ರಾಯಚೂರು (ಸೆ.22) : ಜಿಲ್ಲೆಯ ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ ಎಂಬ ಘೋಷ ವಾಕ್ಯದಡಿ ಆಯೋಜಿಸಿರುವ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದಡಿಯಲ್ಲಿ ಜಿಲ್ಲೆ ದೇವದುರ್ಗ ತಾಲೂಕಿನ ಅರಕೇರಾ ಗ್ರಾಮದಲ್ಲಿ ಅ.15 ರಂದು ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಹೂಡಲಿದ್ದು, ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
NewsHour ಸದನದಲ್ಲಿ ಸಿದ್ದರಾಮಯ್ಯ ಮೇಷ್ಟ್ರ ವ್ಯಾಕರಣ ಪಾಠ, ನಮ್ ಕಡೆ ಹಿಂಗೆ ಎಂದ ಆರ್ ಅಶೋಕ್!
ನಗರದ ಡಿಸಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ ನಡೆಸಿ ಮಾತನಾಡಿ ಅವರು, ಅಂದು ಬೆಳಗ್ಗೆ 10 ರಿಂದ ಸಂಜೆ 5ಗಂಟೆವರೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದು, ಕೂಡಲೇ ಅರಕೇರಾ ಗ್ರಾಮದಲ್ಲಿ ಮೂಲಭೂತ ಸಮಸ್ಯೆಗಳಾದ ಕುಡಿಯುವ ನೀರಿನ ಸಮಸ್ಯೆ, ಸಮುದಾಯ ಭವನ, ಅಂಗನವಾಡಿ ಕಟ್ಟಡ ಸೇರಿದಂತೆ ಇತರೆ ಸಮಸ್ಯೆಗಳನ್ನು ಆಲಿಸಬೇಕೆಂದು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಅಂದು ಅರಕೇರಾದಲ್ಲಿ ಸಚಿವರ ವಾಸ್ತವ್ಯ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳು ತಮ್ಮ ಯೋಜನೆಗಳ ಬಗ್ಗೆ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಳಿಗೆಗಳನ್ನು ಆರಂಭಿಸಿ ಸಾರ್ವಜನಿಕರಲ್ಲಿ ಸರ್ಕಾರದ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಿಬೇಕು ಎಂದು ಸೂಚನೆ ನೀಡಿದರು.
ಗ್ರಾಮ ವಾಸ್ತವ್ಯದಲ್ಲಿ ಗ್ರಾಮದ ಪಹಣಿಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದು. ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ 9ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮವಹಿಸುವುದು. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸುವುದು ಮತ್ತು ಬಿಟ್ಟು ಹೋದಂತಹ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡುವುದು. ಆಧಾರ್ ಕಾರ್ಡ್ ಅನೂಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು. ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು. ಮತದಾರರ ಪಟ್ಟಿಪರಿಷ್ಕರಣೆ ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಹೇಳಿದರು.
ಗ್ರಾಮ ವಾಸ್ತವ್ಯದಲ್ಲಿ ಶಾಸಕರ ಹಾಜರಿ ಕಡ್ಡಾಯ?: ಸಚಿವ ಅಶೋಕ್
ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಠಿಸಿ:
ಕಂದಾಯ ಸಚಿವರ ಭೇಟಿ ಹಿನ್ನಲೆಯಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿ ಬೀಡು ಬಿಟ್ಟು ಸರಿಯಾದ ವ್ಯವಸ್ಥೆಯನ್ನು ಕೈಗೊಂಡು ಗ್ರಾಮದಲ್ಲಿ ಹಬ್ಬದ ವಾತಾವರಣವನ್ನು ಅಧಿಕಾರಿಗಳು ನಿರ್ಮಾಣ ಮಾಡಬೇಕು. ಗ್ರಾಮಸ್ಥರು ಹಾಗೂ ಹೆಣ್ಣು ಮಕ್ಕಳು ಪೂರ್ಣ ಕುಂಭದೊಂದಿಗೆ ಸಚಿವರನ್ನು ಬರ ಮಾಡಿಕೊಳ್ಳುವರು. ಸಚಿವರು ಜನರ ಕುಂದು-ಕೊರತೆಗಳನ್ನು ಆಲಿಸಲಿದ್ದಾರೆ. ಸಲ್ಲಿಕೆಯಾದ ಅರ್ಜಿಗಳಲ್ಲಿ ಶೇ.100ರಷ್ಟುವಿಲೇವಾರಿ ಮಾಡಲು ಅಗತ್ಯ ಕ್ರಮ ವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.