Students Protest: ಕಾಲೇಜು ಬಳಿ ಗಣಿಗಾರಿಕೆ: ಬೀದಿಗಿಳಿದ ವಿದ್ಯಾರ್ಥಿಗಳು

By Suvarna NewsFirst Published Mar 18, 2022, 4:26 PM IST
Highlights

ಕಾಲೇಜು ಕ್ಯಾಂಪಸ್ ಬಳಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ವಿರುದ್ಧ ಕಾಲೇಜು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ ಪರಿಣಾಮ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಠಾಣಾ ವ್ಯಾಪ್ತಿಯ ಇನೋಳಿ ಎಂಬಲ್ಲಿ ನಡೆದಿದೆ.

ಭರತ್ ರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ಮಂಗಳೂರು

ಮಂಗಳೂರು (ಮಾ.18): ಕಾಲೇಜು ಕ್ಯಾಂಪಸ್ (College campus) ಬಳಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ (Mining) ವಿರುದ್ಧ ಕಾಲೇಜು ವಿದ್ಯಾರ್ಥಿಗಳು (College Students) ಬೀದಿಗಿಳಿದು ಪ್ರತಿಭಟನೆ (Protest) ನಡೆಸಿದ ಪರಿಣಾಮ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಘಟನೆ ಮಂಗಳೂರು (Mangaluru) ಹೊರವಲಯದ ಕೊಣಾಜೆ ಠಾಣಾ ವ್ಯಾಪ್ತಿಯ ಇನೋಳಿ ಎಂಬಲ್ಲಿ ನಡೆದಿದೆ.

Latest Videos

ಇನೋಳಿಯಲ್ಲಿರುವ ಬ್ಯಾರೀಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಸಮೀಪವೇ ಕೆಂಪು ಕಲ್ಲು ಗಣಿಗಾರಿಕೆ ಹಲವು ವರುಷಗಳಿಂದ ನಡೆಯುತ್ತಿದ್ದು, ಕಾಲೇಜು ತರಗತಿಗಳಿಗೆ ಭಾರೀ ಅಡಚಣೆಯಾಗುತ್ತಿದೆ ಅನ್ನೋದಾಗಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದರು. ಅಲ್ಲದೇ ವಿಪರೀತ ವಾಯು ಹಾಗೂ ಶಬ್ದ ಮಾಲಿನ್ಯದಿಂದ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುತ್ತಿರುವುದಾಗಿ ವಿದ್ಯಾರ್ಥಿಗಳು ದೂರಿದ್ದಾರೆ. 

Holi Festival: ಗುಮ್ಮಟನಗರಿ ವಿಜಯಪುರದಲ್ಲಿ ಹೋಳಿ ಬಣ್ಣದಾಟದ ಸಂಭ್ರಮ..!

ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳೂ ಹಾಜರಿದ್ದು, ಬೆಂಬಲಿಸಿದರು. ಕೃಷಿ ಭೂಮಿ ಹೆಸರಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಈ ಕುರಿತು ನಾವು ಈ ಹಿಂದೆಯೇ ಜಿಲ್ಲಾಧಿಕಾರಿ ಸಹಿತ ಹಲವು ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ, ಇದುವರೆಗೂ ಯಾರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದರಿಂದಾಗಿ ಸಂಸ್ಥೆಯಲ್ಲಿ ಕಲಿಯುತ್ತಿರುವ ನೂರಾರು ಮಕ್ಕಳಿಗೆ ಅನ್ಯಾಯವಾಗುತ್ತಿದೆ ಎನ್ನುವುದು ವಿದ್ಯಾರ್ಥಿಗಳ ಆರೋಪ.

Hubballi: ಇನೋವಾ ಕಾರು ಪಲ್ಟಿಯಾಗಿ ಇಬ್ಬರು ಸಾವು: ನಾಲ್ವರು ಗಂಭೀರ ಗಾಯ

ಕೋರೆ ಕಾರ್ಮಿಕರ ಜಮಾವಣೆ: ಉದ್ವಿಗ್ನ ಸ್ಥಿತಿ: ವಿದ್ಯಾರ್ಥಿಗಳು ಕಲ್ಲು ಗಣಿಗಾರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಸುದ್ದಿ ಗೊತ್ತಾಗುತ್ತಿದ್ದಂತೆ ಸ್ಥಳೀಯ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಮಾಲಕರು ತಮ್ಮ ಕಾರ್ಮಿಕರು ಜೊತೆಗೂಡಿ, ಕಾಲೇಜು ಮುಂಭಾಗದ ರಸ್ತೆಯಲ್ಲಿ ಜಮಾವಣೆಗೊಂಡು ರಸ್ತೆಯಲ್ಲಿ ಕೂತು ಘೋಷಣೆ ಕೂಗುತ್ತಾ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣಕ್ಕೂ ಕಾರಣರಾದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಕಲ್ಲು ಕೋರೆಯ ಮಾಲಿಕರನ್ನು ಸಮಾಧಾನಪಡಿಸಿದರು. ಕಲ್ಲು ಕೋರೆ ಮಾಲೀಕರು ತಮ್ಮದು ಅಧಿಕೃತ ಕೋರೆ ಎಂದು ವಾದಿಸುತ್ತಿದ್ದು, ಇದರಿಂದ ಘಟನಾ ಸ್ಥಳದಲ್ಲಿ ಕೆಲ ಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು. ಬಳಿಕ ಕೊಣಾಜೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.

click me!