ಬಿಜೆಪಿ ನಂಬಿಕೆ ದ್ರೋಹ ಮಾಡುವುದಿಲ್ಲ| ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ| ಎಂಟಿಬಿ, ವಿಶ್ವನಾಥ್, ಆರ್. ಶಂಕರ ಅವರಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ| ಯಾರಿಗೂ ಅನ್ಯಾಯ ಮಾಡದೆ ಒಳ್ಳೆಯ ನಿರ್ಧಾರ ಕೈಗೊಳ್ಳಲಿದೆ ಎಂದು ವಿಶ್ವಾಸವಿದೆ|
ಕೊಪ್ಪಳ(ಜೂ.15): ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣರಾದವರಿಗೆ ವಿಧಾನ ಪರಿಷತ್ತಿಗೆ ಆಯ್ಕೆ ಮಾಡುವಂತೆ ವರಿಷ್ಠರಿಗೆ, ಮುಖ್ಯಮಂತ್ರಿಗೆ ಒತ್ತಾಯಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಕೊಟ್ಟು ಅವರನ್ನು ಗೌರವಿಸಬೇಕು ಎನ್ನುವ ಆಶಯ ನಮ್ಮದಾಗಿದೆ. ಬಿಜೆಪಿಯಲ್ಲಿ ಪಕ್ಷಕ್ಕೆ ಶ್ರಮಿಸಿದವರಿಗೆ ಆದ್ಯತೆ ನೀಡುವುದು ಮೊದಲಿನಿಂದಲೂ ಇದೆ. ಹೀಗಾಗಿ ಯಾರಿಗೂ ಅನ್ಯಾಯ ಮಾಡದೆ ಒಳ್ಳೆಯ ನಿರ್ಧಾರ ಕೈಗೊಳ್ಳಲಿದೆ ಎಂದು ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಕೊರೋನಾ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ
ಬಿಜೆಪಿ ನಂಬಿಕೆ ದ್ರೋಹ ಮಾಡುವುದಿಲ್ಲ. ಯಡಿಯೂರಪ್ಪ ಅವರು ಕೊಟ್ಟಮಾತಿನಂತೆ ನಡೆದುಕೊಳ್ಳುತ್ತಾರೆ. ಎಂಟಿಬಿ, ವಿಶ್ವನಾಥ್, ಆರ್. ಶಂಕರ ಅವರಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದರು. ಈ ವೇಳೆ ಡಿಸಿಎಂ ಗೋವಿಂದ ಕಾರಜೋಳ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೇಸೂಗೂರು ಇದ್ದರು.