ಈ ಸರ್ಕಾರ ಯಾವಾಗ ಇರುತ್ತೋ ಹೋಗುತ್ತೋ ಗೊತ್ತಿಲ್ಲ: ಸಚಿವ ಆನಂದ ಸಿಂಗ್‌ ಸ್ಪಷ್ಟೀಕರಣ

Suvarna News   | Asianet News
Published : Oct 04, 2020, 11:00 AM ISTUpdated : Oct 04, 2020, 01:25 PM IST
ಈ ಸರ್ಕಾರ ಯಾವಾಗ ಇರುತ್ತೋ ಹೋಗುತ್ತೋ ಗೊತ್ತಿಲ್ಲ: ಸಚಿವ ಆನಂದ ಸಿಂಗ್‌ ಸ್ಪಷ್ಟೀಕರಣ

ಸಾರಾಂಶ

ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಇಲಾಖೆಯ ಅಭಿವೃದ್ಧಿಯ ಜೊತೆಗೆ ಕ್ಷೇತ್ರ ಹಾಗೂ ಕ್ಷೇತ್ರದ ಜನರ ಹಿತಾಸಕ್ತಿಗಳನ್ನು ಯಾವಾಗಲೂ ಜನಪ್ರತಿನಿಧಿಗಳಾದ ನಾವು ಕಾಪಾಡಬೇಕು ಎಂಬರ್ಥದಲ್ಲಿ ಹೇಳಿದ್ದೇನೆ: ಆನಂದ ಸಿಂಗ್‌

ಬಳ್ಳಾರಿ(ಅ.04): ಈ ಸರ್ಕಾರ ಯಾವಾಗ ಇರುತ್ತೋ ಹೋಗುತ್ತೋ ಗೊತ್ತಿಲ್ಲ ಎಂದು ನಾನು ಹೇಳಿಲ್ಲ. ಮಾಧ್ಯಮದಲ್ಲಿ ನನ್ನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗಿದೆ. ಸರ್ಕಾರಗಳು ಬರುತ್ತೇವೆ ಹೋಗುತ್ತವೆ. ಅಭಿವೃದ್ಧಿ ಜೊತೆಗೆ ನನಗೆ ನನ್ನ ಕ್ಷೇತ್ರದ ಅಭಿವೃದ್ಧಿ ಜನರ ಹಿತಾಸಕ್ತಿ ಮುಖ್ಯ ಎಂದಿದ್ದೇನೆ ಎಂದು ಅರಣ್ಯ ಸಚಿವ ಅನಂದ ಸಿಂಗ್‌ ಸ್ಪಷ್ಟಪಡಿಸಿದ್ದಾರೆ. 

ಇಂದು(ಭಾನುವಾರ) ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು, ನಾನು ನಾನು ಈ ಇಲಾಖೆಯಲ್ಲಿ ಎಷ್ಟು ದಿವಸ ಇರುತ್ತೇನೋ, ಇಲ್ಲವೋ? ಎಂಬುದು ನನಗೆ ತಿಳಿದಿಲ್ಲ, ಕ್ಷೇತ್ರದಲ್ಲಿ ಆಯೋಜನೆಯಾದ ಇಲಾಖೆಯ ಮೊದಲ ಕಾರ್ಯಕ್ರಮವಾಗಿದ್ದರಿಂದ ಬೆಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸದೇ ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸಿದ್ದೇನೆ ಎಂದು ಹೇಳಿಕೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

"

ಈ ಸರ್ಕಾರಗಳು ಯಾವಾಗ ಇರುತ್ತೋ, ಯಾವಾಗ ಹೋಗುತ್ತೋ ಗೊತ್ತಿಲ್ಲ: ಹೊಸ ಬಾಂಬ್ ಸಿಡಿಸಿದ ಸಚಿವ

ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಇಲಾಖೆಯ ಅಭಿವೃದ್ಧಿಯ ಜೊತೆಗೆ ಕ್ಷೇತ್ರ ಹಾಗೂ ಕ್ಷೇತ್ರದ ಜನರ ಹಿತಾಸಕ್ತಿಗಳನ್ನು ಯಾವಾಗಲೂ ಜನಪ್ರತಿನಿಧಿಗಳಾದ ನಾವು ಕಾಪಾಡಬೇಕು ಎಂಬರ್ಥದಲ್ಲಿ ಹೇಳಿದ್ದು. ನಮ್ಮ ಸರ್ಕಾರ ಪೂರ್ಣ ಅವಧಿ ಮುಗಿಸಿ, ಮುಂದಿನ ಬಾರಿಯೂ ಸಹ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂಬುದನ್ನು ನಾನು ಮಾಧ್ಯಮ ಮಿತ್ರರಿಗೆ ಹಾಗೂ ರಾಜ್ಯದ ಜನತೆಗೆ ಸ್ಪಷ್ಟೀಕರಣ ನೀಡಬಯಸುತ್ತೇನೆ ಎಂದು ತಿಳಿಸಿದ್ದಾರೆ. 

"

PREV
click me!

Recommended Stories

ಪರಿಷತ್ತಿನಲ್ಲಿ ಬಸವರಾಜ ಹೊರಟ್ಟಿ ಬದಲಾವಣೆ ಇಲ್ಲ, ಈ ಕುರಿತು ಚರ್ಚೆ ಆಗಿಲ್ಲ: ಸಲೀಂ ಅಹ್ಮದ್
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು