ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

Published : Aug 20, 2019, 08:08 PM IST
ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಸಾರಾಂಶ

ಮೊದಲ ಹಂತದಲ್ಲಿ ಸಚಿವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ತಮಗೂ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇಟ್ಟುಕೊಂಡ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅತ್ತ ಪ್ರಮಾಣ ವಚನ ಕಾರ್ಯಕ್ರಮ ನಡೆಯುತ್ತಿದ್ದರೆ ಇತ್ತ ಕೆಲ ಜಿಲ್ಲೆಗಳಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು/ಚಿತ್ರದುರ್ಗ/ಚಿಕ್ಕಮಗಳೂರು, [ಆ.20]:  ಕೊನೆಯ ಕ್ಷಣದವರೆಗೂ ಸಚಿವರು ಯಾರಾಗಲಿದ್ದಾರೆ ಎಂಬುದು ರಹಸ್ಯವಾಗೇ ಉಳಿದಿತ್ತು. ಆದರೀಗ ಇದಕ್ಕೆ ತೆರೆ ಬಿದ್ದಿದ್ದು, ಸಚಿವರು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ಪ್ರಮಾಣ ವಚನ: ಸಿಎಂ ಯಡಿಯೂರಪ್ಪ ಸಂಪುಟ ಸೇರಿದ ಸಚಿವರಿವರು!

ಇಂದು [ಮಂಗಳವಾರ] ಯಡಿಯೂರಪ್ಪ ನೇತೃತ್ವ ಸರ್ಕಾರದ ಸಚಿವ ಸಂಪುಟ ರಚನೆಯಾಗಿದ್ದು, 17 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಮೊದಲ ಹಂತದಲ್ಲಿ ಸಚಿವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ತಮಗೂ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇಟ್ಟುಕೊಂಡ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅತ್ತ ಪ್ರಮಾಣ ವಚನ ಕಾರ್ಯಕ್ರಮ ನಡೆಯುತ್ತಿದ್ದರೆ ಇತ್ತ ಕೆಲ ಜಿಲ್ಲೆಗಳಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಬಿಎಸ್‌ವೈ ಸೇನೆ: ಯಾವ ಜಿಲ್ಲೆಗೆ ದಕ್ಕಿಲ್ಲ ಮಂತ್ರಿ ಭಾಗ್ಯ?

ಚಿತ್ರದುರ್ಗದಲ್ಲಿ 6 ಬಾರಿ ಗೆದ್ದಿರುವ ತಿಪ್ಪರೆಡ್ಡಿ ಬೆಂಬಲಿಗರು ಟೈರ್ ಸುಟ್ಟು ಪ್ರತಿಭಟನೆ ಮಾಡಿದರು. ಇನ್ನು ಹೊಸದುರ್ಗಾದಲ್ಲಿ ಗೂಳಿಹಟ್ಟಿ ಶೇಖರ್, ಮೂಡಿಗೆರೆಯಲ್ಲಿ ಎಂ.ಪಿ.ಕುಮಾರಸ್ವಾಮಿ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿ, ಬಿಜೆಪಿ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಯಾವ ರೀತಿಯಾಗಿ ಪ್ರತಿಭಟನೆ ಮಾಡಿದ್ದಾರೆ ಎನ್ನುವುದನ್ನು ಈ ಕೆಳಗೆ ಇರುವ ವಿಡಿಯೊಗಳಲ್ಲಿ ನೋಡಿ

"

"

"

"

"

PREV
click me!

Recommended Stories

ತಂತ್ರಜ್ಞಾನದ ನೆರವಿನಿಂದ ಜೈಲುಗಳಲ್ಲಿ ಸುಧಾರಣೆ ತರಲು ಅಲೋಕ್ ಕುಮಾರ್ ನೇತೃತ್ವ
ವಿಂಡ್ ಫ್ಯಾನ್‌ಗಳಿಂದ ಪಕ್ಷಿಗಳ ವಾಸಸ್ಥಾನಕ್ಕೆ ಕುತ್ತು, ಮರೆಯಾದ ಹಕ್ಕಿಗಳ ಕಲರವ!