡುಗಡೆ ಮಾಡಲು ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮಂಗಳೂರು: 'ಸತ್ತವರ ಮನೆಗೆ ಭೇಟಿ ನೀಡದ ಉಸ್ತುವಾರಿ ಸಚಿವ, ಶಾಸಕ'..!
ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಿನಿ ವಿಮಾನ ನಿಲ್ದಾಣ ಆಗುವ ಮೂಲಕ ಪ್ರವಾಸೋದ್ಯಕ್ಕೆ ಹೆಚ್ಚಿನ ಒತ್ತು ದೊರಕಿದಂತಾಗಿದೆ ಎಂದು ಕೊಡಗು ಜಿಲ್ಲಾ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ಪ್ರಮುಖರಾದ ಕೆ.ಕೆ.ಭಾಸ್ಕರ್ ಪ್ರತಿಕ್ರಿಯಿಸಿದ್ದಾರೆ. ಈಗಾಗಲೆ ನೆರೆಯ ಮಟ್ಟನ್ನೂರು ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಯಾಗಿದ್ದು ಕೊಡಗಿನ ಮಿನಿ ವಿಮಾನ ನಿಲ್ದಾಣ ಇದಕ್ಕೆ ಪೂರಕವಾಗಿ ಕೆಲಸ ನಿರ್ವಹಿಸಿದಲ್ಲಿ ಕೊಡಗು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಪ್ರವಾಸೋದ್ಯಮ ಶೀಘ್ರವಾಗಿ ಬೆಳವಣಿಗೆ ಕಾಣಲಿದೆ ಎಂದಿದ್ದಾರೆ.